India Vs England T20 : ಇಂದು ಇಂಡಿಯಾ Vs ಇಂಗ್ಲೆಂಡ್ 2ನೇ ಟಿ20, ಕೊಹ್ಲಿ ಆಡಬೇಕಾದರೆ ಇದೊಂದೇ ದಾರಿ

ಬರ್ಮಿಂಗ್’ಹ್ಯಾಮ್ : (Virat Kohli Last chance) ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯ 2ನೇ ಪಂದ್ಯ ಶನಿವಾರ ಎಡ್ಜ್’ಬಾಸ್ಟನ್ ಮೈದಾನದಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ 50 ರನ್’ಗಳ ಭರ್ಜರಿ ಗೆಲುವು ದಾಖಲಿಸಿರುವ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ, 2ನೇ ಟಿ20 ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳುವ ಗುರಿಯಲ್ಲಿದೆ.

ಮೊದಲ ಪಂದ್ಯದಿಂದ ಹೊರಗುಳಿದಿದ್ದ ಮಾಜಿ ನಾಯಕ ವಿರಾಟ್ ಕೊಹ್ಲಿ, ವಿಕೆಟ್ ಕೀಪರ್ ರಿಷಭ್ ಪಂತ್, ಮಧ್ಯಮ ಕ್ರಮಾಂಕದ ಬ್ಯಾಟ್ಸ್’ಮನ್ ಶ್ರೇಯಸ್ ಅಯ್ಯರ್, ಆಲ್ರೌಂಡರ್ ರವೀಂದ್ರ ಜಡೇಜ ಮತ್ತು ವೇಗಿ ಜಸ್ಪ್ರೀತ್ ಬುಮ್ರಾ ಈ ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ವಾಪಸ್ಸಾಗಲಿದ್ದಾರೆ. ಆದರೆ ಮೊದಲ ಪಂದ್ಯದಲ್ಲಿ ಯುವ ಆಟಗಾರರು ಭರ್ಜರಿ ಆಟವಾಡಿ ಭಾರತಕ್ಕೆ ಗೆಲುವು ತಂದುಕೊಟ್ಟಿರುವುದರಿಂದ 2ನೇ ಪಂದ್ಯದಲ್ಲಿ ಆಡಲಿರುವ ಟೀಮ್ ಇಂಡಿಯಾ ಪ್ಲೇಯಿಂಗ್ XIನಲ್ಲಿ ಬದಲಾವಣೆ ಮಾಡಲಾಗುತ್ತಾ ಎಂಬುದೇ ಈಗ ಕುತೂಹಲದ ಪ್ರಶ್ನೆ.

ಮಾಜಿ ನಾಯಕ ವಿರಾಟ್ ಕೊಹ್ಲಿ ಪ್ಲೇಯಿಂಗ್ XIಗೆ ಮರಳಿದರೆ 3ನೇ ಕ್ರಮಾಂಕದಲ್ಲಿ ಆಡುತ್ತಿರುವ ಯುವ ಆಲ್ರೌಂಡರ್ ದೀಪಕ್ ಹೂಡ, ಕೊಹ್ಲಿಗಾಗಿ ಜಾಗ ಬಿಟ್ಟುಕೊಡಬೇಕಾಗುತ್ತದೆ. ಆದರೆ 28 ವರ್ಷದ ದೀಪಕ್ ಹೂಡ, ಅಮೋಘ ಫಾರ್ಮ್’ನಲ್ಲಿದ್ದಾರೆ. ಕಳೆದ 3 ಟಿ20 ಪಂದ್ಯಗಳಲ್ಲಿ ದೀಪಕ್ ಹೂಡ (47*(26) Vs ಐರ್ಲೆಂಡ್), (104(57) Vs ಐರ್ಲೆಂಡ್), (33(17) Vs ಇಂಗ್ಲೆಂಡ್) ಅಮೋಘ ಆಟವಾಡಿದ್ದು ತಂಡಗ ಯಶಸ್ಸಿಗೆ ಕಾರಣರಾಗಿದ್ದಾರೆ.

ಸೌಥಾಂಪ್ಟನ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕ್ರೀಸ್’ಗಿಳಿದು ಅಬ್ಬರಿಸಿದ್ದ ಹೂಡ, ಕೇವಲ 17 ಎಸೆತಗಳಲ್ಲಿ 33 ರನ್ ಸಿಡಿಸಿದ್ದರು. 3 ಬೌಂಡರಿ ಹಾಗೂ 2 ಸಿಕ್ಸರ್ಸ್ ಬಾರಿಸಿದ್ದ ಹೂಡ 194ರ ಅಮೋಘ ಸ್ಟ್ರೈಕ್’ರೇಟ್’ನಲ್ಲಿ ಬ್ಯಾಟ್ ಬೀಸಿದ್ದರು. ಆದರೆ ಮಾಜಿ ನಾಯಕ ವಿರಾಟ್ ಕೊಹ್ಲಿ ಪ್ಲೇಯಿಂಗ್ XI ಗೆ ಮರಳಿದರೆ ದೀಪಕ್ ಹೂಡ ತಂಡದಿಂದ ಹೊರಗುಳಿಯಬೇಕಾಗುತ್ತದೆ. ಒಂದು ವೇಳೆ ದೀಪಕ್ ಹೂಡ ಅವರನ್ನು ಪ್ಲೇಯಿಂಗ್ XIನಲ್ಲಿ ಮುಂದುವರಿಸಬೇಕಾದರೆ ಇರುವುದು ಒಂದೇ ದಾರಿ. ಇಶಾನ್ ಕಿಶನ್ ಬದಲು ವಿರಾಟ್ ಕೊಹ್ಲಿ ನಾಯಕ ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಬೇಕು.

ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯಕ್ಕೆ ಭಾರತದ ಸಂಭಾವ್ಯ XI:
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರವೀಂದ್ರ ಜಡೇಜ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್.

ಪಂದ್ಯ ಆರಂಭ: ಸಂಜೆ 4ಕ್ಕೆ (ಭಾರತೀಯ ಕಾಲಮಾನ)
ಸ್ಥಳ: ಸೌಥಾಂಪ್ಟನ್, ಬರ್ಮಿಂಗ್’ಹ್ಯಾಮ್

ಇದನ್ನೂ ಓದಿ : “ಔಟ್ ಆಫ್ ಫಾರ್ಮ್” ವಿರಾಟ್ ಕೊಹ್ಲಿ ಈಗಲೂ ರೋಹಿತ್ ಶರ್ಮಾಗಿಂತ ಬೆಸ್ಟ್ !

ಇದನ್ನೂ ಓದಿ : Sachin Vs Kohli 33 phobia: ಅಂದು ಸಚಿನ್, ಇಂದು ವಿರಾಟ್.. ಬ್ಯಾಟಿಂಗ್ ದಿಗ್ಗಜರಿಗೆ ‘33’ ಫೋಬಿಯಾ

India Vs England T20 Virat Kohli Last chance

Comments are closed.