India Women Cricket: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಣ್ಣೀರು ಹಾಕಿದ ಆರ್’ಸಿಬಿ ಸ್ಟಾರ್ ಆಶಾ ಶೋಭನ !

Ind W vs SA W India  : ಬೆಂಗಳೂರು: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಮಹಿಳಾ ತಂಡ (India Women Vs South Africa Women) 143 ರನ್’ಗಳ ಭರ್ಜರಿ ಗೆಲುವು ದಾಖಲಿಸಿದೆ.

Ind W vs SA W India  : ಬೆಂಗಳೂರು: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಮಹಿಳಾ ತಂಡ (India Women Vs South Africa Women) 143 ರನ್’ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಭಾರತ ಪರ ಏಕದಿನ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಲೆಗ್ ಸ್ಪಿನ್ನರ್ ಆಶಾ ಶೋಭನ (Asha Sobhana) ಕಣ್ಣೀರು ಹಾಕಿದ ಘಟನೆ ನಡೆದಿದೆ.

Ind w vs SA W India Women Cricket RCB star Asha Shobhana shed tears at Chinnaswamy Stadium
Image Credit to Original Source

ದಕ್ಷಿಣ ಅಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದ ಮೂಲಕ 33ನೇ ವರ್ಷದಲ್ಲಿ ಏಕದಿನ ಅಂತರಾಷ್ಟ್ರೀಯ ಕ್ರಿಕೆಟ್’ಗೆ ಆಶಾ ಶೋಭನ ಪದಾರ್ಪಣೆ ಮಾಡಿದರು. ಭಾರತ ತಂಡದ ನಾಯಕಿ ಹರ್ಮನ್’ಪ್ರೀತ್ ಕೌರ್ ಅವರಿಂದ ವಂಡೇ ಕ್ಯಾಪ್ ಸ್ವೀಕರಿಸಿದ ಆಶಾ, ಈ ವೇಳೆ ಭಾವುಕರಾಗಿ ಕಣ್ಣೀರಿಟ್ಟರು.

https://x.com/imfemalecricket/status/1802246303625187703?s=46

ಇದನ್ನೂ ಓದಿ : Smriti Mandhana : ಚಿನ್ನಸ್ವಾಮಿಯಲ್ಲಿ ಭರ್ಜರಿ ಶತಕ ಬಾರಿಸಿದ ಬೆಂಗಳೂರು ಮನೆ ಮಗಳು ಸ್ಮೃತಿ ಮಂಧನ !

ಪದಾರ್ಪಣೆಯ ಏಕದಿನ ಪಂದ್ಯದಲ್ಲೇ ಅಮೋಘ ಬೌಲಿಂಗ್ ಪ್ರದರ್ಶನ ತೋರಿದ ಆಶಾ, 21 ರನ್ನಿಗೆ 4 ವಿಕೆಟ್ ಪಡೆದು ಮಿಂಚಿದರು. ಕೇರಳದ ತಿರುವನಂತಪುರದವರಾದ ಆಶಾ ಶೋಭನ ಈ ವರ್ಷದ ಮಹಿಳಾ ಪ್ರೀಮಿಯರ್ ಲೀಗ್’ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಚಾಂಪಿಯನ್ ಪಟ್ಟಕ್ಕೇರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

Ind w vs SA W India Women Cricket RCB star Asha Shobhana shed tears at Chinnaswamy Stadium
Image Credit to Original Source

ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ಮಹಿಳಾ ತಂಡ 50 ಓವರ್’ಗಳಲ್ಲಿ 8 ವಿಕೆಟ್ ನಷ್ಟಕ್ಕೆ 265 ರನ್ ಕಲೆ ಹಾಕಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂಧನ ಏಕದಿನ ವೃತ್ತಿಜೀವನದ 6ನೇ ಶತಕ ಬಾರಿಸಿ ಮಿಂಚಿದರು. 127 ಎಸೆತಗಳನ್ನು ಎದುರಿಸಿದ ಸ್ಮೃತಿ ಮಂಧನ 12 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 117 ರನ್ ಗಳಿಸಿದರು.

ಇದನ್ನೂ ಓದಿ : USA Cricket Team : ಟಿ20 ವಿಶ್ವಕಪ್’ನಿಂದ ಪಾಕ್ ಔಟ್, ಸೂಪರ್-8 ತಲುಪಿ ಇತಿಹಾಸ ನಿರ್ಮಿಸಿದ ಅಮೆರಿಕ

https://x.com/bcciwomen/status/1802277304585850932?s=46

ನಂತರ 266 ರನ್’ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ವನಿತಾ ತಂಡ ಭಾರತೀಯ ವನಿತೆಯರ ಸಂಘಟಿತ ದಾಳಿಗೆ ತತ್ತರಿಸಿ 37.4 ಓವರ್’ಗಳಲ್ಲಿ 122 ರನ್ನಿಗೆ ಆಲೌಟಾಯಿತು. ಇದರೊಂದಿಗೆ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಸರಣಿಯ 2ನೇ ಪಂದ್ಯ ಬುಧವಾರ (ಜೂನ್ 19) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

Ind W vs SA W India Women Cricket RCB star Asha Shobhana shed tears at Chinnaswamy Stadium

Comments are closed.