ಇಂದಿನಿಂದ ಇಂಡಿಯಾ Vs ಇಂಗ್ಲೆಂಡ್ 5ನೇ ಟೆಸ್ಟ್: ಇಲ್ಲಿದೆ ಟೀಮ್ ಇಂಡಿಯಾದ ಸಂಭಾವ್ಯ Playing XI

ಬರ್ಮಿಂಗ್’ಹ್ಯಾಮ್: ಭಾರತ ಮತ್ತು ಆತಿಥೇಯ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯ ಶುಕ್ರವಾರ ಎಡ್ಜ್’ಬಾಸ್ಟನ್ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಕಳೆದ ವರ್ಷ ಕೋವಿಡ್ ಕಾರಣದಿಂದ ಮೊಟಕುಗೊಂಡಿದ್ದ ಇಂಗ್ಲೆಂಡ್ ಮತ್ತು ಭಾರತ ನಡುವಿನ 5 ಪಂದ್ಯಗಳ ಟೆಸ್ಟ್ (India Vs England Test Series) ಸರಣಿಯ ಅಂತಿಮ ಪಂದ್ಯವನ್ನು ಶುಕ್ರವಾರ ಎಡ್ಜ್”ಬಾಸ್ಟನ್ ಮೈದಾನದಲ್ಲಿ ಆರಂಭವಾಗಲಿದೆ. 4 ಪಂದ್ಯಗಳು ಈಗಾಗಲೇ ಮುಗಿದಿದ್ದು, ಭಾರತ 2-1ರಲ್ಲಿ ಮುನ್ನಡೆಯಲ್ಲಿದೆ. ಅಂತಿಮ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಂಡರೂ ಇಂಗ್ಲೆಂಡ್ ನೆಲದಲ್ಲಿ ಭಾರತ 15 ವರ್ಷಗಳ ನಂತರ ಟೆಸ್ಟ್ ಸರಣಿಯನ್ನು ಗೆಲ್ಲಲಿದೆ.

ಆದರೆ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿರುವ ಟೀಮ್ ಇಂಡಿಯಾಗೆ ಪಂದ್ಯಕ್ಕೂ ಮೊದಲೇ ಬೆನ್ನು ಬೆನ್ನಿಗೆ ಆಘಾತಗಳು ಎದುರಾಗಿವೆ. ನಾಯಕ ರೋಹಿತ್ ಶರ್ಮಾ ಕೋವಿಡ್”ನಿಂದ ಬಳಲುತ್ತಿರುವ ಕಾರಣ ಟೆಸ್ಟ್ ಪಂದ್ಯದಲ್ಲಿ ಆಡುವುದು 99.9% ಅನುಮಾನ. ರೋಹಿತ್ ಶರ್ಮಾ ಅಲಭ್ಯರಾದರೆ ವೇಗಿ ಜಸ್ಪ್ರೀತ್ ಬುಮ್ರಾ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಈಗಾಗಲೇ ಉಪನಾಯಕ ಕೆ.ಎಲ್ ರಾಹುಲ್ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದು, ಈಗ ರೋಹಿತ್ ಶರ್ಮಾ ಕೂಡ ಆಡದಿದ್ದರೆ ಭಾರತದ ಅಗ್ರಕ್ರಮಾಂಕಕ್ಕೆ ದೊಡ್ಡ ಹೊಡೆತ ಬೀಳಲಿದೆ. ರೋಹಿತ್ ಮತ್ತು ರಾಹುಲ್ ಅನುಪಸ್ಥಿತಿಯಲ್ಲಿ ಯುವ ಓಪನರ್ ಶುಭಮನ್ ಗಿಲ್ ಜೊತೆ ಕನ್ನಡಿಗ ಮಯಾಂಕ್ ಅಗರ್ವಾಲ್ ಇನ್ನಿಂಗ್ಸ್ ಆರಂಭಿಸಲುವ ಸಾಧ್ಯತೆಯಿದೆ.

ಎಡ್ಜ್’ಬಾಸ್ಟನ್ ಮೈದಾನದಲ್ಲಿ ಸ್ಪಿನ್ನರ್’ಗಳಿಗಿಂತ ವೇಗಿಗಳಿಗೆ ಹೆಚ್ಚು ನೆರವು ನೀಡುವ ಸಾಧ್ಯತೆಳಿರುವ ಕಾರಣ, ಭಾರತ ನಾಲ್ವರು ವೇಗಿಗಳನ್ನು ಕಣಕ್ಕಿಳಿಸುವುದು ಖಚಿತ, ಹೀಗಾಗಿ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಮತ್ತು ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾರಲ್ಲಿ ಒಬ್ಬರು ಆಡುವ ಬಳಗದಲ್ಲಿ ಸ್ಥಾನ ಪಡೆಯಲಿದ್ದಾರೆ.

ಭಾರತದ ಪ್ಲೇಯಿಂಗ್ XI (ನಾಯಕ ರೋಹಿತ್ ಶರ್ಮಾ ಅಲಭ್ಯರಾದರೆ):

ಶುಭಮನ್ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜ/ಆರ್.ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ (ನಾಯಕ), ಮೊಹಮ್ಮದ್ ಸಿರಾಜ್.

ಒಂದು ವೇಳೆ ಮಯಾಂಕ್ ಅಗರ್ವಾಲ್ ಬದಲು ಚೇತೇಶ್ವರ್ ಪೂಜಾರ, ಶುಭಮನ್ ಗಿಲ್ ಜೊತೆ ಇನ್ನಿಂಗ್ಸ್ ಆರಂಭಿಸಿದರೆ 3ನೇ ಕ್ರಮಾಂದಲ್ಲಿ ಹನುಮ ವಿಹಾರಿ ಆಡಲಿದ್ದು, 5ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕಣಕ್ಕಿಳಿಯಲಿದ್ದಾರೆ.

ಇದನ್ನೂ ಓದಿ : ಪಾಂಡ್ಯ ಅಣ್ಣನೊಂದಿಗೆ ಕಿರಿಕ್.. ಸ್ವಂತ ರಾಜ್ಯಕ್ಕೆ ಗುಡ್‌ಬೈ.. ಟೀಮ್ ಇಂಡಿಯಾಗೆ ಎಂಟ್ರಿ.. ಟಿ20 ಸೆಂಚುರಿ.. ಇದು ಹೂಡ ಸಕ್ಸಸ್ ಸ್ಟೋರಿ

ಇದನ್ನೂ ಓದಿ : ನಿನ್ನನ್ನು ನೋಡಿ ಖುಷಿಯಾಗುತ್ತಿದೆ..” ಸಚಿನ್ ಪುತ್ರನ ಬಗ್ಗೆ ಇಂಗ್ಲೆಂಡ್ ಮಹಿಳಾ ಕ್ರಿಕೆಟರ್ ಹೀಗೆ ಹೇಳಿದ್ದೇಕೆ ?

India Vs England Test Series probably playing XI

Comments are closed.