ಅಂತರಾಷ್ಟ್ರೀಯ ಕ್ರಿಕೆಟ್ ಗೆ ಧೋನಿ ಗುಡ್ ಬೈ !

0

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ದಿನದಂದೇ ತಮ್ಮ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್​ ಜೀವನವನ್ನು ಕೊನೆಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಅವರು ತಮ್ಮ ನಿವೃತ್ತಿಯ ಕುರಿತಾದ ವಿಡಿಯೋವನ್ನು ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ನಿವೃತ್ತಿ ಸಮಯ ಬಂದಾಯಿತು ಎಂದಿದ್ದಾರೆ.

ಟೀಂ ಇಂಡಿಯಾವನ್ನು ಮುನ್ನೆಡೆಸಿದ್ದ ರಾಂಚಿಯ ಮಹೇಂದ್ರ ಸಿಂಗ್ ಧೋನಿ ದೇಶಕ್ಕೆ ಎರಡು ಬಾರಿ ವಿಶ್ವಕಪ್ ತಂದುಕೊಂಡ ಕೀರ್ತಿಗೆ ಪಾತ್ರರಾಗಿದ್ದಾರೆ.

ಟೀಂ ಇಂಡಿಯಾ ಪರ ಮಹೇಂದ್ರ ಸಿಂಗ್ ಧೋನಿ 2019 ವಿಶ್ವಕಪ್​ನಲ್ಲಿ ಸೆಮಿ ಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿದಿದ್ದರು.

ಬಳಿಕ ಕ್ರಿಕೆಟ್​ನಿಂದ ದೀರ್ಘ ವಿರಾಮ ಪಡೆದುಕೊಂಡಿದ್ದರು. ಇದೀಗ ದಿಢೀರ್ ವಿದಾಯ ಘೋಷಿಸಿದ್ದು ಅವರ ಕೋಟ್ಯಾಂತರ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.

2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಎಂಎಸ್ ಧೋನಿ ಪದಾರ್ಪಣೆ ಮಾಡಿದ್ದರು. ಧೋನಿ ನೇತೃತ್ವದಲ್ಲಿ ಭಾರತ 2007ರ ಟಿ-20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಕಪ್ ಗೆದ್ದು ಬೀಗಿತ್ತು.

ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿರುವ ಎಂಎಸ್ ಧೋನಿ ಅವರು ಐಪಿಎಲ್ ನಲ್ಲಿ ಮಾತ್ರ ಆಡಲಿದ್ದಾರೆ.

ಕಳೆದೊಂದು ದಶಕಗಳಿಂದಲೂ ಚೆನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನೆಡೆಸುತ್ತಿರುವ ಧೋನಿ ಈ ಬಾರಿಯೂ ಚೆನೈ ತಂಡವನ್ನೇ ಮುನ್ನೆಡೆಸಲಿದ್ದಾರೆ.

https://www.instagram.com/tv/CD6ZQn1lGBi/
Leave A Reply

Your email address will not be published.