ICC World Cup 2023: ಉದ್ಯಾನನಗರಿ ಬೆಂಗಳೂರಿನಲ್ಲಿ ನಡೆಯಲಿದೆ ಈ ತಂಡದ ವಿಶ್ವಕಪ್ ತಾಲೀಮು, 12 ದಿನ ಭರ್ಜರಿ ಪ್ರಾಕ್ಟೀಸ್

ಬೆಂಗಳೂರು: ಐಸಿಸಿ ವಿಶ್ವಕಪ್ ಟೂರ್ನಿಗೆ ಇನ್ನು 55 ದಿನಗಳಷ್ಟೇ ಬಾಕಿ. ಕ್ರಿಕೆಟ್ ಜಗತ್ತಿನ ಅತೀ ದೊಡ್ಡ ಹಬ್ಬವಾಗಿರುವ ಏಕದಿನ ವಿಶ್ವಕಪ್ ಟೂರ್ನಿ (ICC World Cup 2023) ಅಕ್ಟೋಬರ್ 5ರಂದು ಆರಂಭವಾಗಲಿದೆ.

ವಿಶ್ವಕಪ್ ಟೂರ್ನಿಗೆ ಅರ್ಹತೆ ಪಡೆದಿರುವ ಕ್ರಿಕೆಟ್ ಶಿಶು ನೆದರ್ಲೆಂಡ್ಸ್ (Netherlands) ತಂಡ, ತನ್ನ ವಿಶ್ವಕಪ್ ಸಿದ್ಧತೆಗೆ ಮಾಸ್ಟರ್ ಪ್ಲಾನ್ ಹೆಣೆದಿದೆ. ವಿಶ್ವಕಪ್’ಗೆ ಪೂರ್ವಭಾವಿಯಾಗಿ ನೆದರ್ಲೆಂಡ್ಸ್ ತಂಡ ಬೆಂಗಳೂರಿನ ಹೊರವಲಯದಲ್ಲಿರುವ ಆಲೂರಿನ ಕೆಎಸ್’ಸಿಎಂ ಮೈದಾನದಲ್ಲಿ 12 ದಿನಗಳ ವಿಶ್ವಕಪ್ ಪೂರ್ವಸಿದ್ಧತಾ ಶಿಬಿರ ನಡೆಯಲಿದೆ. ಈ ವಿಶೇಷ ಶಿಬಿರ ಸೆಪ್ಟೆಂಬರ್ 19ರಿಂದ ಅಕ್ಟೋಬರ್ 1ರವರೆಗೆ ನಡೆಯಲಿದೆ ಎಂದು ರಾಜ್ಯ ಕ್ರಿಕೆಟ್ ಸಂಸ್ಥೆಯ ಮೂಲಗಳು ತಿಳಿಸಿವೆ.

ಕ್ರಿಕೆಟ್ ಶಿಶು ನೆದರ್ಲೆಂಡ್ಸ್ ತಂಡ ಈ ಬಾರಿಯ ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಆಡಿ ಪ್ರಧಾನ ಸುತ್ತಿಗೆ ಅರ್ಹತೆ ಪಡೆದಿದೆ. ನೆದರ್ಲೆಂಡ್ಸ್ ಜೊತೆ ಶ್ರೀಲಂಕಾ ಕೂಡ ಪ್ರಧಾನ ಸುತ್ತಿಗೆ ಎಂಟ್ರಿ ಕೊಟ್ಟಿದೆ. ವೆಸ್ಟ್ ಇಂಡೀಸ್ ಹಾಗೂ ಜಿಂಬಾಬ್ವೆಯಂತಹ ತಂಡಗಳನ್ನು ಹಿಂದಿಕ್ಕಿ ವಿಶ್ವಕಪ್ ಪ್ರಧಾನ ಸುತ್ತಿಗೆ ನೆದರ್ಲೆಂಡ್ಸ್ ಅರ್ಹತೆ ಸಂಪಾದಿಸಿದೆ.

ಐಸಿಸಿ ವಿಶ್ವಕಪ್ ಟೂರ್ನಿ ಅಕ್ಟೋಬರ್ 5ರಂದು ಅಹ್ಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ಕಳೆದ ಬಾರಿಯ ರನ್ನರ್ಸ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಅಕ್ಟೋಬರ್ 15ರಂದು ನಡೆಯುವ ಭಾರತ ಮತ್ತು ಪಾಕಿಸ್ತಾನ (India Vs Pakistan) ಪಂದ್ಯಕ್ಕೂ ಅಹ್ಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣವೇ ಆತಿಥ್ಯ ವಹಿಸಲಿದೆ.

