ವಿಶ್ವಕಪ್ 2023ನಲ್ಲಿ (World Cup 2023) ಭಾರತ ಇಂದು ನ್ಯೂಜಿಲೆಂಡ್ (india vs Newzealand) ತಂಡದ ವಿರುದ್ದ ಸೆಣೆಸಾಡಲಿದೆ. ಸತತ ನಾಲ್ಕು ಪಂದ್ಯಗಳನ್ನು ಜಯಿಸಿರುವ ಭಾರತ ತಂಡ ತನ್ನ ಗೆಲುವಿನ ಓಟ ಮುಂದುವರಿಸಲು ಕಾತರವಾಗಿದೆ. ಆದರೆ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya Ruled Out) ಗಾಯಗೊಂಡಿರುವುದು ಟೀಂ ಇಂಡಿಯಾಕ್ಕೆ ಭರ್ಜರಿ ಶಾಕ್ ಕೊಟ್ಟಿದೆ.
ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾಕ್ಕೆ ಇಂದು ಸವಾಲಿನ ಪಂದ್ಯ. ಭರ್ಜರಿ ಫಾರ್ಮ್‌ನಲ್ಲಿರುವ ನ್ಯೂಜಿಲೆಂಡ್ ತಂಡ ಕೂಡ ಆಡಿರುವ 4 ಪಂದ್ಯಗಳನ್ನು ಜಯಿಸುವ ಮೂಲಕ ವಿಶ್ವಕಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಸಮಾನ ಅಂಕವನ್ನು ಪಡೆದುಕೊಂಡಿದ್ದು, ಇಂದು ಗೆಲ್ಲುವ ತಂಡ ಅಗ್ರಸ್ಥಾನಕ್ಕೇರಲಿದೆ.

ಬಾಂಗ್ಲಾದೇಶ ವಿರುದ್ದದ ಪಂದ್ಯದಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದು, ಅವರು ಇಂದಿನ ಪಂದ್ಯದಿಂದ ಹೊರಬಿದ್ದಿದ್ದಾರೆ. ವಿಶ್ವಕಪ್‌ನಲ್ಲಿ ಉತ್ತಮ ಆಟದ ಪ್ರದರ್ಶನ ನೀಡುತ್ತಿದ್ದ ಹಾರ್ದಿಕ್ ಪಾಂಡ್ಯ ತಂಡದಿಂದ ಹೊರಗೆ ಬಿದ್ದಿರುವುದು ಭಾರತ ತಂಡಕ್ಕೆ ಆಘಾತ ಮೂಡಿಸಿದೆ. ಜೊತೆಗೆ ಭಾರತ ತಂಡದ ಆಡುವ ಬಳಗದಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆಯಿದೆ.
ಟೀಂ ಇಂಡಿಯಾದ ಮಾಜಿ ಆಟಗಾರ ಇರ್ಫಾನ್ ಪಠಾಣ್ ನೀಡಿರುವ ಸಲಹೆಯಂತೆ ಭಾರತ ತಂಡ ಇಂದು ಆಡುವ ಬಳಗದಲ್ಲಿ ಎರಡು ಬದಲಾವಣೆ ಯನ್ನು ಮಾಡಬೇಕಾಗಿದೆ. ಹಾರ್ದಿಕ್ ಪಾಂಡ್ಯ ಬದಲು ಸೂರ್ಯಕುಮಾರ್ ಯಾದವ್ ಹಾಗೂ ಮೊಹಮ್ಮದ್ ಸೆಮಿ ಬದಲು ಶಾರ್ದೂಲ್ ಠಾಕೂರ್ ಕಣಕ್ಕೆ ಇಳಿಯುವಂತೆ ಸಲಹೆ ನೀಡಿದ್ದಾರೆ.
ಧರ್ಮಶಾಲಾ ಮೈದಾನ ಬ್ಯಾಟಿಂಗ್‌ಗೆ ಹೆಚ್ಚು ಸಹಕಾರಿಯಾಗಲಿದೆ. ಇದೇ ಪಿಚ್‌ನಲ್ಲಿ ಇಂಗ್ಲೆಂಡ್ ತಂಡ ಬಾಂಗ್ಲಾದೇಶ ತಂಡದ ವಿರುದ್ದ ೩೬೪ರನ್ ಸಿಡಿಸಿತ್ತು. ಹೀಗಾಗಿ ಅತೀ ಹೆಚ್ಚು ರನ್ ಗಳಿಸಿದ ತಂಡ ಇಂಗ್ಲೆಂಡ್ ಎನಿಸಿಕೊಂಡಿತ್ತು. ಆದರೆ ಈ ಮೈದಾನದ ಕನಿಷ್ಠ ಸ್ಕೋರ್ ಭಾರತದ ಹೆಸರಿನಲ್ಲಿದೆ. ಸರಾಸರಿ 203 ರನ್ ನಿರೀಕ್ಷೆ ಮಾಡಲಾಗುತ್ತಿದೆ.

