ICC World Cup 2023 : ದೇಶಕ್ಕೆ 2 ವಿಶ್ವಕಪ್ ಗೆಲ್ಲಿಸಿಕೊಟ್ಟ ದಿಗ್ಗಜ ನಾಯಕ ಧೋನಿ ನಾಡಿನಲ್ಲಿ ಈ ಬಾರಿ ವಿಶ್ವಕಪ್ ಪಂದ್ಯಗಳೇ ಇಲ್ಲ!

ಬೆಂಗಳೂರು : (ICC World Cup 2023) ದೇಶಕ್ಕೆ ಎರಡು ವಿಶ್ವಕಪ್‌ಗಳನ್ನು ಗೆದ್ದುಕೊಟ್ಟಿರುವ ದಿಗ್ಗಜ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತವರು ರಾಜ್ಯಕ್ಕೆ ಈ ಬಾರಿ ವಿಶ್ವಕಪ್ ಪಂದ್ಯಗಳ ಆಯೋಜನೆಯ ಭಾಗ್ಯವಿಲ್ಲ. ಭಾರತದಲ್ಲಿ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ (ICC World Cup 2023) ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದೆ.

ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 5ರಂದು ನಡೆಯುವ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡದ ಕಳೆದ ಬಾರಿಯ ರನ್ನರ್ಸ್ ಅಪ್ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 15ರಂದು ನಡೆಯುವ ಭಾರತ ಮತ್ತು ಪಾಕಿಸ್ತಾನ (India Vs Pakistan) ಪಂದ್ಯಕ್ಕೂ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣವೇ ಆತಿಥ್ಯ ವಹಿಸಲಿದೆ.

ವಿಶ್ವಕಪ್ ಟೂರ್ನಿಗೆ ಭಾರತದ ಒಟ್ಟು10 ನಗರಗಳು ಆತಿಥ್ಯ ವಹಿಸಲಿವೆ. ಆದರೆ ಧೋನಿ ನಾಡು ರಾಂಚಿಗೆ ಒಂದೇ ಒಂದು ಪಂದ್ಯದ ಆತಿಥ್ಯ ಸಿಕ್ಕಿಲ್ಲ. ಧೋನಿ ನಾಯಕತ್ವದಲ್ಲಿ ಭಾರತ ತಂಡ 2007ರ ಐಸಿಸಿ ಟಿ20 ವಿಶ್ವಕಪ್ ಹಾಗೂ 2011ರಲ್ಲಿ ಐಸಿಸಿ ಏಕದಿನ ವಿಶ್ವಕಪ್ ಗೆದ್ದಿತ್ತು. 2013ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನೂ ಭಾರತ ತಂಡ ಧೋನಿ ನಾಯಕತ್ವದಲ್ಲೇ ಮುಡಿಗೇರಿಸಿಕೊಂಡಿತ್ತು. ನಂತರದ 10 ವರ್ಷಗಳಲ್ಲಿ ಭಾರತ ನಿರಂತರವಾಗಿ ಐಸಿಸಿ ಟ್ರೋಫಿ ಗೆಲ್ಲುವಲ್ಲಿ ವಿಫಲವಾಗುತ್ತಾ ಬಂದಿದೆ.

ಧೋನಿ ನಾಡು ರಾಂಚಿ ಅಷ್ಟೇ ಅಲ್ಲದೆ ಕೇರಳದ ತಿರುವನಂತಪುರಂ ಹಾಗೂ ಪಂಜಾಬ್‌ನ ಮೊಹಾಲಿ ಮೈದಾನಗಳಿಗೂ ಈ ಬಾರಿ ವಿಶ್ವಕಪ್ ಆಯೋಜನೆಯ ಅವಕಾಶ ಸಿಕ್ಕಿಲ್ಲ. 2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸೆಮಿಫೈನಲ್ ಪಂದ್ಯಕ್ಕೆ ಮೊಹಾಲಿ ಆತಿಥ್ಯ ವಹಿಸಿತ್ತು.

