India vs Sri Lanka t20 Series : ಮುಂಬೈ: ಶ್ರೀಲಂಕಾ ವಿರುದ್ಧ ಸೀಮಿತ ಓವರ್’ಗಳ ಸರಣಿಯನ್ನಾಡಲು ಭಾರತ ಕ್ರಿಕೆಟ್ ತಂಡ ಇಂದು (ಸೋಮವಾರ) ದ್ವಿಪರಾಷ್ಟ್ರಕ್ಕೆ ಪ್ರಯಾಣ ಬೆಳೆಸಲಿದೆ. ಶ್ರೀಲಂಕಾದಲ್ಲಿ ಭಾರತ ಕ್ರಿಕೆಟ್ ತಂಡದ ವಿರುದ್ಧ 3 ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಟಿ20 ಸರಣಿಯಲ್ಲಿ ಭಾರತ ತಂಡವನ್ನು ಮುಂಬೈಕರ್ ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದರೆ, ಏಕದಿನ ಸರಣಿಯಲ್ಲಿ ಟಿ20 ವಿಶ್ವಚಾಂಪಿಯನ್ ನಾಯಕ ರೋಹಿತ್ ಶರ್ಮಾ ಭಾರತ ತಂಡದ ಸಾರಥ್ಯ ವಹಿಸಲಿದ್ದಾರೆ.

ಲಂಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯ ಜುಲೈ 27ರಂದು ಪಲ್ಲಕೆಲೆಯಲ್ಲಿ ನಡೆಯಲಿದೆ. ಜುಲೈ 28ಕ್ಕೆ ಎರಡನೇ ಪಂದ್ಯ ಹಾಗೂ ಜುಲೈ 30ಕ್ಕೆ ಮೂರನೇ ಟಿ20 ಪಂದ್ಯ ನಡೆಯಲಿದೆ. ಶ್ರೀ ಲಂಕಾ ವಿರುದ್ದ ಟಿ20 ಸರಣಿಯ ನಂತರ ಏಕದಿನ ಸರಣಿಯ ಪಂದ್ಯಗಳು ಆಗಸ್ಟ್ 2, 4 ಹಾಗೂ 7 ರಂದು ಕೊಲಂಬೊದ ಆರ್.ಪ್ರೇಮದಾಸ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿವೆ.
ಏಕದಿನ ಸರಣಿಗೆ ಮಾತ್ರ ಆಯ್ಕೆಯಾಗಿರುವ ಕನ್ನಡಿಗ ಕೆ.ಎಲ್ ರಾಹುಲ್, ಶ್ರೇಯಸ್ ಅಯ್ಯರ್, ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ದೆಹಲಿಯ ಯುವ ವೇಗದ ಬೌಲರ್ ಹರ್ಷಿತ್ ರಾಣಾ ಮುಂದಿನ ವಾರ ಶ್ರೀಲಂಕಾಗೆ ಪ್ರಯಾಣ ಬೆಳೆಸಲಿದ್ದಾರೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯೊಂದಿಗೆ ಭಾರತ ತಂಡದಲ್ಲಿ ಕೋಚ್ ಗೌತಮ್ ಗಂಭೀರ್ ಅವರ ಅಭಿಯಾನ ಆರಂಭವಾಗಲಿದೆ.
Also Read : ಇದನ್ನೂ ಓದಿ : Suryakumar Yadav: ಸೂರ್ಯನಿಗೆ ಭಾರತ ತಂಡದ ನಾಯಕ ಪಟ್ಟ, ನಿಜವಾಯ್ತು ಕಾಪು ಮಾರಿಕಾಂಬ ಅರ್ಚಕರ ವಾಣಿ
ಸಿಂಹಳೀಯರ ವಿರುದ್ಧದ ಟಿ20 ಹಾಗೂ ಏಕದಿನ ಸರಣಿ ಪಂದ್ಯಗಳು ಸೋನಿ ಸ್ಟೋರ್ಟ್ಸ್ ನೆಟ್ವರ್ಕ್’ನಲ್ಲಿ (Sony Sports Network) ನೇರಪ್ರಸಾರಗೊಳ್ಳಲಿದೆ. ಸೋನಿ ಲಿವ್’ನಲ್ಲಿ (Sony LIV) ಪಂದ್ಯಗಳು ಲೈವ್ ಸ್ಟ್ರೀಮಿಂಗ್’ಗೊಳ್ಳಲಿವೆ.
ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ:
ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್),ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಸಿರಾಜ್.

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಶಿವಂ ದುಬೆ, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ.ಅರ್ಷದೀಪ್ ಸಿಂಗ್, ರಿಯಾನ್ ಪರಾಗ್.
Also Read : Maharaja Trophy T20: ಮಯಾಂಕ್ To ಮನೀಶ್ ಪಾಂಡೆ, ಯಾರು ಯಾವ ಯಾವ ತಂಡದಲ್ಲಿ?
ಭಾರತ Vs ಶ್ರೀಲಂಕಾ ಸರಣಿ
ನೇರ ಪ್ರಸಾರ: ಸೋನಿ ಸ್ಟೋರ್ಟ್ಸ್ ನೆಟ್ವರ್ಕ್’ನಲ್ಲಿ (Sony Sports Network)
(ಸೋನಿ ಟೆನ್-5: ಇಂಗ್ಲಿಷ್ ಕಾಮೆಂಟರಿ, ಸೋನಿ ಟೆನ್-3: ಹಿಂದಿ ಕಾಮೆಂಟರಿ)
ಲೈವ್ ಸ್ಟ್ರೀಮಿಂಗ್: ಸೋನಿ ಲಿವ್ (Sony LIV)
Also Read : Smriti Mandhana: ವಿಶೇಷ ಅಭಿಮಾನಿಗೆ ಫೋನ್ ಗಿಫ್ಟ್ ನೀಡಿದ ಸ್ಮೃತಿ ಮಂಧಾನ
India vs Sri Lanka t20 Series Team India Travel Sri Lanka Today