ICC World Cup 2023: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ, ಭಾರತಕ್ಕೆ ಯಾರು ಎದುರಾಳಿಗಳು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಬೆಂಗಳೂರು: ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ಟೂರ್ನಿಗೆ (ICC World Cup 2023) ದಿನಗಣನೆ ಆರಂಭವಾಗಿದ್ದು, ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟಗೊಂಡಿದೆ.

1983 ಮತ್ತು 2011ರ ಚಾಂಪಿಯನ್ ಭಾರತ ತಂಡ ಎರಡು ಅಭ್ಯಾಸ ಪಂದ್ಯಗಳನ್ನಾಡಲಿದೆ. ಸೆಪ್ಟೆಂಬರ್ 30ರಂದು ಗುವಾಹಟಿಯಲ್ಲಿ ನಡೆಯಲಿರುವ ಅಭ್ಯಾಸ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗ, ವಿಶ್ವ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 3ರಂದು ಕೇರಳದ ತಿರುವನಂತಪುರಂನಲ್ಲಿ ನಡೆಯಲಿರುವ 2ನೇ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ನೆದರ್ಲೆಂಡ್ಸ್ ತಂಡವನ್ನು ಎದುರಿಸಲಿದೆ.

ಐಸಿಸಿ ವಿಶ್ವಕಪ್ ಟೂರ್ನಿ ಅಕ್ಟೋಬರ್ 5ರಂದು ಅಹ್ಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ಕಳೆದ ಬಾರಿಯ ರನ್ನರ್ಸ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಅಕ್ಟೋಬರ್ 15ರಂದು ನಡೆಯುವ ಭಾರತ ಮತ್ತು ಪಾಕಿಸ್ತಾನ (India Vs Pakistan) ಪಂದ್ಯಕ್ಕೂ ಅಹ್ಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣವೇ ಆತಿಥ್ಯ ವಹಿಸಲಿದೆ. ಅಕ್ಟೋಬರ್ 8ರದು ಆಸ್ಟ್ರೇಲಿಯಾ ವಿರುದ್ಧ ಚೆನ್ನೈನಲ್ಲಿ ನಡೆಯುವ ಪಂದ್ಯದ ಮೂಲಕ 2 ಬಾರಿಯ ಚಾಂಪಿಯನ್ ಭಾರತ ತಂಡದ ವಿಶ್ವಕಪ್ ಅಭಿಯಾನ ಆರಂಭವಾಗಲಿದೆ.

ಐಸಿಸಿ ವಿಶ್ವಕಪ್ 2023: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ (ICC Cricket World Cup 2023: Warm-Up Matches Schedule)

ಸೆಪ್ಟೆಂಬರ್ 29
ಬಾಂಗ್ಲಾದೇಶ Vs ಶ್ರೀಲಂಕಾ (ಗುವಾಹಟಿ, ಮಧ್ಯಾಹ್ನ 2ಕ್ಕೆ)
ದಕ್ಷಿಣ ಆಫ್ರಿಕಾ Vs ಅಫ್ಘಾನಿಸ್ತಾನ (ತಿರುವನಂತಪುರಂ, ಮಧ್ಯಾಹ್ನ 2ಕ್ಕೆ)
ನ್ಯೂಜಿಲೆಂಡ್ Vs ಪಾಕಿಸ್ತಾನ (ಹೈದರಾಬಾದ್, ಮಧ್ಯಾಹ್ನ 2ಕ್ಕೆ)

ಸೆಪ್ಟೆಂಬರ್ 30
ಭಾರತ Vs ಇಂಗ್ಲೆಂಡ್ (ಗುವಾಹಟಿ, ಮಧ್ಯಾಹ್ನ 2ಕ್ಕೆ)
ಆಸ್ಟ್ರೇಲಿಯಾ Vs ನೆದರ್ಲೆಂಡ್ಸ್ (ತಿರುವನಂತಪುರಂ, ಮಧ್ಯಾಹ್ನ 2ಕ್ಕೆ)

