India vs Zimbabwe T20 Series : ಮುಂಬಾ: ಜಿಂಬಾಬ್ವೆ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನಾಡಲು ಶುಭಮನ್ ಗಿಲ್ (Shubman Gill) ನಾಯಕತ್ವದ ಯುವ ಭಾರತ ತಂಡ ಮಂಗಳವಾರ ಮುಂಜಾನೆ ಮುಂಬೈನಿಂದ ಹರಾರೆಗೆ ಪ್ರಯಾಣ ಬೆಳೆಸಿದೆ. ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯರಿಗೆ ಜಿಂಬಾಬ್ವೆ ಪ್ರವಾಸಕ್ಕೆ ವಿಶ್ರಾಂತಿ ನೀಡಲಾಗಿದ್ದು, ತಂಡವನ್ನು ಯುವ ಬಲಗೈ ಓಪನರ್ ಶುಭಮನ್ ಗಿಲ್ ಮುನ್ನಡೆಸಲಿದ್ದಾರೆ. ಸರಣಿಯ ಮೊದಲ ಪಂದ್ಯ ಜುಲೈ ಆರರಂದು ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿದೆ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿ (ICC T20 World Cup 2024) ಮುಕ್ತಾಯದ ಬೆನ್ನಲ್ಲೇ ಭಾರತ ತಂಡ ಜಿಂಬಾಬ್ವೆ ಪ್ರವಾಸಕ್ಕೆ (India tour of Zimbabwe) ತೆರಳಿದ್ದು, ಆತಿಥೇಯರ ವಿರುದ್ಧ 5 ಪಂದ್ಯಗಳ ಟಿ20 ಸರಣಿಯನ್ನಾಡಲಿದೆ. ಐಪಿಎಲ್ ಟೂರ್ನಿಯಲ್ಲಿ ಮಿಂಚಿದ ಬಹುತೇಕ ಯುವ ಆಟಗಾರರು ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾಗಿರುವ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಟಿ20 ವಿಶ್ವಕಪ್ ಗೆದ್ದು ಭಾರತ ತಂಡದ ಕೋಚ್ ಹುದ್ದೆಯನ್ನು ರಾಹುಲ್ ದ್ರಾವಿಡ್ ತೊರೆದಿರುವ ಕಾರಣ, ಜಿಂಬಾಬ್ವೆ ಪ್ರವಾಸದಲ್ಲಿ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಭಾರತ ತಂಡಕ್ಕೆ ಮಾರ್ಗದರ್ಶನ ನೀಡಲಿದ್ದಾರೆ.
https://x.com/bcci/status/1807914641265512514?s=46
ಇದನ್ನೂ ಓದಿ : Dinesh Karthik : ಆರ್‌ಸಿಬಿ ತಂಡಕ್ಕೆ ದಿನೇಶ್ ಕಾರ್ತಿಕ್ ಬ್ಯಾಟಿಂಗ್ ಕೋಚ್
ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಭಾರತ ತಂಡ (India’s squad for T20I series against Zimbabwe):
ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ನಿತೀಶ್ ರೆಡ್ಡಿ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಆವೇಶ್ ಖಾನ್, ಖಲೀಲ್ ಅಹ್ಮದ್, ಮುಕೇಶ್ ಕುಮಾರ್, ತುಷಾರ್ ದೇಶಪಾಂಡೆ.

ಇದನ್ನೂ ಓದಿ : Rahul Dravid : ವಿಧಿಯಾಟ.. ವಿಶ್ವಕಪ್ ಸೋತು ಕಣ್ಣೀರಿಟ್ಟಿದ್ದ ನೆಲದಲ್ಲೇ ವಿಶ್ವಕಪ್ ಎತ್ತಿ ಹಿಡಿದ ರಾಹುಲ್ ದ್ರಾವಿಡ್
ಭಾರತ Vs ಜಿಂಬಾಬ್ವೆ ಟಿ20 ಸರಣಿಯ ವೇಳಾಪಟ್ಟಿ (India tour of Zimbabwe 2024)
ಜುಲೈ 06: ಮೊದಲ ಟಿ20 ಪಂದ್ಯ (ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನ, ಹರಾರೆ)
ಜುಲೈ 07: ಎರಡನೇ ಟಿ20 ಪಂದ್ಯ (ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನ, ಹರಾರೆ)
ಜುಲೈ 10: ಮೂರನೇ ಟಿ20 ಪಂದ್ಯ (ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನ, ಹರಾರೆ)
ಜುಲೈ 13: ನಾಲ್ಕನೇ ಟಿ20 ಪಂದ್ಯ (ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನ, ಹರಾರೆ)
ಜುಲೈ 14: ಐದನೇ ಟಿ20 ಪಂದ್ಯ (ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನ, ಹರಾರೆ)
ಇದನ್ನೂ ಓದಿ : Hurricane-Indian Cricket Team: ಬಾರ್ಬೆಡೋಸ್’ನಲ್ಲಿ ಚಂಡಮಾರುತ, ಇನ್ನೂ ಬುಕ್ ಆಗಿಲ್ಲ ವಿಶ್ವ ಚಾಂಪಿಯನ್ನರ ರಿಟರ್ನ್ ಫ್ಲೈಟ್ ಟಿಕೆಟ್!
India vs Zimbabwe T20 Series Indian Cricket Team Travel To Zimbabwe