ICC ODI World Cup Final 2023: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023 ಫೈನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ದ ಸೋಲನ್ನು ಕಂಡಿದೆ. ಈ ವಿಶ್ವಕಪ್ ಫೈನಲ್ ಬೆನ್ನಲ್ಲೇ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಮರು ಸರಣಿಯನ್ನು ಆಡಲಿದ್ದು, ಭಾರತ ಮತ್ತು ಆಸ್ಟ್ರೇಲಿಯಾ (India Vs Austraila) ನಡುವಿನ ಐದು ಪಂದ್ಯಗಳ ಟಿ20 ಸರಣಿಯು (T20 Series) ನವೆಂಬರ್ 23 ರಿಂದ ಆರಂಭವಾಗಲಿದೆ.
ವಿಶ್ವಕಪ್ 2023ರಲ್ಲಿ ಆಸ್ಟ್ರೇಲಿಯ ತಂಡವು ಆರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೂರನೇ ಬಾರಿಗೆ ವಿಶ್ವಕಪ್ ಗೆಲ್ಲುವ ಭಾರತದ ಕನಸು ಕೊನೆಗೂ ಕೈಗೂಡಿಲ್ಲ. ವಿಶ್ವಕಪ್ 2023 ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ನಂತರ, ಭಾರತ ಇನ್ನೆರಡು ದಿನಗಳಲ್ಲಿ ಮತ್ತೆ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.

ನವೆಂಬರ್ 23 ರಿಂದ ಭಾರತ vs ಆಸ್ಟ್ರೇಲಿಯಾ ನಡುವೆ ಐದು ಪಂದ್ಯಗಳ T20 ಸರಣಿ ಆರಂಭವಾಗಲಿದೆ. ಈ ಮೂಲಕ ಭಾರತ ತಂಡ ಟಿ20 ವಿಶ್ವಕಪ್‌ಗೆ ಭಾರತ ಅಭ್ಯಾಸವನ್ನು ಆರಂಭಿಸಲಿದೆ. ಹಲವು ವರದಿಗಳ ಪ್ರಕಾರ ಆಸ್ಟ್ರೇಲಿಯಾ ವಿರುದ್ದದ ಸರಣಿಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಬೂಮ್ರಾ ಸೇರಿದಂತೆ ಹಲವು ಹಿರಿಯ ನಾಯಕರಿಗೆ ವಿಶ್ರಾಂತಿ ನೀಡಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : ರೋಹಿತ್ ಶರ್ಮಾಗೆ ಕೊನೆಯ ಐಸಿಸಿ ಸರಣಿ ಆಗುತ್ತಾ ವಿಶ್ವಕಪ್ ಫೈನಲ್ ? ನಿವೃತ್ತಿ ಪಡೆಯುತ್ತಾರಾ ರೋಹಿತ್ ಶರ್ಮಾ
ಆಸ್ಟ್ರೇಲಿಯಾ ವಿರುದ್ದ ಟಿ20 ಸರಣಿಗೆ ಭಾರತ ಯುವ ಆಟಗಾರರ ತಂಡವನ್ನು ಕಣಕ್ಕೆ ಇಳಿಸಲಿದೆ. ಹೊಸ ಆಟಗಾರರಿಗೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಇದು ಉತ್ತಮ ವೇದಿಕೆ ಆಗಲಿದೆ. ಹಾರ್ದಿಕ್ ಪಾಂಡ್ಯ ಆಸ್ಟ್ರೇಲಿಯಾ ವಿರುದ್ದದ ಸರಣಿಯಲ್ಲಿ ಆಡುತ್ತಿಲ್ಲ. ಹೀಗಾಗಿ ಸೂರ್ಯ ಕುಮಾರ್ ಯಾದವ್ ಅಥವಾ ರುತುರಾಜ್ ಗಾಯಕ್ವಾಡ್ ತಂಡವನ್ನು ಮುನ್ನೆಡೆಸುವ ಸಾಧ್ಯತೆಯಿದೆ.
ಇದನ್ನೂ ಓದಿ : 11 ಪಂದ್ಯ 3 ಶತಕ, 765 ರನ್ : ವಿಶ್ವಕಪ್ ಸೋತರು ವಿಶ್ವದಾಖಲೆ ಬರೆದ ವಿರಾಟ್ ಕೊಹ್ಲಿ
ರಿಂಕು ಸಿಂಗ್, ಭುವನೇಶ್ವರ್ ಕುಮಾರ್, ರಯಾನ್ ಪರಾನ್ ಸ್ಥಾನ ಪಡೆಯುವ ಸಾಧ್ಯತೆ ಇದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20 ಪಂದ್ಯ ನವೆಂಬರ್ 23 ರಂದು ವಿಶಾಖಪಟ್ಟಣದಲ್ಲಿ ನಡೆಯಲಿದ್ದು, ಉಳಿದ ಪಂದ್ಯಗಳು ಕ್ರಮವಾಗಿ 26 ರಂದು ತಿರುವನಂತಪುರಂ, 28 ರಂದು ಗುವಾಹಟಿ, 1 ರಂದು ನಾಗ್ಪುರ ಮತ್ತು 3 ರಂದು ಹೈದರಾಬಾದ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ : 2023 ಕ್ರಿಕೆಟ್ ವಿಶ್ವಕಪ್ : ಆಸ್ಟ್ರೇಲಿಯಾ ವಿರುದ್ದ ಭಾರತದ ಸೋಲಿಗೆ ಈ 9 ಕಾರಣಗಳು
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾದ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಿಂಕು ಸಿಂಗ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ರಯಾನ್ ಪರಾಗ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್ ಸಿಂಗ್.
India Vs Australia Rematch On November 23 after ICC World Cup 2023