ಅಕ್ಟೋಬರ್ 3
ಅಫ್ಘಾನಿಸ್ತಾನ Vs ಶ್ರೀಲಂಕಾ (ಗುವಾಹಟಿ, ಮಧ್ಯಾಹ್ನ 2ಕ್ಕೆ)
ಭಾರತ Vs ನೆದರ್ಲೆಂಡ್ಸ್ (ತಿರುವನಂತಪುರಂ, ಮಧ್ಯಾಹ್ನ 2ಕ್ಕೆ)
ಆಸ್ಟ್ರೇಲಿಯಾ Vs ಪಾಕಿಸ್ತಾನ (ಹೈದಬಾದಾದ್, ಮಧ್ಯಾಹ್ನ 2ಕ್ಕೆ)

ವಿಶ್ವಕಪ್’ಗೆ ಆತಿಥ್ಯ ವಹಿಸಲಿರುವ ನಗರಗಳು:
ಬೆಂಗಳೂರು, ದೆಹಲಿ, ಮುಂಬೈ, ಅಹ್ಮದಾಬಾದ್, ಪುಣೆ, ಲಕ್ನೋ, ಹೈದರಾಬಾದ್, ಧರ್ಮಶಾಲಾ, ಚೆನ್ನೈ, ಕೋಲ್ಕತಾ.

ಇದನ್ನೂ ಓದಿ : Team India training camp begins : ಆಲೂರಿನಲ್ಲಿ ಟೀಮ್ ಇಂಡಿಯಾ ಏಷ್ಯಾ ಕಪ್ ಕ್ಯಾಂಪ್; ವಿರಾಟ್, ರೋಹಿತ್’ಗೆ ಇಂದು ಮೆಡಿಕಲ್ ಚೆಕಪ್!

ಐಸಿಸಿ ವಿಶ್ವಕಪ್ 2023: ಟೂರ್ನಿಯಲ್ಲಿ ಆಡಲಿರುವ ತಂಡಗಳು
ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ಇಂಗ್ಲೆಂಡ್, ಶ್ರೀಲಂಕಾ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ನೆದರ್ಲೆಂಡ್ಸ್.

