ಬೆಂಗಳೂರು: ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ (ICC World Cup 2023) ಟೂರ್ನಿಗೆ ತಂಡಗಳ ಪಟ್ಟಿ ಸಲ್ಲಿಸಲು ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (International Cricket Council – ICC) ಡೆಡ್ ಲೈನ್ ಫಿಕ್ಸ್ ಮಾಡಿದೆ.
ಈ ಬಾರಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಅಕ್ಟೋಬರ್ 5ರಂದು ಆರಂಭವಾಗಲಿದ್ದು, ನವೆಂಬರ್ 23ರಂದು ಫೈನಲ್ ಪಂದ್ಯ ನಡೆಯಲಿದೆ. ವಿಶ್ವಕಪ್ ಟೂರ್ನಿ ಆರಂಭಕ್ಕೂ 35 ದಿನಗಳ ಮೊದಲೇ ವಿಶ್ವಕಪ್‌ನಲ್ಲಿ ಆಡಲಿರುವ ತಂಡಗಳ ಆಟಗಾರರ ಪಟ್ಟಿಯನ್ನು ಎಲ್ಲಾ ಕ್ರಿಕೆಟ್ ಮಂಡಳಿಗಳು ಆಗಸ್ಟ್ 29ರೊಳಗೆ ಐಸಿಸಿಗೆ ಸಲ್ಲಿಸಬೇಕಿದೆ. ತಂಡಗಳ ಪಟ್ಟಿ ಸಲ್ಲಿಸಲು ಆಗಸ್ಟ್ 29ರ ಡೆಡ್‌ಲೈನ್ ಫಿಕ್ಸ್ ಮಾಡಿರುವುದರಿಂದ ಬಿಸಿಸಿಐಗೆ ನಿಜಕ್ಕೂ ದೊಡ್ಡ ಸವಾಲು ಎದುರಾಗಿದೆ. ವಿಶ್ವಕಪ್‌ನಲ್ಲಿ ಆಡಬೇಕಿರುವ ಭಾರತ ತಂಡದ ಕೆಲ ಪ್ರಮುಖ ಆಟಗಾರರು ಗಾಯದಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದಾರೆ.
ಏಕದಿನ ತಂಡದ ಮಧ್ಯಮ ಕ್ರಮಾಂಕದ ಆಧಾರಸ್ಥಂಭವಾಗಿರುವ ಕನ್ನಡಿಗ ಕೆ.ಎಲ್ ರಾಹುಲ್, ಬಲ ತೊಡೆಯ ಸ್ನಾಯು ಸೆಳೆತಕ್ಕೆ ಲಂಡನ್‌ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿ ಈಗಷ್ಟೇ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (National Cricket Academy – NCA) ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. 31 ವರ್ಷದ ಕೆ.ಎಲ್ ರಾಹುಲ್ ಕಳೆದ ಐಪಿಎಲ್ ಟೂರ್ನಿಯ ವೇಳೆ ಬಲತೊಡೆಯ ಸ್ನಾಯು ಸೆಳೆತಕ್ಕೊಳಗಾಗಿ ಐಪಿಎಲ್ ಟೂರ್ನಿಯಿಂದ ಅರ್ಧದಲ್ಲೇ ಹೊರ ಬಿದ್ದಿದ್ದರು. ನಂತರ ಇಂಗ್ಲೆಂಡ್‌ನಲ್ಲಿ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೂ ರಾಹುಲ್ ಅಲಭ್ಯರಾಗಿದ್ದರು. ವೆಸ್ಟ್ ಇಂಡೀಸ್ ಪ್ರವಾಸವನ್ನೂ ತಪ್ಪಿಸಿಕೊಂಡಿರುವ ರಾಹುಲ್ ಏಷ್ಯಾ ಕಪ್ ಟೂರ್ನಿಗೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಗುರಿ ಹೊಂದಿದ್ದಾರೆ.
ಇದನ್ನೂ ಓದಿ : KL Rahul – Asia Cup : ಕೆ.ಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಏಷ್ಯಾ ಕಪ್‌ನಲ್ಲೂ ಆಡುವುದು ಡೌಟ್!
ಇದನ್ನೂ ಓದಿ : KL Rahul Temple Visit : ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ
ಮಧ್ಯಮ ಕ್ರಮಾಂಕದ ಮತ್ತೊಬ್ಬ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಕೂಡ ಬೆನ್ನು ನೋವಿನಿಂದ ಚೇತರಿಸಿಕೊಳ್ಳುತ್ತಿದ್ದು, ಸದ್ಯ ಎನ್‌ಸಿಎನಲ್ಲಿದ್ದಾರೆ. ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಬೆನ್ನು ನೋವಿನಿಂದ ಚೇತರಿಸಿಕೊಳ್ಳುತ್ತಿದ್ದು, ಏಷ್ಯಾ ಕಪ್ ಟೂರ್ನಿಯ ವೇಳೆಗೆ ಭಾರತ ತಂಡಕ್ಕೆ ಮರಳುವ ಸಾಧ್ಯತೆಯಿದೆ. ಇನ್ನು ರಸ್ತೆ ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಸಾಧ್ಯತೆಗಳು ಕಡಿಮೆ. ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಜೂನ್ 27ರಂದು ಮುಂಬೈನಲ್ಲಿ ಪ್ರಕಟಿಸಲಿದೆ.
ICC World Cup 2023: Tension has started for ICC, BCCI after fixing the deadline to submit the list of teams.