India W vs South Africa W : ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್, ಏಕದಿನ ಹಾಗೂ ಟಿ20 ಸರಣಿಗಳಿಗೆ ಭಾರತ ಮಹಿಳಾ ತಂಡಗಳನ್ನು ಪ್ರಕಟಿಸಲಾಗಿದ್ದು, ಕರ್ನಾಟಕದ ಮೂವರು ಆಟಗಾರ್ತಿಯರು ಸ್ಥಾನ ಪಡೆದಿದ್ದಾರೆ. ಯುವ ಅಲ್‌ರೌಂಡರ್ ಶ್ರೇಯಾಂಕಾ ಪಾಟೀಲ್ ಏಕದಿನ ಹಾಗೂ ಟಿ20 ತಂಡದಲ್ಲಿ ಸ್ಥಾನ ಪಡೆದರೆ, ರಾಜೇಶ್ವರಿ ಗಾಯಕ್ವಾಡ್ ಹಾಗೂ ಶುಭಾ ಸತೀಶ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ, ಒಂದು ಟೆಸ್ಟ್ ಪಂದ್ಯ ಹಾಗೂ 3 ಪಂದ್ಯಗಳ ಟಿ20 ಸರಣಿ ಯನ್ನಾಡಲಿದೆ. ಏಕದಿನ ಸರಣಿಯ ಮೂರು ಪಂದ್ಯಗಳು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 16ರಿಂದ ಜೂನ್ 23ರವರೆಗೆ ನಡೆಯಲಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ಮಹಿಳಾ ತಂಡ: ಹರ್ಮನ್ ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧನ (ಉಪನಾಯಕಿ), ಶೆಫಾಲಿ ವರ್ಮಾ, ಜೆಮಿಮಾ ರಾಡ್ರಿಗ್ಸ್, ದೀಪ್ತಿ ಶರ್ಮಾ, ರಿಚಾ ಘೋಶ್ (ವಿಕೆಟ್ ಕೀಪರ್), ಉಮಾ ಛೆಟ್ರಿ (ವಿಕೆಟ್ ಕೀಪರ್), ದಯಾಳನ್ ಹೇಮಲತಾ, ಆಶಾ ಶೋಭನ, ರಾಧಾ ಯಾದವ್, ಶ್ರೇಯಾಂಕ ಪಾಟೀಲ್, ಸೈಕಾ ಇಶಾಖ್, ಪೂಜಾ ವಸ್ತ್ರಕಾರ್, ರೇಣುಕಾ ಸಿಂಗ್, ಪ್ರಿಯಾ ಪುನಿಯಾ, ಅರುಂಧತಿ ರೆಡ್ಡಿ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ಮಹಿಳಾ ತಂಡ: ಹರ್ಮನ್ ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧನ (ಉಪನಾಯಕಿ), ಶೆಫಾಲಿ ವರ್ಮಾ, ಜೆಮಿಮಾ ರಾಡ್ರಿಗ್ಸ್, ದೀಪ್ತಿ ಶರ್ಮಾ, ರಿಚಾ ಘೋಶ್ (ವಿಕೆಟ್ ಕೀಪರ್), ಉಮಾ ಛೆಟ್ರಿ (ವಿಕೆಟ್ ಕೀಪರ್), ದಯಾಳನ್ ಹೇಮಲತಾ, ಆಶಾ ಶೋಭನ, ರಾಧಾ ಯಾದವ್, ಶ್ರೇಯಾಂಕ ಪಾಟೀಲ್, ಸೈಕಾ ಇಶಾಖ್, ಪೂಜಾ ವಸ್ತ್ರಕಾರ್, ರೇಣುಕಾ ಸಿಂಗ್, ಅರುಂಧತಿ ರೆಡ್ಡಿ, ಸಜಾನ ಸಜೀವನ್, ಅಮನ್ಜೋತ್ ಕೌರ್.

ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಭಾರತ ಮಹಿಳಾ ತಂಡ: ಹರ್ಮನ್ ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧನ (ಉಪನಾಯಕಿ), ಶೆಫಾಲಿ ವರ್ಮಾ, ಜೆಮಿಮಾ ರಾಡ್ರಿಗ್ಸ್, ದೀಪ್ತಿ ಶರ್ಮಾ, ರಿಚಾ ಘೋಶ್ (ವಿಕೆಟ್ ಕೀಪರ್), ಉಮಾ ಛೆಟ್ರಿ (ವಿಕೆಟ್ ಕೀಪರ್), ಸ್ನೇಹ್ ರಾಣಾ, ಶುಭಾ ಸತೀಶ್, ಸೈಕಾ ಇಶಾಖ್, ರಾಜೇಶ್ವರಿ ಗಾಯಕ್ವಾಡ್, ಪೂಜಾ ವಸ್ತ್ರಕಾರ್, ರೇಣುಕಾ ಸಿಂಗ್, ಪ್ರಿಯಾ ಪುನಿಯಾ, ಅರುಂಧತಿ ರೆಡ್ಡಿ, ಮೇಘನಾ ಸಿಂಗ್.
India W vs South Africa W India Women’s Team Select 3 Karnataka Players