ದುಬೈ:(India vs Pakistan Asia Cup 2022) ಏಷ್ಯಾ ಕಪ್ ಟೂರ್ನಿಯ ಸೂಪರ್ -4 ಪಂದ್ಯದಲ್ಲಿ (Team India) ಭಾರತ ಮತ್ತು (Team Pakistan)ಪಾಕಿಸ್ತಾನ ತಂಡಗಳು ಭಾನುವಾರ (ಸೆಪ್ಟೆಂಬರ್ 4) ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.
‘ಎ’ ಗುಂಪಿನ ಮೊದಲ ಲೀಗ್ ಪಂದ್ಯದಲ್ಲಿ(Team Pakistan) ಪಾಕಿಸ್ತಾನ ತಂಡವನ್ನು 5 ವಿಕೆಟ್’ಗಳಿಂದ ಮಣಿಸಿದ್ದ ಭಾರತ, ನಂತರ ಕ್ರಿಕೆಟ್ ಶಿಶು ಹಾಂಕಾಂಗ್ ವಿರುದ್ಧ 40 ರನ್’ಗಳಿಂದ ಗೆದ್ದು ಅಜೇಯವಾಗಿ ಸೂಪರ್-4 ಹಂತಕ್ಕೇರಿದೆ. ಮತ್ತೊಂದೆಡೆ ಮೊದಲ ಪಂದ್ಯ ಸೋತಿದ್ದ ಪಾಕಿಸ್ತಾನ, 2ನೇ ಲೀಗ್ ಪಂದ್ಯದಲ್ಲಿ ಹಾಂಕಾಂಗ್ ತಂಡವನ್ನು 155 ರನ್’ಗಳಿಂದ ಮಣಿಸಿ ಸೂಪರ್-4 ಹಂತಕ್ಕೆ ಅರ್ಹತೆ ಪಡೆದಿದೆ.
ಲೀಗ್ ಹಣಾಹಣಿಯಲ್ಲಿ ಪಾಕಿಸ್ತಾನವನ್ನು ಬಗ್ಗು ಬಡಿದಿದ್ದ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ (Team India), ಸೂಪರ್-4 ಹಂತದಲ್ಲೂ ಸಾಂಪ್ರದಾಯಿಕ ಎದುರಾಳಿಯನ್ನು ಮಣಿಸುವ ವಿಶ್ವಾಸದಲ್ಲಿದೆ. ಸೂಪರ್ ಸಂಡೆ ನಡೆಯುವ ಈ ಹೈವೋಲ್ಟೇಜ್ ಪಂದ್ಯದಲ್ಲಿ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಆಡಲಿದ್ದಾರೆ. ಹಾಂಕಾಂಗ್ ವಿರುದ್ಧದ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಿ ವಿಕೆಟ್ ಕೀಪರ್ ರಿಷಭ್ ಪಂತ್’ಗೆ ಅವಕಾಶ ನೀಡಲಾಗಿತ್ತು. (Team Pakistan)ಪಾಕಿಸ್ತಾನ ವಿರುದ್ಧದ ಲೀಗ್ ಪಂದ್ಯದಲ್ಲಿ ಅಮೋಘ ಆಲ್ರೌಂಡ್ ಆಟವಾಡಿದ್ದ ಹಾರ್ದಿಕ್ ಪಾಂಡ್ಯ ಬೌಲಿಂಗ್’ನಲ್ಲಿ 3 ವಿಕೆಟ್ ಹಾಗೂ ಬ್ಯಾಟಿಂಗ್’ನಲ್ಲಿ 17 ಎಸೆತಗಳಲ್ಲಿ ಅಜೇಯ 33 ರನ್ ಸಿಡಿಸಿ ಭಾರತಕ್ಕೆ 5 ವಿಕೆಟ್’ಗಳ ರೋಚಕ ಗೆಲುವು ತಂದುಕೊಟ್ಟಿದ್ದರು.
