ರಾಂಚಿ : ನ್ಯೂಜಿಲೆಂಡ್ ತಂಡದ ( India vs New Zealand T20) ವಿರುದ್ದ ಎರಡನೇ ಟಿ20 ಪಂದ್ಯ ಇಂದು ರಾಂಚಿಯಲ್ಲಿ ನಡೆಯಲಿದೆ. ಮೊದಲ ಪಂದ್ಯವನ್ನು 5 ವಿಕೆಟ್‌ಗಳ ಅಂತರದಿಂದ ರೋಚಕವಾಗಿ ಗೆಲುವು ಕಂಡಿದ್ದ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯಲ್ಲಿ (NZ vs Ind T20) 1- 0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ. ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿದ್ರೆ ಸರಣಿ ಕೈವಶವಾಗಲಿದೆ.
ರಾಂಚಿಯ ಜೆಎಸ್‌ಸಿಎ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಹೆಚ್ಚು ರೋಚಕತೆಯನ್ನು ಹುಟ್ಟುಹಾಕಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಟೀಮ್ ಸೌಥಿ ಪಡೆಯನ್ನು ಎದುರಿಸಲಿದೆ. ಮೇಲ್ನೋಟಕ್ಕೆ ಎರಡೂ ತಂಡಗಳು ಬಲಿಷ್ಠವಾಗಿದೆ. ಟಿ20 ವಿಶ್ವಕಪ್ ಸೋಲಿನ ನೋವವನ್ನು ಮರೆಯಲು ನ್ಯೂಜಿಲೆಂಡ್ ವಿರುದ್ದದ ಸರಣಿ ಗೆಲುವು ಅತ್ಯಂತ ಮಹತ್ವದ್ದಾಗಿದೆ. ಇನ್ನೊಂದೆಡೆಯಲ್ಲಿ ಮೊದಲ ಪಂದ್ಯದ ಸೋಲಿನ ಸೇಡಿಗಾಗಿ ಕಾಯುತ್ತಿರುವ ನ್ಯೂಜಿಲೆಂಡ್ ತಂಡ ಇಂದಿನ (NZ vs Ind T20)ಪಂದ್ಯವನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆಗೆ ಸಿಲುಕಿದೆ.
ಕನ್ನಡಿಗ ಕೆ.ಎಲ್.ರಾಹುಲ್ ಹಾಗೂ ರೋಹಿತ್ ಶರ್ಮಾ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಇನ್ನೊಂದೆಡೆಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್ ಆರ್ಭಟಿಸಲಿದ್ದಾರೆ. ಇನ್ನೊಂದೆಡೆಯಲ್ಲಿ ಅಕ್ಷರ್ ಪಟೇಲ್ ಬೌಲಿಂಗ್ ಹಾಗೂ ಬ್ಯಾಟಿಂಗ್ ನಲ್ಲಿ ಮಿಂಚು ಹರಿಸಿದ್ದಾರೆ. ಇನ್ನು ಅನುಭವಿ ಆರ್.ಅಶ್ವಿನ್ ಹಾಗೂ ಭುವನೇಶ್ವರ್ ಕುಮಾರ್ ಮೊದಲ ಪಂದ್ಯದಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಿದ್ದಾರೆ. ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆಯನ್ನು ನಿರೀಕ್ಷಿಸಲಾಗುತ್ತಿದೆ. ಮೊದಲ ಪಂದ್ಯದಲ್ಲಿ ದುಬಾರಿಯಾಗಿದ್ದ ಮೊಹಮ್ಮದ್ ಸಿರಾಜ್ ಬದಲು ಆವೇಶ್ ಖಾನ್ ಹಾಗೂ ಭುವನೇಶ್ವರ್ ಕುಮಾರ್ ಬದಲು ಹರ್ಷಲ್ ಪಟೇಲ್ ಕಣಕ್ಕೆ ಇಳಿಯುವುದು ಬಹುತೇಕ ಖಚಿತ.
ಸಂಭಾವ್ಯ XI: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ವೆಂಕಟೇಶ್ ಅಯ್ಯರ್, ಅಕ್ಷರ್ ಪಟೇಲ್, ಆರ್. ಅಶ್ವಿನ್, ಭುವನೇಶ್ವರ್ ಕುಮಾರ್/ಹರ್ಷಲ್ ಪಟೇಲ್, ದೀಪಕ್ ಚಾಹರ್, ಮೊಹಮ್ಮದ್ ಸಿರಾಜ್/ಅವೇಶ್ ಖಾನ್
ಇನ್ನು ನ್ಯೂಜಿಲೆಂಡ್ ತಂಡ ಕೂಡ ಬಲಿಷ್ಠವಾಗಿದೆ. ಟಿ20 ವಿಶ್ವಕಪ್‌ನಲ್ಲಿ ರನ್ನರ್ ಅಪ್ ಆಗಿರುವ ನ್ಯೂಜಿಲೆಂಡ್ ತಂಡಕ್ಕೆ ಮಾರ್ಟಿನ್ ಗಪ್ಟಿಲ್ ಹಾಗೂ ಡೇರಿಲ್ ಮಿಚೆಲ್ ಬ್ಯಾಟಿಂಗ್ ಮೂಲಕ ತಂಡಕ್ಕೆ ನೆರವಾಗುತ್ತಿದ್ದಾರೆ. ನಂತರದಲ್ಲಿ ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್, ರಚಿನ್ ರವೀಂದ್ರ ಹಾಗೂ ಮಿಚೆಲ್ ಸ್ಯಾಂಟ್ನರ್ ಮಧ್ಯಮ ಕ್ರಮಾಂಕದಲ್ಲಿ ಆಧರಿಸುತ್ತಿದ್ದಾರೆ. ಟೀಮ್ ಸೌಥಿ, ಟ್ರೆಂಟ್ ಪ್ರಮುಖ ಅಸ್ತ್ರವಾಗಿದ್ದಾರೆ. ಇಂದಿನ ಪಂದ್ಯದಲ್ಲಿ ಟಾಡ್ ಆಸ್ಟಲ್ ಬದಲು ಇಶಾ ಸೋದಿ ಹಾಗೂ ಲಾಕಿ ಫರ್ಗುಸನ್ ಬದಲು ಆಡಂ ಮಿಲ್ನೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
ಸಂಭಾವ್ಯ XI: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಟಾಡ್ ಆಸ್ಟಲ್ / ಇಶ್ ಸೋಧಿ, ಲಾಕಿ ಫರ್ಗುಸನ್ / ಆಡಮ್ ಮಿಲ್ನೆ, ಟ್ರೆಂಟ್ ಬೌಲ್ಟ್.
It was time for goodbye Jaipur & hello Ranchi 👋
— BCCI (@BCCI) November 18, 2021
Fans in Ranchi welcomed #TeamIndia with smiles on the eve of the 2nd @Paytm #INDvNZ T20I 🙂👍 pic.twitter.com/0I9hmBtXFX
( India vs New Zealand 2nd T20 match Probable playing XI )