2017 ರಲ್ಲಿ ಭಾರತ ತಂಡ ಶ್ರೀಲಂಕಾದ ವಿರುದ್ದ ಕೇವಲ 112 ರನ್‌ಗಳಿಗೆ ಆಲೌಟ್ ಆಗಿತ್ತು. ಇದೀಗ ಇಂದಿನ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದ್ದು, ಭಾರತ ತಂಡ ಸದ್ಯ ಬಲಿಷ್ಠವಾಗಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಶುಭಮನ್ ಗಿಲ್ ಅತ್ಯದ್ಬುತ ಫಾರ್ಮ್‌ನಲ್ಲಿದ್ದಾರೆ.
ಜೊತೆಗೆ ಬೌಲಿಂಗ್ ವಿಭಾಗವೂ ಬಲಿಷ್ಠವಾಗಿದ್ದು ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಸಿರಾಜ್ ಎದುರಾಳಿಯನ್ನು ಕಟ್ಟಿ ಹಾಕುವ ತಾಕತ್ತು ಹೊಂದಿದ್ದಾರೆ. ಇನ್ನು ನ್ಯೂಜಿಲೆಂಡ್ ತಂಡ ಕೂಡ ಬಲಿಷ್ಠವಾಗಿದೆ. ಈಗಾಗಲೇ ಸತತ ನಾಲ್ಕು ಗೆಲುವು ಕಂಡಿರುವ ಕಿವೀಸ್ ಪಡೆದ ಭಾರತ ವಿರುದ್ದವೂ ಗೆಲ್ಲಲು ಹವಣಿಸುತ್ತಿದೆ.
ಇದನ್ನೂ ಓದಿ : ಭಾರತ ತಂಡಕ್ಕೆ ಕನ್ನಡಿಗ ಕೆಎಲ್ ರಾಹುಲ್ ಉಪನಾಯಕ : ವಿಶ್ವಕಪ್‌ನಿಂದಲೇ ಔಟ್ ಆಗ್ತಾರಾ ಪಾಂಡ್ಯ
ಭಾರತ – ನ್ಯೂಜಿಲೆಂಡ್ ಬಲಾಬಲ
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ವಿಶ್ವಕಪ್‌ನಲ್ಲಿ ಭರ್ಜರಿ ಪ್ರದರ್ಶನವನ್ನು ನೀಡುತ್ತಿವೆ. ಮೇಲ್ನೋಟಕ್ಕೆ ಎರಡೂ ತಂಡಗಳು ಬಲಿಷ್ಠವಾಗಿದೆ. ಆದರೆ ನ್ಯೂಜಿಲೆಂಡ್ ತಂಡ ಭಾರತದ ವಿರುದ್ದ ಏಕದಿನ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಸಾಧಿಸಿಲ್ಲ.
ಇದುವರೆಗೆ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಒಟ್ಟು ೧೧೬ ಪಂದ್ಯಗಳನ್ನು ಆಡಿವೆ. ಈ ಪೈಕಿ 58 ಪಂದ್ಯಗಳಲ್ಲಿ ಭಾರತ ತಂಡ ಗೆಲುವು ಸಾಧಿಸಿದ್ದು, ನ್ಯೂಜಿಲೆಂಡ್ ತಂಡ ಕೇವಲ 50 ಪಂದ್ಯಗಳನ್ನು ಮಾತ್ರವೇ ಜಯಿಸಿದೆ. ಈ ಪೈಕಿ 1 ಪಂದ್ಯ ಫಲಿತಾಂಶವಿಲ್ಲದೇ ಕೊನೆಗೊಂಡಿದೆ. ಇನ್ನು ಒಂದು ಒಂದು ಪಂದ್ಯ ಟೈ ಆಗಿತ್ತು.