ವಿಶ್ವಕಪ್ ಆತಿಥ್ಯದ ವಿಚಾರದಲ್ಲಿ ಆಗಿರುವ ಅನ್ಯಾಯದ ವಿರುದ್ಧ ಕೇಂದ್ರದ ಮಾಜಿ ಸಚಿವ ಹಾಗೂ ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಒಂದೇ ಕ್ರೀಡಾಂಗಣಗಳಲ್ಲಿ 4-5 ಪಂದ್ಯಗಳು ನಡೆಯಬೇಕೆಂಬ ನಿಯಮವಿಲ್ಲ. ಈ ವಿಚಾರದಲ್ಲಿ ಬಿಸಿಸಿಐ ದೊಡ್ಡ ತಪ್ಪು ಮಾಡಿದೆ” ಎಂದು ಶಶಿ ತರೂರ್ ಹೇಳಿದ್ದಾರೆ.

ಐಸಿಸಿ ವಿಶ್ವಕಪ್ 2023: ಎಲ್ಲೆಲ್ಲಿ ಎಷ್ಟೆಷ್ಟು ಪಂದ್ಯಗಳು?

  • ಅಹ್ಮದಾಬಾದ್ : 5 ಪಂದ್ಯಗಳು
  • ಹೈದರಾಬಾದ್ : 3 ಪಂದ್ಯಗಳು
  • ಧರ್ಮಶಾಲಾ : 5 ಪಂದ್ಯಗಳು
  • ದೆಹಲಿ : 5 ಪಂದ್ಯಗಳು
  • ಚೆನ್ನೈ : 5 ಪಂದ್ಯಗಳು
  • ಲಕ್ನೋ : 5 ಪಂದ್ಯಗಳು
  • ಪುಣೆ : 5 ಪಂದ್ಯಗಳು
  • ಬೆಂಗಳೂರು : 5 ಪಂದ್ಯಗಳು
  • ಮುಂಬೈ : 5 ಪಂದ್ಯಗಳು
  • ಕೋಲ್ಕತಾ : 5 ಪಂದ್ಯಗಳು

ಇದನ್ನೂ ಓದಿ : Hardik Pandya : ವಿಶ್ವಕಪ್ ಬಳಿಕ ರೋಹಿತ್ ಶರ್ಮಾ ಪಟ್ಟಕ್ಕೆ ಕುತ್ತು, ಹಾರ್ದಿಕ್ ಪಾಂಡ್ಯಗೆ ನಾಯಕ ಪಟ್ಟ

ಇದನ್ನೂ ಓದಿ : ICC World Cup 2023 : ಚಿನ್ನಸ್ವಾಮಿಯಲ್ಲಿ “ಡಮ್ಮಿ” ಮ್ಯಾಚ್, ಕರ್ನಾಟಕದವರೇ ಬಿಸಿಸಿಐ ಅಧ್ಯಕ್ಷರಾದರೂ ಬೆಂಗಳೂರಿಗೆ ಇದೆಂಥಾ ಅನ್ಯಾಯ?

ಐಸಿಸಿ ವಿಶ್ವಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ (ICC World Cup 2023 Schedule) :