ಐಸಿಸಿ ವಿಶ್ವಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ (ICC World Cup 2023 Schedule)
ಅಕ್ಟೋಬರ್ 5: ಇಂಗ್ಲೆಂಡ್ Vs ನ್ಯೂಜಿಲೆಂಡ್ (ಅಹ್ಮದಾಬಾದ್)
ಅಕ್ಟೋಬರ್ 6: ಪಾಕಿಸ್ತಾನ Vs ನೆದರ್ಲೆಂಡ್ಸ್ (ಹೈದರಾಬಾದ್)
ಅಕ್ಟೋಬರ್ 7: ಬಾಂಗ್ಲಾದೇಶ Vs ಅಫ್ಘಾನಿಸ್ತಾನ (ಧರ್ಮಶಾಲಾ)
ಅಕ್ಟೋಬರ್ 7: ದಕ್ಷಿಣ ಆಫ್ರಿಕಾ Vs ಶ್ರೀಲಂಕಾ (ದೆಹಲಿ)
ಅಕ್ಟೋಬರ್ 8: ಭಾರತ Vs ಆಸ್ಟ್ರೇಲಿಯಾ (ಚೆನ್ನೈ)
ಅಕ್ಟೋಬರ್ 9: ನ್ಯೂಜಿಲೆಂಡ್ Vs ನೆದರ್ಲೆಂಡ್ಸ್ (ಹೈದರಾಬಾದ್)
ಅಕ್ಟೋಬರ್ 10: ಇಂಗ್ಲೆಂಡ್ Vs ಬಾಂಗ್ಲಾದೇಶ (ಧರ್ಮಶಾಲಾ)
ಅಕ್ಟೋಬರ್ 11: ಭಾರತ Vs ಅಫ್ಘಾನಿಸ್ತಾನ (ದೆಹಲಿ)
ಅಕ್ಟೋಬರ್ 12: ಪಾಕಿಸ್ತಾನ Vs ಶ್ರೀಲಂಕಾ (ಹೈದರಾಬಾದ್)
ಅಕ್ಟೋಬರ್ 13: ಆಸ್ಟ್ರೇಲಿಯಾ Vs ದಕ್ಷಿಣ ಆಫ್ರಿಕಾ (ಲಕ್ನೋ)
ಅಕ್ಟೋಬರ್ 14: ಇಂಗ್ಲೆಂಡ್ Vs ಅಫ್ಘಾನಿಸ್ತಾನ (ದೆಹಲಿ)
ಅಕ್ಟೋಬರ್ 14: ಬಾಂಗ್ಲಾದೇಶ Vs ನ್ಯೂಜಿಲೆಂಡ್ (ಚೆನ್ನೈ)
ಅಕ್ಟೋಬರ್ 15: ಭಾರತ Vs ಪಾಕಿಸ್ತಾನ (ಅಹ್ಮದಾಬಾದ್)
ಅಕ್ಟೋಬರ್ 16: ಆಸ್ಟ್ರೇಲಿಯಾ Vs ಶ್ರೀಲಂಕಾ (ಲಕ್ನೋ)
ಅಕ್ಟೋಬರ್ 17: ದಕ್ಷಿಣ ಆಫ್ರಿಕಾ Vs ನೆದರ್ಲೆಂಡ್ಸ್ (ಧರ್ಮಶಾಲಾ)
ಅಕ್ಟೋಬರ್ 18: ಅಫ್ಘಾನಿಸ್ತಾನ Vs ನ್ಯೂಜಿಲೆಂಡ್ (ಚೆನ್ನೈ)
ಅಕ್ಟೋಬರ್ 19: ಭಾರತ Vs ಬಾಂಗ್ಲಾದೇಶ (ಪುಣೆ)
ಅಕ್ಟೋಬರ್ 20: ಆಸ್ಟ್ರೇಲಿಯಾ Vs ಪಾಕಿಸ್ತಾನ (ಬೆಂಗಳೂರು)
ಅಕ್ಟೋಬರ್ 21: ಇಂಗ್ಲೆಂಡ್ Vs ದಕ್ಷಿಣ ಆಫ್ರಿಕಾ (ಮುಂಬೈ)
ಅಕ್ಟೋಬರ್ 21: ನೆದರ್ಲೆಂಡ್ಸ್ Vs ಶ್ರೀಲಂಕಾ (ಲಕ್ನೋ)
ಅಕ್ಟೋಬರ್ 22: ಭಾರತ Vs ನ್ಯೂಜಿಲೆಂಡ್ (ಧರ್ಮಶಾಲಾ)
ಅಕ್ಟೋಬರ್ 23: ಪಾಕಿಸ್ತಾನ Vs ಅಫ್ಘಾನಿಸ್ತಾನ (ಚೆನ್ನೈ)
ಅಕ್ಟೋಬರ್ 24: ದಕ್ಷಿಣ ಆಫ್ರಿಕಾ Vs ಬಾಂಗ್ಲಾದೇಶ (ಮುಂಬೈ)
ಅಕ್ಟೋಬರ್ 25: ಆಸ್ಟ್ರೇಲಿಯಾ Vs ನೆದರ್ಲೆಂಡ್ಸ್ (ದೆಹಲಿ)
