India tour of West Indies 2023 : ಟೀಮ್ ಇಂಡಿಯಾದ ವೆಸ್ಟ್ ಪ್ರವಾಸದ ವೇಳಾಪಟ್ಟಿ ಬಿಡುಗಡೆ, ಕೆರಿಬಿಯನ್ ನಾಡಿನಲ್ಲಿ 2 ಟೆಸ್ಟ್, 3 ಏಕದಿನ, 5 ಟಿ20 ಪಂದ್ಯ

ಬೆಂಗಳೂರು : ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್’ಷಿಪ್ ಫೈನಲ್ (ICC World test Championship final – WTC final 2023)ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ನಿರಾಸೆ ಅನುಭವಿಸಿರುವ ಭಾರತ ಕ್ರಿಕೆಟ್ ತಂಡ ಒಂದು ತಿಂಗಳು ವಿರಾಮ ಪಡೆಯಲಿದ್ದು, ಮುಂದಿನ ತಿಂಗಳು ವೆಸ್ಟ್ ಇಂಡೀಸ್ ಪ್ರವಾಸ (India tour of West Indies 2023) ಕೈಗೊಳ್ಳಲಿದೆ.

ಟೀಮ್ ಇಂಡಿಯಾದ ವೆಸ್ಟ್ ಇಂಡೀಸ್ ಪ್ರವಾಸದ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಭಾರತ ತಂಡ ಕೆರಿಬಿಯನ್ ನಾಡಿನಲ್ಲಿ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳ ಸರಣಿಯನ್ನಾಡಲಿದೆ. ಪ್ರಥಮ ಟೆಸ್ಟ್ ಪಂದ್ಯ ಜುಲೈ 12ರಂದು ಡೊಮಿನಿಕಾದಲ್ಲಿರುವ ವಿಂಡ್ಸರ್ ಪಾರ್ಕ್ ಮೈದಾನದಲ್ಲಿ ಆರಂಭವಾಗಲಿದೆ.

ಕಳೆದ ಭಾನುವಾರ ಇಂಗ್ಲೆಂಡ್’ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಅಂತ್ಯಗೊಂಡ WTC ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ, ಆಸ್ಟ್ರೇಲಿಯಾ ವಿರುದ್ಧ 209 ರನ್’ಗಳ ಹೀನಾಯ ಸೋಲು ಕಂಡಿತ್ತು. WTC ಫೈನಲ್ ಪಂದ್ಯದ ನಂತರ ಟೀಮ್ ಇಂಡಿಯಾ ಆಟಗಾರರಿಗೆ ಕ್ರಿಕೆಟ್’ನಿಂದ ಒಂದು ತಿಂಗಳು ಬಿಡುವು ಸಿಕ್ಕಿದೆ.

ಭಾರತದ ವೆಸ್ಟ್ ಇಂಡೀಸ್ ಪ್ರವಾಸದ ವೇಳಾಪಟ್ಟಿ (India tour of West Indies 2023 Fixtures)

ಟೆಸ್ಟ್ ಸರಣಿ:

  • ಪ್ರಥಮ ಟೆಸ್ಟ್: ಜುಲೈ12-16 (ವಿಂಡ್ಸರ್ ಪಾರ್ಕ್, ಡೊಮಿನಿಕಾ)
  • ದ್ವಿತೀಯ ಟೆಸ್ಟ್: ಜುಲೈ 20-24 (ಕ್ವೀನ್ಸ್ ಪಾರ್ಕ್ ಓವಲ್, ಟ್ರಿನಿಡಾಡ್)

ಏಕದಿನ ಸರಣಿ:

  • ಮೊದಲ ಏಕದಿನ: ಜುಲೈ 27 (ಕೆನ್ನಿಂಗ್ಟನ್ ಓವಲ್, ಬಾರ್ಬೆಡೋಸ್)
  • ಎರಡನೇ ಏಕದಿನ: ಜುಲೈ 29 (ಕೆನ್ನಿಂಗ್ಟನ್ ಓವಲ್, ಬಾರ್ಬೆಡೋಸ್)
  • ಮೂರನೇ ಏಕದಿನ: ಆಗಸ್ಟ್ 01 (ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ, ಟ್ರಿನಿಡಾಡ್)

ಇದನ್ನೂ ಓದಿ : Virat Kohli: ರಾಜ, ವೈದ್ಯ, ಯೋಧ, ಪೈಲಟ್, ಫುಟ್ಬಾಲಿಗ : ಇದು ನೀವು ನೋಡಿರದ ಕಿಂಗ್ ಕೊಹ್ಲಿ ಅವತಾರ

ಟಿ20 ಸರಣಿ:

  • ಮೊದಲ ಟಿ20: ಆಗಸ್ಟ್ 04 (ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ, ಟ್ರಿನಿಡಾಡ್)
  • ಎರಡನೇ ಟಿ20: ಆಗಸ್ಟ್ 06 (ನ್ಯಾಷನಲ್ ಸ್ಟೇಡಿಯಂ, ಗಯಾನ)
  • ಮೂರನೇ ಟಿ20: ಆಗಸ್ಟ್ 08 (ನ್ಯಾಷನಲ್ ಸ್ಟೇಡಿಯಂ, ಗಯಾನ)
  • ನಾಲ್ಕನೇ ಟಿ20: ಆಗಸ್ಟ್ 12 (ಬ್ರೊವಾರ್ಡ್ ಕೌಂಟಿ ಸ್ಟೇಡಿಯಂ, ಲಾಡರ್’ಹಿಲ್; ಫ್ಲೋರಿಡಾ)
  • ಐದನೇ ಟಿ20: ಆಗಸ್ಟ್ 13 (ಬ್ರೊವಾರ್ಡ್ ಕೌಂಟಿ ಸ್ಟೇಡಿಯಂ, ಲಾಡರ್’ಹಿಲ್; ಫ್ಲೋರಿಡಾ)

India tour of West Indies 2023: West Indies tour schedule released, 2 Tests, 3 ODIs, 5 T20 matches in Caribbean country

Comments are closed.