ಅಕ್ಟೋಬರ್ 8ರದು ಆಸ್ಟ್ರೇಲಿಯಾ ವಿರುದ್ಧ ಚೆನ್ನೈನಲ್ಲಿ ನಡೆಯುವ ಪಂದ್ಯದ ಮೂಲಕ 2 ಬಾರಿಯ ಚಾಂಪಿಯನ್ ಭಾರತ ತಂಡದ ವಿಶ್ವಕಪ್ ಅಭಿಯಾನ ಆರಂಭವಾಗಲಿದೆ. ಅಕ್ಟೋಬರ್ 6ರಂದು ಹೈದರಾಬಾದ್’ನಲ್ಲಿ ನಡೆಯುವ ಪಂದ್ಯದಲ್ಲಿ 1992ರ ಚಾಂಪಿಯನ್ ಪಾಕಿಸ್ತಾನ ತಂಡವನ್ನು ಎದುರಿಸುವ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ನೆದರ್ಲೆಂಡ್ಸ್ ತಂಡ ತನ್ನ ಅಭಿಯಾನ ಆರಂಭಿಸಲಿದೆ. ಇದನ್ನೂ ಓದಿ : BCCI paid income tax: 2021-22ಸಾಲಿನ ಆದಾಯ ತೆರಿಗೆ ಮೊತ್ತ 1,159 ಕೋಟಿ ರೂ. ಪಾವತಿಸಿದ ಬಿಸಿಸಿಐ, ಡೀಟೇಲ್ಸ್ ಇಲ್ಲಿದೆ

ಐಸಿಸಿ ವಿಶ್ವಕಪ್ ಟೂರ್ನಿ: ನೆದರ್ಲೆಂಡ್ಸ್ ತಂಡದ ವೇಳಾಪಟ್ಟಿ (ICC World Cup 2023 Schedule) :

  • ಅಕ್ಟೋಬರ್ 6: ಪಾಕಿಸ್ತಾನ Vs ನೆದರ್ಲೆಂಡ್ಸ್ (ಹೈದರಾಬಾದ್)
  • ಅಕ್ಟೋಬರ್ 9: ನ್ಯೂಜಿಲೆಂಡ್ Vs ನೆದರ್ಲೆಂಡ್ಸ್ (ಹೈದರಾಬಾದ್)
  • ಅಕ್ಟೋಬರ್ 17: ದಕ್ಷಿಣ ಆಫ್ರಿಕಾ Vs ನೆದರ್ಲೆಂಡ್ಸ್ (ಧರ್ಮಶಾಲಾ)
  • ಅಕ್ಟೋಬರ್ 21: ನೆದರ್ಲೆಂಡ್ಸ್ Vs ಶ್ರೀಲಂಕಾ (ಲಕ್ನೋ)
  • ಅಕ್ಟೋಬರ್ 25: ಆಸ್ಟ್ರೇಲಿಯಾ Vs ನೆದರ್ಲೆಂಡ್ಸ್ (ದೆಹಲಿ)
  • ಅಕ್ಟೋಬರ್ 28: ನೆದರ್ಲೆಂಡ್ಸ್ Vs ಬಾಂಗ್ಲಾದೇಶ (ಕೋಲ್ಕತಾ)
  • ನವೆಂಬರ್ 3: ನೆದರ್ಲೆಂಡ್ಸ್ Vs ಅಫ್ಘಾನಿಸ್ತಾನ (ಲಕ್ನೋ)
  • ನವೆಂಬರ್ 8: ಇಂಗ್ಲೆಂಡ್ Vs ನೆದರ್ಲೆಂಡ್ಸ್ (ಪುಣೆ)
  • ನವೆಂಬರ್ 11: ಭಾರತ Vs ನೆದರ್ಲೆಂಡ್ಸ್ (ಬೆಂಗಳೂರು)

ICC World Cup 2023: This team’s World Cup training will be held in Udyannagari Bangalore, 12 days of intense practice.

Comments are closed.