ಏಷ್ಯಾಕಪ್ 2023ರಲ್ಲಿ (Asia Cup 2023) ಇಂದು ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಗಾಯದಿಂದ ಚೇತರಿಸಿಕೊಂಡಿರುವ ಕನ್ನಡಿಗ ಕೆಎಲ್ ರಾಹುಲ್ ಲಭ್ಯರಾಗಿದ್ದಾರೆ. ಕೆಎಲ್ ರಾಹುಲ್ ಅವರಿಗೆ ಪಾಕಿಸ್ತಾನ ವಿರುದ್ದದ (IND vs PAK ) ಪಂದ್ಯದಲ್ಲಿ ಆಡಲು ಅವಕಾಶ ನೀಡಬಾರದು. ಜೊತೆಗೆ ಏಷ್ಯಾಕಪ್‌ನ ಮುಂದಿನ ಪಂದ್ಯಗಳಲ್ಲಿ ಆಡಿಸಬಾರದು ಎಂದು ಕನ್ನಡಿಗ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಏಷ್ಯಾಕಪ್ 2023 ಸೂಪರ್-4 ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಂದು ಮೀಸಲು ದಿನವನ್ನು ಕಾಯ್ದಿರಿಸಲಾಗಿದೆ.
ಏಷ್ಯಾಕಪ್ ನಲ್ಲಿ ಭಾರತ ನೇಪಾಳ ವಿರುದ್ದ ಭರ್ಜರಿ ಗೆಲುವು ದಾಖಲಿಸಿದ್ದರೆ, ಪಾಕಿಸ್ತಾನ ವಿರುದ್ದದ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಗ್ರೂಪ್ ಹಂತದ ಮೊದಲ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಎದುರಿಸಿತ್ತು. ಇದೀಗ ಸೂಪರ್ 4 ಪಂದ್ಯದಲ್ಲಿಯೂ ಭಾರತ ಮತ್ತದೇ ಪಾಕಿಸ್ತಾನವನ್ನು ಎದುರಿಸಲಿದೆ. ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಜಗತ್ತು ಕಾತರವಾಗಿದೆ.

ಇದನ್ನೂ ಓದಿ : ಏಷ್ಯಾಕಪ್ ಸೂಪರ್ 4 ಹಂತ : ಭಾರತ Vs ಪಾಕಿಸ್ತಾನ ಪಂದ್ಯಕ್ಕೆ ಮಳೆಯ ಭೀತಿ
ಪಾಕಿಸ್ತಾನ ವಿರುದ್ದ ಪಂದ್ಯಕ್ಕೆ ಭಾರತ ತಂಡದಲ್ಲಿ ಯಾರೆಲ್ಲಾ ಇರಬೇಕು ಅನ್ನೋ ಬಗ್ಗೆ ಚರ್ಚೆ ಶುರುವಾಗಿದೆ. ಗಾಯಗೊಂಡು ಏಷ್ಯಾಕಪ್ ನ ಮೊದಲ ಎರಡು ಪಂದ್ಯಗಳನ್ನು ಮಿಸ್ ಮಾಡಿಕೊಂಡಿದ್ದ ಕೆಎಲ್ ರಾಹುಲ್ ಇಂದಿನ ಪಂದ್ಯದಲ್ಲಿ ಕಣಕ್ಕೆ ಇಳಿಯುವುದು ಬಹುತೇಕ ಖಚಿತ. ಹೀಗಾಗಿ ವಿಕೆಟ್ ಕೀಪರ್ ಇಶಾನ್ ಕಿಶನ್ ತಮ್ಮ ಸ್ಥಾನವನ್ನು ತೊರೆಯಬೇಕಾಗಿದೆ.