  • ಅಕ್ಟೋಬರ್ 5: ಇಂಗ್ಲೆಂಡ್ Vs ನ್ಯೂಜಿಲೆಂಡ್ (ಅಹ್ಮದಾಬಾದ್)
  • ಅಕ್ಟೋಬರ್ 6: ಪಾಕಿಸ್ತಾನ Vs ಕ್ವಾಲಿಫೈಯರ್-1 (ಹೈದರಾಬಾದ್)
  • ಅಕ್ಟೋಬರ್ 7: ಬಾಂಗ್ಲಾದೇಶ Vs ಅಫ್ಘಾನಿಸ್ತಾನ (ಧರ್ಮಶಾಲಾ)
  • ಅಕ್ಟೋಬರ್ 7: ದಕ್ಷಿಣ ಆಫ್ರಿಕಾ Vs ಕ್ವಾಲಿಫೈಯರ್-2 (ದೆಹಲಿ)
  • ಅಕ್ಟೋಬರ್ 8: ಭಾರತ Vs ಆಸ್ಟ್ರೇಲಿಯಾ (ಚೆನ್ನೈ)
  • ಅಕ್ಟೋಬರ್ 9: ನ್ಯೂಜಿಲೆಂಡ್ Vs ಕ್ವಾಲಿಫೈಯರ್-1 (ಹೈದರಾಬಾದ್)
  • ಅಕ್ಟೋಬರ್ 10: ಇಂಗ್ಲೆಂಡ್ Vs ಬಾಂಗ್ಲಾದೇಶ (ಧರ್ಮಶಾಲಾ)
  • ಅಕ್ಟೋಬರ್ 11: ಭಾರತ Vs ಅಫ್ಘಾನಿಸ್ತಾನ (ದೆಹಲಿ)
  • ಅಕ್ಟೋಬರ್ 12: ಪಾಕಿಸ್ತಾನ Vs ಕ್ವಾಲಿಫೈಯರ್-2 (ಹೈದರಾಬಾದ್)
  • ಅಕ್ಟೋಬರ್ 13: ಆಸ್ಟ್ರೇಲಿಯಾ Vs ದಕ್ಷಿಣ ಆಫ್ರಿಕಾ (ಲಕ್ನೋ)
  • ಅಕ್ಟೋಬರ್ 14: ಇಂಗ್ಲೆಂಡ್ Vs ಅಫ್ಘಾನಿಸ್ತಾನ (ದೆಹಲಿ)
  • ಅಕ್ಟೋಬರ್ 14: ಬಾಂಗ್ಲಾದೇಶ Vs ನ್ಯೂಜಿಲೆಂಡ್ (ಚೆನ್ನೈ)
  • ಅಕ್ಟೋಬರ್ 15: ಭಾರತ Vs ಪಾಕಿಸ್ತಾನ (ಅಹ್ಮದಾಬಾದ್)
  • ಅಕ್ಟೋಬರ್ 16: ಆಸ್ಟ್ರೇಲಿಯಾ Vs ಕ್ವಾಲಿಫೈಯರ್-2 (ಲಕ್ನೋ)
  • ಅಕ್ಟೋಬರ್ 17: ದಕ್ಷಿಣ ಆಫ್ರಿಕಾ Vs ಕ್ವಾಲಿಫೈಯರ್-1(ಧರ್ಮಶಾಲಾ)
  • ಅಕ್ಟೋಬರ್ 18: ಅಫ್ಘಾನಿಸ್ತಾನ Vs ನ್ಯೂಜಿಲೆಂಡ್ (ಚೆನ್ನೈ)
  • ಅಕ್ಟೋಬರ್ 19: ಭಾರತ Vs ಬಾಂಗ್ಲಾದೇಶ (ಪುಣೆ)
  • ಅಕ್ಟೋಬರ್ 20: ಆಸ್ಟ್ರೇಲಿಯಾ Vs ಪಾಕಿಸ್ತಾನ (ಬೆಂಗಳೂರು)
  • ಅಕ್ಟೋಬರ್ 21: ಇಂಗ್ಲೆಂಡ್ Vs ದಕ್ಷಿಣ ಆಫ್ರಿಕಾ (ಮುಂಬೈ)
  • ಅಕ್ಟೋಬರ್ 21: ಕ್ವಾಲಿಫೈಯರ್-1 Vs ಕ್ವಾಲಿಫೈಯರ್-2 (ಲಕ್ನೋ)
  • ಅಕ್ಟೋಬರ್ 22: ಭಾರತ Vs ನ್ಯೂಜಿಲೆಂಡ್ (ಧರ್ಮಶಾಲಾ)
  • ಅಕ್ಟೋಬರ್ 23: ಪಾಕಿಸ್ತಾನ Vs ಅಫ್ಘಾನಿಸ್ತಾನ (ಚೆನ್ನೈ)
  • ಅಕ್ಟೋಬರ್ 24: ದಕ್ಷಿಣ ಆಫ್ರಿಕಾ Vs ಬಾಂಗ್ಲಾದೇಶ (ಮುಂಬೈ)
  • ಅಕ್ಟೋಬರ್ 25: ಆಸ್ಟ್ರೇಲಿಯಾ Vs ಕ್ವಾಲಿಫೈಯರ್-1 (ದೆಹಲಿ)
  • ಅಕ್ಟೋಬರ್ 26: ಇಂಗ್ಲೆಂಡ್ Vs ಕ್ವಾಲಿಫೈಯರ್-2 (ಬೆಂಗಳೂರು)