ಎಡಗೈ ಸ್ಪಿನ್ ಆಲ್ರೌಂಡರ್ ಮೊಣಕಾಲಿನ ಗಾಯದ ಕಾರಣ ಏಷ್ಯಾ ಕಪ್ ಟೂರ್ನಿಯಿಂದ ಹೊರ ಬಿದ್ದಿದ್ದು, ಅವರ ಸ್ಥಾನದಲ್ಲಿ ಮತ್ತೊಬ್ಬ ಎಡಗೈ ಸ್ಪಿನ್ ಆಲ್ರೌಂಡರ್ ಅಕ್ಷರ್ ಪಟೇಲ್ ಆಡಲಿದ್ದಾರೆ. ಒಂದು ವೇಳೆ ಅಕ್ಷರ್ ಪಟೇಲ್ ಪ್ಲೇಯಿಂಗ್ XIನಲ್ಲಿ ಕಾಣಿಸಿಕೊಳ್ಳದೇ ಇದ್ದರೆ, ಆಲ್ರೌಂಡರ್ ದೀಪಕ್ ಹೂಡ ಆಡಲಿದ್ದಾರೆ. ಇನ್ನುಳಿದಂತೆ ಪಾಕಿಸ್ತಾನ ವಿರುದ್ಧದ ಲೀಗ್ ಪಂದ್ಯದಲ್ಲಿ ಕಣಕ್ಕಿಳಿದ ಆಟಗಾರರೇ ಭಾನುವಾರವೂ ಕಣಕ್ಕಿಳಿಯಲಿದ್ದಾರೆ.
ಪಾಕಿಸ್ತಾನ ವಿರುದ್ಧದ ಸೂಪರ್-4 ಪಂದ್ಯಕ್ಕೆ ಭಾರತದ ಸಂಭಾವ್ಯ XI:
1.ರೋಹಿತ್ ಶರ್ಮಾ (ನಾಯಕ), 2.ಕೆ.ಎಲ್ ರಾಹುಲ್ (ಉಪನಾಯಕ), 3.ವಿರಾಟ್ ಕೊಹ್ಲಿ, 4.ಸೂರ್ಯಕುಮಾರ್ ಯಾದವ್, 5.ಹಾರ್ದಿಕ್ ಪಾಂಡ್ಯ, 6.ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), 7.ಅಕ್ಷರ್ ಪಟೇಲ್, 8.ಭುವನೇಶ್ವರ್ ಕುಮಾರ್, 9.ಆವೇಶ್ ಖಾನ್, 10.ಯುಜ್ವೇಂದ್ರ ಚಹಲ್, 11.ಅರ್ಷದೀಪ್ ಸಿಂಗ್.
ಇದನ್ನೂ ಓದಿ: ಭಾರತದ ಪಾಲಿಗೆ ಐತಿಹಾಸಿಕ ದಿನ – ಪ್ರಧಾನಿ ಮೋದಿ
ಇದನ್ನೂ ಓದಿ: ಸಚಿನ್ ತೆಂಡೂಲ್ಕರ್ (Sachin Tendulkar)ಸಾರಥ್ಯದ ಇಂಡಿಯಾ ಲೆಜೆಂಡ್ಸ್ (India Iegends) ತಂಡದಲ್ಲಿ ಮೂವರು ಕನ್ನಡಿಗರು
ಇದನ್ನೂ ಓದಿ: ಪೋಕ್ಸೋ ಕೋರ್ಟ್ ನ ಜಡ್ಜ್ ನಿಗೂಢ ಸಾವು
ಪಂದ್ಯ ಆರಂಭ: ರಾತ್ರಿ 7.30ಕ್ಕೆ
ಸ್ಥಳ: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ, ದುಬೈ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್’ವರ್ಕ್
ಲೈವ್ ಸ್ಟ್ರೀಮಿಂಗ್: ಡಿಸ್ನಿ+ಹಾಟ್’ಸ್ಟಾರ್
India vs Pakistan Asia Cup 2022