ಆದರೆ ಟೀಂ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಇಶಾನ್ ಕಿಶನ್‌ನಲ್ಲಿ ಆತ್ಮವಿಶ್ವಾಸ ತುಂಬಲು ಕನ್ನಡಿಗ ಕೆಎಲ್ ರಾಹುಲ್ ಅವರನ್ನು ಇಂದಿನ ಪಂದ್ಯಕ್ಕೆ ಭಾರತ ತಂಡದಿಂದ ಹೊರಗಿಡಬೇಕು. 2023 ರ ಏಷ್ಯಾಕಪ್ ಟೂರ್ನಿಯ ಉಳಿದ ಪಂದ್ಯಗಳಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಸ್ಸಾನ್‌ಗೆ ಸ್ಥಾನ ನೀಡಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ : ಏಕದಿನ ವಿಶ್ವಕಪ್‌ಗೆ ಭಾರತ ತಂಡ ಪ್ರಕಟ : ಕೆಎಲ್ ರಾಹುಲ್ ಎಂಟ್ರಿ, ಖ್ಯಾತ ಆಟಗಾರರು ಔಟ್
ಏಷ್ಯಾಕಪ್ 2023ರ ಲೀಗ್ ನಲ್ಲಿ ಪಾಕಿಸ್ತಾನದ ವಿರುದ್ಧ ಪಂದ್ಯದಲ್ಲಿ ಶುಭಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ಇಶಾನ್ ಕಿಶನ್ 82 ರನ್ ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದ್ದಲ್ಲದೆ, ಸತತ 4 ಏಕದಿನ ಅರ್ಧಶತಕಗಳ ದಾಖಲೆ ನಿರ್ಮಿಸಿದ ಇಶಾನ್ ಕಿಶನ್ ಉಳಿದ ಪಂದ್ಯಗಳಲ್ಲಿ ಆಡಬೇಕು ಎಂದು ರಾಬಿನ್ ಉತ್ತಪ್ಪ ಹೇಳಿದ್ದಾರೆ.

2023ರ ಏಕದಿನ ವಿಶ್ವಕಪ್ ಭಾರತದಲ್ಲಿ ನಡೆಯಲಿದ್ದು, ಈ ಪಂದ್ಯಾವಳಿಗೆ ಯುವ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಅವರಲ್ಲಿ ಆತ್ಮವಿಶ್ವಾಸ ತುಂಬಲು ಏಷ್ಯಾಕಪ್ ಟೂರ್ನಿಯ ಉಳಿದ ಪಂದ್ಯಗಳಿಗೆ ಆಯ್ಕೆಯಾಗಬೇಕು. ಏಷ್ಯಾಕಪ್ ಟೂರ್ನಿಯ ನಂತರ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಅವರ ತವರು ನೆಲದಲ್ಲಿ ಆಡಲಿದೆ. ಈ ಮೂರು ಪಂದ್ಯಗಳಲ್ಲಿ ಆಡುವ ಮೂಲಕ ರಾಹುಲ್ ತಮ್ಮ ಫಿಟ್ನೆಸ್ ಸಾಭೀತು ಪಡಿಸಬೇಕಾಗಿದೆ ಎಂದು ರಾಬಿನ್ ಉತ್ತಪ್ಪ ಸಲಹೆ ನೀಡಿದ್ದಾರೆ.
ಇದನ್ನೂ ಓದಿ : ICC World Cup 2023: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ, ಭಾರತಕ್ಕೆ ಯಾರು ಎದುರಾಳಿಗಳು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
ಇಂದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಹಾಗೂ ಇಶಾನ್ ಕಿಶನ್ ಒಟ್ಟಿಗೆ ಆಡುವ ಕಷ್ಟಸಾಧ್ಯ. ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ ಇದೀಗ ಏಷ್ಯಾ ಕಪ್‌ನಲ್ಲಿ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ರಾಹುಲ್ ತಂಡಕ್ಕೆ ಎಂಟ್ರಿ ಕೊಟ್ರೆ ಇಶಾನ್ ಕಿಶನ್ ತಮ್ಮ ಸ್ಥಾನವನ್ನು ತೊರೆಯಬೇಕಾಗಿದೆ.
Challenges while undergoing surgery 🩻
Fighting a mental battle 💪
Getting back in touch 👌A motivated @klrahul shares his comeback journey from injury 👏👏 – By @RajalArora
Full Interview 🎥🔽 #TeamIndia | #AsiaCup2023 | #INDvPAK
— BCCI (@BCCI) September 10, 2023
IND vs PAK Asia Cup 2023 Dont Give Chance To KL Rahul; Robin Uthappa Big Statement