Rahul Dravid : ಬೆಂಗಳೂರು: “ದಿ ಗ್ರೇಟ್ ವಾಲ್ ಆಫ್ ಇಂಡಿಯಾ” ಖ್ಯಾತಿಯ ರಾಹುಲ್ ದ್ರಾವಿಡ್ (Rahul Dravid) ಈಗ ವಿಶ್ವಕಪ್ ಚಾಂಪಿಯನ್ ತಂಡದ ಕೋಚ್. ಭಾರತ ಕ್ರಿಕೆಟ್ ತಂಡ ಆಟಗಾರನಾಗಿ, ನಾಯಕನಾಗಿ ವಿಶ್ವಕಪ್ ಗೆಲ್ಲುವಲ್ಲಿ ವಿಫಲರಾಗಿದ್ದ ಕನ್ನಡಿಗ ರಾಹುಲ್ ದ್ರಾವಿಡ್ (Rahul Dravid), ಇದೀಗ ಭಾರತ ಕ್ರಿಕೆಟ್ ತಂಡ (Indian Cricket Team) ದ ಕೋಚ್ ಆಗಿ ವಿಶ್ವ ಕಪ್ ಕಿರೀಟವನ್ನು (T20 World Cup 2024) ಮುಡಿಗೇರಿಸಿಕೊಂಡಿದ್ದಾರೆ.

ವೆಸ್ಟ್ ಇಂಡೀಸ್’ನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ರೋಚಕವಾಗಿ ಮಣಿಸಿದ್ದ ಭಾರತ 17 ವರ್ಷಗಳ ನಂತರ ಟಿ20 ವಿಶ್ವಕಪ್ ಟ್ರೋಫಿಯನ್ನು ಗೆದ್ದ ಐತಿಹಾಸಿಕ ಸಾಧನೆ ಮಾಡಿತ್ತು. ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಕೋಚ್ ರಾಹುಲ್ ದ್ರಾವಿಡ್ ಭಾರತ ತಂಡದ ಕೋಚ್ ಹುದ್ದೆ ತೊರೆದಿದ್ದರು. ಟೀಮ್ ಇಂಡಿಯಾ ಜೊತೆಗಿನ ದ್ರಾವಿಡ್ ಅವರ ಒಪ್ಪಂದ ಟಿ20 ವಿಶ್ವಕಪ್ ಟೂರ್ನಿಗೆ ಅಂತ್ಯಗೊಂಡಿತ್ತು.

ದ್ರಾವಿಡ್ ಅವರ ಉತ್ತರಧಿಕಾರಿಯಾಗಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಭಾರತ ತಂಡದ ನೂತನ ಹೆಡ್ ಕೋಚ್ ಆಗಿ ನೇಮಕಗೊಂಡಿದ್ದಾರೆ. ಹಾಗಾದ್ರೆ ರಾಹುಲ್ ದ್ರಾವಿಡ್ ಅವರ ಮುಂದಿನ ನಡೆಯೇನು? ಈ ಕುತೂಹಲ ತುಂಬಾ ಜನರಿಗಿದ್ದೇ ಇದೆ. ಭಾರತ ತಂಡದ ಹೆಡ್ ಕೋಚ್ ಆಗುವ ಮುನ್ನ ರಾಹುಲ್ ದ್ರಾವಿಡ್ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (National Cricket Academy) ಮುಖ್ಯಸ್ಥರಾಗಿದ್ದರು.
ಇದನ್ನೂ ಓದಿ : Yuvraj Singh: 42ನೇ ವಯಸ್ಸಲ್ಲೂ ಅದೇ ಖದರ್, ಅದೇ ಪವರ್: ಕಾಂಗರೂ ಬೇಟೆಯಾಡಿದ ಯುವರಾಜ !
ಭಾರತ ತಂಡದ ಕೋಚ್ ಆಗುತ್ತಿದ್ದಂತೆ NCA ಮುಖ್ಯಸ್ಥನ ಸ್ಥಾನ ತೊರೆದಿದ್ದರು. ಆ ಸ್ಥಾನಕ್ಕೆ ವಿವಿಎಸ್ ಲಕ್ಷ್ಮಣ್ ಬಂದಿದ್ದರು. ಇದೀಗ ರಾಹುಲ್ ದ್ರಾವಿಡ್ ಮತ್ತೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಜವಾಬ್ದಾರಿ ವಹಿಸಿಕೊಳ್ಳುವ ಸಾಧ್ಯತೆಯಿದೆ. ಮತ್ತೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಜವಾಬ್ದಾರಿ ವಹಿಸಿಕೊಳ್ಳಲು ದ್ರಾವಿಡ್ ಅವರಿಗೆ ಇಷ್ಟವಿಲ್ಲದಿದ್ದರೆ ಯಾವುದಾದರೂ ಐಪಿಎಲ್ ತಂಡದ ಮೆಂಟರ್ ಆಗುವ ಸಾಧ್ಯತೆಗಳೂ ಇವೆ.