ಕೆಎಲ್ ರಾಹುಲ್ ಉಪನಾಯಕ
ಭಾರತ ತಂಡ ಉಪನಾಯಕ ಹಾರ್ದಿಕ್ ಪಾಂಡ್ಯ ಸದ್ಯ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ದದ ಪಂದ್ಯದಿಂದ ಹೊರಬಿದ್ದಿದ್ದಾರೆ, ಮುಂದಿನ ಪಂದ್ಯಕ್ಕೆ ತಂಡಕ್ಕೆ ಮರಳುತ್ತಾರೋ ಅನ್ನೋ ಬಗ್ಗೆ ಖಚಿತತೆ ಇಲ್ಲ. ಗಾಯಗೊಂಡಿರುವ ಹಾರ್ದಿಕ್ ಪಾಂಡ್ಯ ಈಗಾಗಲೇ ಸ್ಕ್ಯಾನಿಂಗ್‌ಗೆ ಒಳಪಟ್ಟಿದ್ದು, ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ.
ಶೀಘ್ರದಲ್ಲಿಯೇ ಗುಣಮುಖರಾದ್ರೆ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾಕ್ಕೆ ಸೇರ್ಪಡೆಯಾಗಲಿದ್ದಾರೆ. ಒಂದೊಮ್ಮೆ ಫಿಟ್ ಆಗದೇ ಇದ್ರೆ ಕೆಎಲ್ ರಾಹುಲ್ ಉಪನಾಯಕನಾಗುವ ಸಾಧ್ಯತೆಯಿದೆ. ಆಸ್ಟ್ರೇಲಿಯಾ ವಿರುದ್ದದ ಸರಣಿಯಲ್ಲಿ ರಾಹುಲ್ ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನೆಡೆಸಿದ್ದರು.
ಇದನ್ನೂ ಓದಿ : ಪಾಕಿಸ್ತಾನದ ವಿರುದ್ದ ಕೊನೆಗೂ ಕಣಕ್ಕಿಳಿದ ಶುಭಮನ್ ಗಿಲ್ : ಡೆಂಗ್ಯೂ ಗೆಲುವಿನ ಹಿಂದಿದೆ ಗಿಲ್ ರೋಚಕ ಸ್ಟೋರಿ
ಆಸ್ಟ್ರೇಲಿಯಾ ವಿರುದ್ದ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಟೀಕಾಕಾರರ ಬಾಯಿಮುಚ್ಚಿಸಿದ್ದರು. ಅಲ್ಲದೇ ಆಸ್ಟ್ರೇಲಿಯಾ ವಿರುದ್ದದ ಸರಣಿಯನ್ನು ಜಯಿಸಿದ್ದರು. ಈ ಹಿಂದೆ ರಾಹುಲ್ ಭಾರತ ತಂಡದ ಉಪನಾಯಕನಾಗಿದ್ದರು. ಇದೀಗ ಮತ್ತೆ ಉಪನಾಯಕನಾಗುವ ಆವಕಾಶ ಒದಗಿ ಬಂದಿದೆ.
ಭಾರತದ ಸಂಭಾವ್ಯ ಪ್ಲೇಯಿಂಗ್ XI:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್/ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ನ್ಯೂಜಿಲ್ಯಾಂಡ್ ಸಂಭಾವ್ಯ ಪ್ಲೇಯಿಂಗ್ XI:
ಡೆವೊನ್ ಕಾನ್ವೇ, ರಚಿನ್ ರವೀಂದ್ರ, ವಿಲ್ ಯಂಗ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ/ ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಇಶ್ ಸೋಧಿ, ಟ್ರೆಂಟ್ ಬೌಲ್ಟ್
ಭಾರತ – ನ್ಯೂಜಿಲ್ಯಾಂಡ್ ತಂಡ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಶಮಿ ರವಿಚಂದ್ರನ್ ಅಶ್ವಿನ್.
ನ್ಯೂಜಿಲೆಂಡ್: ಡೆವೊನ್ ಕಾನ್ವೆ, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್ (ನಾಯಕ/ ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ವಿಲ್ ಯಂಗ್, ಟ್ರೆಂಟ್ ಬೌಲ್ಟ್, ಇಶ್ ಸೋಧಿ, ಜೇಮ್ಸ್ ನೀಶಮ್, ಟಿಮ್ ಸೌಥಿ
india Vs New Zealand Hardik Pandya replaces Spotaka in the team here is India playing XI