  • ಅಕ್ಟೋಬರ್ 27: ಪಾಕಿಸ್ತಾನ Vs ದಕ್ಷಿಣ ಆಫ್ರಿಕಾ (ಚೆನ್ನೈ)
  • ಅಕ್ಟೋಬರ್ 28: ಕ್ವಾಲಿಫೈಯರ್-2 Vs ಬಾಂಗ್ಲಾದೇಶ (ಕೋಲ್ಕತಾ)
  • ಅಕ್ಟೋಬರ್ 28: ಆಸ್ಟ್ರೇಲಿಯಾ Vs ನ್ಯೂಜಿಲೆಂಡ್ (ಧರ್ಮಶಾಲಾ)
  • ಅಕ್ಟೋಬರ್ 29: ಭಾರತ Vs ಇಂಗ್ಲೆಂಡ್ (ಲಕ್ನೋ)
  • ಅಕ್ಟೋಬರ್ 30: ಅಫ್ಘಾನಿಸ್ತಾನ Vs ಕ್ವಾಲಿಫೈಯರ್-2 (ಪುಣೆ)
  • ಅಕ್ಟೋಬರ್ 31: ಪಾಕಿಸ್ತಾನ Vs ಬಾಂಗ್ಲಾದೇಶ (ಕೋಲ್ಕತಾ)
  • ನವೆಂಬರ್ 1: ದಕ್ಷಿಣ ಆಫ್ರಿಕಾ Vs ನ್ಯೂಜಿಲೆಂಡ್ (ಪುಣೆ)
  • ನವೆಂಬರ್ 2: ಭಾರತ Vs ಕ್ವಾಲಿಫೈಯರ್-2 (ಮುಂಬೈ)
  • ನವೆಂಬರ್ 3: ಕ್ವಾಲಿಫೈಯರ್-1Vs ಅಫ್ಘಾನಿಸ್ತಾನ (ಲಕ್ನೋ)
  • ನವೆಂಬರ್ 4: ಇಂಗ್ಲೆಂಡ್ Vs ಆಸ್ಟ್ರೇಲಿಯಾ (ಅಹ್ಮದಾಬಾದ್)
  • ನವೆಂಬರ್ 4: ಪಾಕಿಸ್ತಾನ Vs ನ್ಯೂಜಿಲೆಂಡ್ (ಬೆಂಗಳೂರು)
  • ನವೆಂಬರ್ 5: ದಕ್ಷಿಣ ಆಫ್ರಿಕಾ Vs ಭಾರತ (ಕೋಲ್ಕತಾ)
  • ನವೆಂಬರ್ 6: ಬಾಂಗ್ಲಾದೇಶ Vs ಕ್ವಾಲಿಫೈಯರ್-2 (ದೆಹಲಿ)
  • ನವೆಂಬರ್ 7: ಆಸ್ಟ್ರೇಲಿಯಾ Vs ಅಫ್ಘಾನಿಸ್ತಾನ (ಮುಂಬೈ)
  • ನವೆಂಬರ್ 8: ಇಂಗ್ಲೆಂಡ್ Vs ಕ್ವಾಲಿಫೈಯರ್-1 (ಪುಣೆ)
  • ನವೆಂಬರ್ 9: ನ್ಯೂಜಿಲೆಂಡ್ Vs ಕ್ವಾಲಿಫೈಯರ್-2 (ಬೆಂಗಳೂರು)
  • ನವೆಂಬರ್ 10: ದಕ್ಷಿಣ ಆಫ್ರಿಕಾ Vs ಅಫ್ಘಾನಿಸ್ತಾನ (ಅಹ್ಮದಾಬಾದ್)
  • ನವೆಂಬರ್ 11: ಭಾರತ Vs ಕ್ವಾಲಿಫೈಯರ್-1 (ಬೆಂಗಳೂರು)
  • ನವೆಂಬರ್ 12: ಇಂಗ್ಲೆಂಡ್ Vs ಪಾಕಿಸ್ತಾನ (ಕೋಲ್ಕತಾ)
  • ನವೆಂಬರ್ 12: ಆಸ್ಟ್ರೇಲಿಯಾ Vs ಬಾಂಗ್ಲಾದೇಶ (ಪುಣೆ)
  • ನವೆಂಬರ್ 15: ಸೆಮಿಫೈನಲ್-1 (ಮುಂಬೈ)
  • ನವೆಂಬರ್ 16: ಸೆಮಿಫೈನಲ್-2 (ಕೋಲ್ಕತಾ)
  • ನವೆಂಬರ್ 19: ಫೈನಲ್ (ಅಹ್ಮದಾಬಾದ್)

ICC World Cup 2023 : There are no World Cup matches in the country of Dhoni, the legendary captain who won 2 World Cups for the country!

Comments are closed.