ಅಕ್ಟೋಬರ್ 26: ಇಂಗ್ಲೆಂಡ್ Vs ಶ್ರೀಲಂಕಾ (ಬೆಂಗಳೂರು)
ಅಕ್ಟೋಬರ್ 27: ಪಾಕಿಸ್ತಾನ Vs ದಕ್ಷಿಣ ಆಫ್ರಿಕಾ (ಚೆನ್ನೈ)
ಅಕ್ಟೋಬರ್ 28: ನೆದರ್ಲೆಂಡ್ಸ್ Vs ಬಾಂಗ್ಲಾದೇಶ (ಕೋಲ್ಕತಾ)
ಅಕ್ಟೋಬರ್ 28: ಆಸ್ಟ್ರೇಲಿಯಾ Vs ನ್ಯೂಜಿಲೆಂಡ್ (ಧರ್ಮಶಾಲಾ)
ಅಕ್ಟೋಬರ್ 29: ಭಾರತ Vs ಇಂಗ್ಲೆಂಡ್ (ಲಕ್ನೋ)
ಅಕ್ಟೋಬರ್ 30: ಅಫ್ಘಾನಿಸ್ತಾನ Vs ಶ್ರೀಲಂಕಾ (ಪುಣೆ)
ಅಕ್ಟೋಬರ್ 31: ಪಾಕಿಸ್ತಾನ Vs ಬಾಂಗ್ಲಾದೇಶ (ಕೋಲ್ಕತಾ)
ನವೆಂಬರ್ 1: ದಕ್ಷಿಣ ಆಫ್ರಿಕಾ Vs ನ್ಯೂಜಿಲೆಂಡ್ (ಪುಣೆ)
ನವೆಂಬರ್ 2: ಭಾರತ Vs ಶ್ರೀಲಂಕಾ (ಮುಂಬೈ)
ನವೆಂಬರ್ 3: ನೆದರ್ಲೆಂಡ್ಸ್ Vs ಅಫ್ಘಾನಿಸ್ತಾನ (ಲಕ್ನೋ)
ನವೆಂಬರ್ 4: ಇಂಗ್ಲೆಂಡ್ Vs ಆಸ್ಟ್ರೇಲಿಯಾ (ಅಹ್ಮದಾಬಾದ್)
ನವೆಂಬರ್ 4: ಪಾಕಿಸ್ತಾನ Vs ನ್ಯೂಜಿಲೆಂಡ್ (ಬೆಂಗಳೂರು)
ನವೆಂಬರ್ 5: ದಕ್ಷಿಣ ಆಫ್ರಿಕಾ Vs ಭಾರತ (ಕೋಲ್ಕತಾ)
ನವೆಂಬರ್ 6: ಬಾಂಗ್ಲಾದೇಶ Vs ಶ್ರೀಲಂಕಾ (ದೆಹಲಿ)
ನವೆಂಬರ್ 7: ಆಸ್ಟ್ರೇಲಿಯಾ Vs ಅಫ್ಘಾನಿಸ್ತಾನ (ಮುಂಬೈ)
ನವೆಂಬರ್ 8: ಇಂಗ್ಲೆಂಡ್ Vs ನೆದರ್ಲೆಂಡ್ಸ್ (ಪುಣೆ)
ನವೆಂಬರ್ 9: ನ್ಯೂಜಿಲೆಂಡ್ Vs ಶ್ರೀಲಂಕಾ (ಬೆಂಗಳೂರು)
ನವೆಂಬರ್ 10: ದಕ್ಷಿಣ ಆಫ್ರಿಕಾ Vs ಅಫ್ಘಾನಿಸ್ತಾನ (ಅಹ್ಮದಾಬಾದ್)
ನವೆಂಬರ್ 11: ಭಾರತ Vs ನೆದರ್ಲೆಂಡ್ಸ್ (ಬೆಂಗಳೂರು)
ನವೆಂಬರ್ 12: ಇಂಗ್ಲೆಂಡ್ Vs ಪಾಕಿಸ್ತಾನ (ಕೋಲ್ಕತಾ)
ನವೆಂಬರ್ 12: ಆಸ್ಟ್ರೇಲಿಯಾ Vs ಬಾಂಗ್ಲಾದೇಶ (ಪುಣೆ)
ನವೆಂಬರ್ 15: ಸೆಮಿಫೈನಲ್-1 (ಮುಂಬೈ)
ನವೆಂಬರ್ 16: ಸೆಮಿಫೈನಲ್-2 (ಕೋಲ್ಕತಾ)
ನವೆಂಬರ್ 19: ಫೈನಲ್ (ಅಹ್ಮದಾಬಾದ್)

ICC World Cup 2023: Schedule of warm-up matches announced, who are India’s opponents? Here are complete details

Comments are closed.