Rohit Sharma : ಲಂಡನ್‌ನಲ್ಲಿ ಹಾಲಿ ಡೇ ಜಾಲಿ ಡೇ ಮುಗಿಸಿ ವಿಂಡೀಸ್‌ಗೆ ತೆರಳಿದ ರೋಹಿತ್ ಶರ್ಮಾ & ಟೀಮ್

ಲಂಡನ್: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಸಹ ಆಟಗಾರರು ಲಂಡನ್’ನಲ್ಲಿ ಹಾಲಿಡೇ ಮುಗಿಸಿ ವೆಸ್ಟ್ ಇಂಡೀಸ್ ತಲುಪಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯಿಂದ (India Vs West Indies) ವಿಶ್ರಾಂತಿ ಪಡೆದಿದ್ದ ರೋಹಿತ್ ಶರ್ಮಾ ಮತ್ತು ರಿಷಭ್ ಪಂತ್ ಟಿ20 ಸರಣಿಯನ್ನಾಡಲು ಟ್ರಿನಿಡಾಡ್ ತಲುಪಿದ್ದಾರೆ. ರೋಹಿತ್ ಮತ್ತು ಪಂತ್ ಜೊತೆ ಟಿ20 ತಂಡದಲ್ಲಿ ಸ್ಥಾನ ಪಡೆದಿರುವ ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಕುಲ್ದೀಪ್ ಯಾದವ್, ರವಿಚಂದ್ರನ್ ಅಶ್ವಿನ್ ಮತ್ತು ರವಿ ಬಿಷ್ಣೋಯ್ ಕೂಡ ಟ್ರಿನಿಡಾಡ್’ಗೆ ಬಂದಿಳಿದಿದ್ದಾರೆ. ಭಾನುವಾರ ರಾತ್ರಿ ಲಂಡನ್”ನಿಂದ ಹೊರಟಿದ್ದ ಟೀಮ್ ಇಂಡಿಯಾ ಆಟಗಾರರು ಸೋಮವಾರ ಬೆಳಗ್ಗೆ ಕೆರಿಬಿಯನ್ನರ ನಾಡಿಗೆ ಕಾಲಿಟ್ಟಿದ್ದಾರೆ.

ಆತಿಥೇಯ ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಟಿ20 ಹಾಗೂ 3 ಪಂದ್ಯಗಳ ಏಕದಿನ ಸರಣಿಯನ್ನು ಭಾರತ ತಂಡ ರೋಹಿತ್ ಶರ್ಮಾ ನಾಯಕತ್ವದಲ್ಲಿ ಗೆದ್ದುಕೊಂಡಿತ್ತು. ಏಕದಿನ ಸರಣಿಯಲ್ಲಿ ಆಡಿದ್ದ ರೋಹಿತ್ ಶರ್ಮಾ, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ, ವಿರಾಟ್ ಕೊಹ್ಲಿ ಅವರಿಗೆ ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ವಿಶ್ರಾಂತಿ ನೀಡಲಾಗಿತ್ತು. ಕೊಹ್ಲಿ ಕುಟುಂಬ ಸದಸ್ಯರೊಂದಿಗೆ ಯುರೋಪ್ ಪ್ರವಾಸಕ್ಕೆ ತೆರಳಿದ್ರೆ, ವೇಗಿ ಜಸ್ಪ್ಪೀತ್ ಬುಮ್ರಾ, ಪತ್ನಿಯೊಂದಿಗೆ ಅಮೆರಿಕದ ಚಿಕಾಗೋ ಪ್ರವಾಸದಲ್ಲಿದ್ದಾರೆ. ರೋಹಿತ್ ಶರ್ಮಾ ಪತ್ನಿ ಮತ್ತು ಮಗಳೊಂದಿಗೆ ಲಂಡನ್”ನಲ್ಲಿ ರಜಾದಿನಗಳನ್ನು ಕಳೆದಿದ್ರು. ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲಿರುವ ಹಿಟ್’ಮ್ಯಾನ್ ರೋಹಿತ್, ಕೆರಿಬಿಯನ್ ನಾಡು ತಲುಪಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯ ಟ್ರಿನಿಡಾಡ್”ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯಲಿದೆ.

ವೆಸ್ಟ್ ಇಂಡೀಸ್ ವಿರುದ್ಧದಟಿ20 ಸರಣಿಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಆರ್.ಅಶ್ವಿನ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಭಾರತ Vs ವೆಸ್ಟ್ ಇಂಡೀಸ್: ಟಿ20 ಸರಣಿಯ ವೇಳಾಪಟ್ಟಿ
ಜುಲೈ 29: ಮೊದಲ ಟಿ20 ಪಂದ್ಯ (ಟ್ರಿನಿಡಾಡ್)
ಆಗಸ್ಟ್ 01: ಎರಡನೇ ಟಿ20 ಪಂದ್ಯ (ಸೇಂಟ್ ಕಿಟ್ಸ್)
ಆಗಸ್ಟ್ 02: ಮೂರನೇ ಟಿ20 ಪಂದ್ಯ (ಸೇಂಟ್ ಕಿಟ್ಸ್)
ಆಗಸ್ಟ್ 06: ನಾಲ್ಕನೇ ಟಿ20 ಪಂದ್ಯ (ಫ್ಲೋರಿಡಾ)
ಆಗಸ್ಟ್ 07: ಐದನೇ ಟಿ20 ಪಂದ್ಯ (ಫ್ಲೋರಿಡಾ)

ಇದನ್ನೂ ಓದಿ : Most Consecutive ODI Series WIN : ಪಾಕ್ ವಿಶ್ವದಾಖಲೆ ಪೀಸ್ ಪೀಸ್, ವಿಂಡೀಸ್”ನಲ್ಲಿ ಅದ್ವಿತೀಯ ವಿಶ್ವದಾಖಲೆ ಬರೆದ ಯಂಗ್ ಇಂಡಿಯಾ

ಇದನ್ನೂ ಓದಿ : Rishabh Pant helped Cricket Australia : ರಿಷಭ್ ಪಂತ್ ಕಾರಣದಿಂದ ಕ್ರಿಕೆಟ್ ಆಸ್ಟ್ರೇಲಿಯಾ ಖಜಾನೆಗೆ ಕೋಟಿ ಕೋಟಿ ದುಡ್ಡು.. ಹೇಗೆ ಗೊತ್ತಾ?

India Vs West Indies Rohit Sharma and Team Jolly trip in London

Comments are closed.