India Tour of Bangladesh: ಟೀಮ್ ಇಂಡಿಯಾಗೆ ವಿರಾಟ್, ರೋಹಿತ್, ರಾಹುಲ್ ಕಂಬ್ಯಾಕ್; ಇಂದು ಬಾಂಗ್ಲಾದೇಶಕ್ಕೆ ಹಾರಲಿದೆ ಟೀಮ್ ಇಂಡಿಯಾ

(India Tour of Bangladesh)ಕೋಲ್ಕತಾ: ಐಸಿಸಿ ಟಿ20 ವಿಶ್ವಕಪ್ ಸೋಲಿನ ನಂತರ ವಿಶ್ರಾಂತಿ ಪಡೆದಿದ್ದ ನಾಯಕ ರೋಹಿತ್ ಶರ್ಮಾ, ಉಪನಾಯಕ ಕೆ.ಎಲ್ ರಾಹುಲ್ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಮೂಲಕ ಟೀಮ್ ಇಂಡಿಯಾಗೆ ಮರಳಲಿದ್ದಾರೆ.

ಬಾಂಗ್ಲಾದೇಶದಲ್ಲಿ ((India tour of Bangladesh) ಭಾರತ ತಂಡ ಆತಿಥೇಯರ ವಿರುದ್ಧ 3 ಪಂದ್ಯಗಳ ಏಕದಿನ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದ್ದು, ಬುಧವಾರ ಕೋಲ್ಕತಾದಿಂದ ಢಾಕಾಗೆ ಪ್ರಯಾಣ ಬೆಳೆಸಲಿದೆ. ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಡಿಸೆಂಬರ್ 4ರಂದು ಢಾಕಾದ ಶೇರ್ ಎ ಬಾಂಗ್ಲಾ ರಾಷ್ಟ್ರೀಯ ಕ್ರಿಡಾಂಗಣದಲ್ಲಿ ನಡೆಯಲಿದೆ. ಸರಣಿಯ 2ನೇ ಪಂದ್ಯ ಡಿಸೆಂಬರ್ 7 ಮತ್ತು 3ನೇ ಪಂದ್ಯ ಡಿಸೆಂಬರ್ 10ರಂದು ನಡೆಯಲಿದೆ. 2 ಪಂದ್ಯಗಳ ಟೆಸ್ಟ್ ಸರಣಿ ಡಿಸೆಂಬರ್ 14ರಂದು ಆರಂಭವಾಗಲಿದೆ.

ಆಸ್ಟ್ರೇಲಿಯಾದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್’ನಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡ ಬೆನ್ನಲ್ಲೇ ನಾಯಕ ರೋಹಿತ್ ಶರ್ಮಾ, ಉಪನಾಯಕ ಕೆ.ಎಲ್ ರಾಹುಲ್ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಅವರಿಗೆ ನ್ಯೂಜಿಲೆಂಡ್ ಪ್ರವಾಸಕ್ಕೆ ವಿಶ್ರಾಂತಿ ನೀಡಲಾಗಿತ್ತು. ರೋಹಿತ್ ಅನುಪಸ್ಥಿತಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ 1-0 ಅಂತರದಲ್ಲಿ ಸರಣಿ ಗೆದ್ದುಕೊಟ್ಟಿದ್ದರು. ಏಕದಿನ ಸರಣಿಯಲ್ಲಿ ಶಿಖರ್ ಧವನ್ ಟೀಮ್ ಇಂಡಿಯಾ ನಾಯಕತ್ವ ವಹಿಸಿದ್ದಾರೆ.

ಭಾರತದ ಬಾಂಗ್ಲಾದೇಶ ಪ್ರವಾಸದ ವೇಳಾಪಟ್ಟಿ (India tour of Bangladesh)
ಡಿಸೆಂಬರ್ 04: ಮೊದಲ ಏಕದಿನ (ಶೇರ್ ಎ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣ, ಢಾಕಾ)
ಡಿಸೆಂಬರ್ 07: 2ನೇ ಏಕದಿನ (ಶೇರ್ ಎ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣ, ಢಾಕಾ)
ಡಿಸೆಂಬರ್ 10: 3ನೇ ಏಕದಿನ (ಶೇರ್ ಎ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣ, ಢಾಕಾ)
ಡಿಸೆಂಬರ್ 14-18: ಮೊದಲ ಟೆಸ್ಟ್ (ಜಹೂರ್ ಅಹ್ಮದ್ ಚೌಧರಿ ಕ್ರೀಡಾಂಗಣ, ಛಟ್ಟೊಗ್ರಾಮ್)
ಡಿಸೆಂಬರ್ 22-26: 2ನೇ ಏಕದಿನ (ಶೇರ್ ಎ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣ, ಢಾಕಾ)

ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ((India Vs Bangladesh ODI series):
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್, ಕುಲ್ದೀಪ್ ಸೇನ್.

ಇದನ್ನೂ ಓದಿ:LPG Price Down : ಎಲ್‌ಪಿಜಿ ಸಿಲಿಂಡರ್‌ ಬೆಲೆ ಇಳಿಕೆ : ಕೇಂದ್ರ ಸರಕಾರದ ಹೊಸ ಸೂತ್ರ

ಇದನ್ನೂ ಓದಿ:James Anderson Rehan Ahmed : ಆ್ಯಂಡರ್ಸನ್ ಟೆಸ್ಟ್ ಡೆಬ್ಯೂ 2003, ರೆಹಾನ್ ಹುಟ್ಟಿದ್ದು 2004 : ಇಂಗ್ಲೆಂಡ್ ತಂಡದಲ್ಲಿ ಅಪರೂಪದ ಜೋಡಿ

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ (India Vs Bangladesh test series):
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೆ.ಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.

India Tour of Bangladesh Virat, Rohit, Rahul comeback for Team India; Team India will fly to Bangladesh today

Comments are closed.