India vs Australia T 20 world cup 2024 : ಸೇಂಟ್ ಲೂಸಿಯಾ: ಐಸಿಸಿ ಟಿ20 ವಿಶ್ವಕಪ್ (ICC T20 World Cup 2024) ಟೂರ್ನಿಯ ತನ್ನ ಅಂತಿಮ ಸೂಪರ್-8 ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ (Indian Cricket Team) ಮಾಜಿ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ 24 ರನ್’ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಸೋಲಿಗೆ ಟೀಮ್ ಇಂಡಿಯೀ ಸೇಡು ತೀರಿಸಿಕೊಂಡಿದೆ.

ಸೇಂಟ್ ಲೂಸಿಯಾದ ಡ್ಯಾರೆನ್ ಸಮಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ನಡೆದ ಪಂದ್ಯವನ್ನು ಗೆಲ್ಲುವ ಮೂಲಕ ಗ್ರೂಪ್-1ರಲ್ಲಿ ಆಡಿದ ಮೂರೂ ಸೂಪರ್-8 ಪಂದ್ಯಗಳನ್ನು ಗೆದ್ದ ಭಾರತ ಒಟ್ಟು 6 ಅಂಕಗಳೊಂದಿಗೆ ಅಜೇಯವಾಗಿ ಸೆಮಿಫೈನಲ್ ತಲುಪಿತು. ಗುರುವಾರ (ಜೂನ್ 27) ಗಯಾನದ ಪ್ರಾವಿಡೆನ್ಸ್ ಮೈದಾನದಲ್ಲಿ ನಡೆಯುವ 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.
ಇದನ್ನೂ ಓದಿ : India Vs Zimbabwe Series : ಜಿಂಬಾಬ್ವೆ ವಿರುದ್ಧದ ಟಿ20 ಸರಣಿ : ಭಾರತ ತಂಡಕ್ಕೆ ಗಿಲ್ ನಾಯಕ
ಇದೂ ಕೂಡ ಭಾರತಕ್ಕೆ ಸೇಡಿನ ಪಂದ್ಯ. ಆಸ್ಟ್ರೇಲಿಯಾದಲ್ಲಿ ನಡೆಗ 2022ರ ಟಿ20 ವಿಶ್ವಕಪ್ ಸೆಮಿಫೈನಲ್’ನಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 10 ವಿಕೆಟ್’ಗಳ ಹೀನಾಯ ಸೋಲು ಕಂಡಿತ್ತು. ಆ ಸೋಲಿಗೆ ವಿಶ್ವಕಪ್ ಸೆಮಿಫೈನಲ್’ನಲ್ಲೇ ಸೇಡಪ ತೀರಿಸಿಕೊಳ್ಳುವ ಅವಕಾಶ ಭಾರತಕ್ಕೆ ಒದಗಿ ಬಂದಿದೆ.

ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 20 ಓವರ್’ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್’ಗಳ ಬೃಹತ್ ಮೊತ್ತ ಕಲೆ ಹಾಕಿತು. 8 ಸಿಕ್ಸರ್’ಗಳೊಂದಿಗೆ ಅಬ್ಬರಿಸಿದ ನಾಯಕ ರೋಹಿತ್ ಶರ್ಮಾ 41 ಎಸೆತಗಳಲ್ಲಿ ಸಿಡಿಲಬ್ಬರದ 92 ರನ್ ಗಳಿಸಿ ಔಟಾಗಿ ಶತಕ ವಂಚಿತರಾದರು.
ಇದನ್ನೂ ಓದಿ : ಟಿ20 ವಿಶ್ವಕಪ್: ವಿಂಡೀಸ್ ಔಟ್, ಸೆಮಿಫೈನಲ್ ಪ್ರವೇಶಿಸಿದ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್
ನಂತರ ಕಠಿಣ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಉತ್ತಮ ಆರಂಭದ ಹೊರತಾಗಿಯೂ 20 ಓವರ್’ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಭಾರತ ಪರ ಯುವ ಎಡಗೈ ವೇಗಿ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆದರೆ, ಬಿಗ್ ಬೌಲಿಂಗ್ ದಾಳಿ ಸಂಘಟಿಸಿದ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ 4 ಓವರ್’ಗಳಲ್ಲಿ 24 ರನ್ ಬಿಟ್ಟುಕೊಟ್ಟು 2 ವಿಕೆಟ್ ಉರುಳಿಸಿದರು.
ಇದನ್ನೂ ಓದಿ : Maharaja Trophy 2024 : ಸ್ವಾತಂತ್ರ್ಯ ದಿನದಂದೇ ಶುರು ಕರುನಾಡ ಟಿ20 ಲೀಗ್, ಬೆಂಗಳೂರು ತಂಡದಲ್ಲೇ ಮತ್ತೆ ಮಯಾಂಕ್ ಆಟ
India vs Australia t20 world cup 2024 India win and enter semi final