India vs West Indies 2nd ODI : ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿಗೆ ರೆಸ್ಟ್‌, ಅಕ್ಷರ್‌ ಪಟೇಲ್‌, ಸಂಜು ಸ್ಯಾಮ್ಸನ್‌ ಇನ್‌

India vs West Indies 2nd ODI : ಭಾರತ – ವೆಸ್ಟ್‌ ಇಂಡೀಸ್‌ ವಿರುದ್ದದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎರಡು ಮಹತ್ವದ ಬದಲಾವಣೆಯನ್ನು ಮಾಡಿಕೊಂಡಿದೆ. ಟಾಸ್‌ ಗೆದ್ದಿರುವ ವೆಸ್ಟ್‌ ಇಂಡೀಸ್‌ ಈಗಾಗಲೇ ಬೌಲಿಂಗ್‌ ಆಯ್ದುಕೊಂಡಿದೆ. ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅವರಿಗೆ ಎರಡನೇ ಏಕದಿನ ಪಂದ್ಯಕ್ಕೆ ವಿಶ್ರಾಂತಿ ನೀಡಲಾಗಿದೆ. ಉಪ ನಾಯಕ ಹಾರ್ದಿಕ್‌ ಪಾಂಡ್ಯ ತಂಡವನ್ನು ಮುನ್ನೆಡೆಸಲಿದ್ದು, ಇಬ್ಬರು ಅನುಭವಿ ಆಟಗಾರರ ಸ್ಥಾನದಲ್ಲಿ ಯುವ ಆಟಗಾರರಾದ ಸಂಜು ಸ್ಯಾಮ್ಸನ್‌ ಹಾಗೂ ಅಕ್ಷರ್‌ ಪಟೇಲ್‌ ಕಾಣಿಸಿಕೊಂಡಿದ್ದಾರೆ.

ಬಾರ್ಬಡೋಸ್‌ನ ಕೆನ್ಸಿಂಗ್ಟನ್‌ ಓವಲ್‌ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲೂ ಚಹಾಲ್‌ಗೆ ಸ್ಥಾನ ನೀಡಿಲ್ಲ. ಬದಲಾಗಿ ಅಕ್ಷರ್‌ ಪಟೇಲ್‌ ತಂಡದಲ್ಲಿ ಸ್ಥಾನ ಪಡೆದು ಕೊಂಡಿದ್ದಾರೆ. ರೋಹಿತ್‌ ಶರ್ಮಾ ಅನುಪಸ್ಥಿತಿಯಲ್ಲಿ ನಾಯಕತ್ವ ವಹಿಸಿಕೊಂಡಿರುವ ಹಾರ್ದಿಕ್‌ ಪಾಂಡ್ಯ ಬ್ಯಾಟಿಂಗ್ ಕ್ರಮಾಂಕದಲ್ಲಿ ಭಡ್ತಿ ಪಡೆದುಕೊಂಡಿದ್ದಾರೆ. ಉಳಿದಂತೆ ಐಪಿಎಲ್‌ನಲ್ಲಿ ಉತ್ತಮ ಆಟದ ಪ್ರದರ್ಶನ ನೀಡಿದ್ದ ಸಂಜು ಸ್ಯಾಮ್ಸನ್‌ ಇದೀಗ ಏಕದಿನ ತಂಡದ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ವೆಸ್ಟ್‌ ಇಂಡಿಸ್‌ ವಿರುದ್ದ ಮೂರು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಮೊದಲ ಏಕದಿನ ಪಂದ್ಯದಲ್ಲಿ ಗೆಲುವು ಕಂಡಿತ್ತು. ಇದೀಗ ಎರಡನೇ ಪಂದ್ಯದಲ್ಲಿ ವೆಸ್ಟ್‌ ಇಂಡಿಸ್‌ ಗೆಲುವು ದಾಖಲಿಸಿದ್ರೆ ಮಾತ್ರ ಸರಣಿ ಜೀವಂತವಾಗಿ ಇರಲಿದೆ. ಒಂದೊಮ್ಮೆ ಭಾರತ ಜಯಿಸಿದ್ರೆ ಸರಣಿ ಟೀಂ ಇಂಡಿಯಾದ ಪಾಲಾಗಲಿದೆ.

ಭಾರತ ( Playing XI ): ಶುಭಮನ್ ಗಿಲ್, ಇಶಾನ್ ಕಿಶನ್(WK), ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(C ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್

ವೆಸ್ಟ್ ಇಂಡೀಸ್ ( Playing XI): ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಅಲಿಕ್ ಅಥಾನಾಜೆ, ಶಾಯ್ ಹೋಪ್(Wk/C), ಶಿಮ್ರಾನ್ ಹೆಟ್ಮೆಯರ್, ಕೀಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಗುಡಕೇಶ್ ಮೋಟಿ, ಅಲ್ಜಾರಿ ಜೋಸೆಫ್, ಜೇಡನ್ ಸೀಲ್ಸ್

ಇದನ್ನೂ ಓದಿ : R Ashwin : ವಿಶ್ವಕಪ್ ಗೆಲ್ಲಲು ಮಾಸ್ಟರ್ ಪ್ಲಾನ್, ಸ್ಪಿನ್ ಮಾಂತ್ರಿಕನನ್ನು ಕಣಕ್ಕಿಳಿಸಲಿದ್ದಾರೆ ದ್ರಾವಿಡ್-ರೋಹಿತ್

ಇದನ್ನೂ ಓದಿ : Yusuf Pathan : ಪಾಕ್ ಬೌಲರ್ ಮೊಹಮ್ಮದ್ ಆಮೀರ್’ಗೆ ಹಿಗ್ಗಾಮಗ್ಗ ಚಚ್ಚಿದ ಯೂಸುಫ್ ಪಠಾಣ್

Comments are closed.