ಈ ಹಿಂದೆ ದ್ರಾವಿಡ್ ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಮೆಂಟರ್ ಆಗಿದ್ದರು. ಈ ಬಾರಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಮೆಂಟರ್ ಸ್ಥಾನ ತೊರೆದು ಗೌತಮ್ ಗಂಭೀರ್ ಟೀಮ್ ಇಂಡಿಯಾ ಕೋಚ್ ಆಗಿದ್ದಾರೆ. ಹೀಗಾಗಿ ಕೆಕೆಆರ್ ಫ್ರಾಂಚೈಸಿ ತನ್ನ ತಂಡದ ಮೆಂಟರ್ ಸ್ಥಾನಕ್ಕೆ ದ್ರಾವಿಡ್ ಅವರನ್ನು ಸಂಪರ್ಕಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಇದನ್ನೂ ಓದಿ : Harbhajan Singh Vs PCB: ಪಾಕಿಸ್ತಾನಕ್ಕೆ ಹಿಗ್ಗಾಮುಗ್ಗ ಜಾಡಿಸಿದ ಟರ್ಬನೇಟರ್, ಕಾರಣವೇನು ಗೊತ್ತಾ ?
ರಾಹುಲ್ ದ್ರಾವಿಡ್ 2021ರ ನವೆಂಬರ್ ತಿಂಗಳಲ್ಲಿ ಭಾರತ ತಂಡದ ಹೆಡ್ ಕೋಚ್ ಆಗಿ ನೇಮಕಗೊಂಡಿದ್ದರು. ದ್ರಾವಿಡ್ ಮಾರ್ಗದರ್ಶನದಲ್ಲಿ ಭಾರತ ತಂಡ 2022ರ ಟಿ20 ವಿಶ್ವಕಪ್’ನಲ್ಲಿ ಸೆಮಿಫೈನಲ್ ಪ್ರವೇಶಿಸಿತ್ತು. 2023ರಲ್ಲಿ ನಡೆದ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ವಿರುದ್ಧ ಸೋಲು ಕಂಡಿತ್ತು.

2023ರಲ್ಲೇ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್’ನಲ್ಲೂ ದ್ರಾವಿಡ್ ಮಾರ್ಗದರ್ಶನದ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ವಿರುದ್ಧ ಸೋತು ನಿರಾಸೆ ಅನುಭವಿಸಿತ್ತು. ಆದ್ರೆ ಈ ವರ್ಷ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಇದನ್ನೂ ಓದಿ : Gautham Gambhir 1 Rs Meals : ಒಂದು ರೂಪಾಯಿಗೆ ಹೊಟ್ಟೆ ತುಂಬಾ ಊಟ ಹಾಕುತ್ತಿದ್ದರು ಗೌತಮ್ ಗಂಭೀರ್
Indian Cricket Team ex Head Coach Rahul Dravid Future Plan