ಶಾರ್ಜಾ: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಭರವಸೆಯ ಆಟಗಾರರಾದ ಶ್ರೇಯಸ್ ಅಯ್ಯರ್ ಹಾಗೂ ಪ್ರಥ್ವಿ ಶಾ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ದದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಗೆಲುವು ದಾಖಲಿಸಿದೆ.

ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ, ನಾಯಕ ಶ್ರೇಯಸ್ ಅಯ್ಯರ್ (88*ರನ್, 38ಎಸೆತ, 7 ಬೌಂಡರಿ, 6 ಸಿಕ್ಸರ್) ಹಾಗೂ ಯುವ ಬ್ಯಾಟ್ಸ್‌ಮನ್ ಪೃಥ್ವಿ ಷಾ (66ರನ್, 41 ಎಸೆತ, 4 ಬೌಂಡರಿ, 4 ಸಿಕ್ಸರ್) ಜೋಡಿಯ ಅಬ್ಬರದ ಬ್ಯಾಟಿಂಗ್ ಫಲವಾಗಿ 4 ವಿಕೆಟ್‌ಗೆ 228 ರನ್ ಪೇರಿಸಿತು.

ಈ ಬೃಹತ್ ಮೊತ್ತ ಬೆನ್ನಟ್ಟಿದ ಕೆಕೆಆರ್ ತಂಡ, ಬಿರುಸಿನ ಆರಂಭದ ನಡುವೆಯೂ 8 ವಿಕೆಟ್‌ಗೆ 210 ರನ್ ಗಳಿಸಲಷ್ಟೇ ಶಕ್ತವಾಯಿತು.
ನಂತರ ಬ್ಯಾಟಿಂಗ್ ಗೆ ಇಳಿದ ಕೆಕೆಆರ್ ತಂಡಕ್ಕೆ ಸುನಿಲ್ ನರೇನ್ ಮೂಲಕ ಆರಂಭಿಕ ಆಘಾತ ಎದುರಾಗಿತ್ತು.

ಸ್ಫೋಟಕ ಬ್ಯಾಟ್ಸ್‌ಮನ್ ನಿತೀಶ್ ರಾಣಾ (58ರನ್, 35 ಎಸೆತ, 4 ಬೌಂಡರಿ, 4 ಸಿಕ್ಸರ್) ಅಬ್ಬರದ ಬ್ಯಾಟಿಂಗ್ ಮೂಲಕ ಉತ್ತಮ ಆರಂಭ ನೀಡಿದರು.

ಆನ್ರಿಚ್ ನೋರ್ಜೆ (33ಕ್ಕೆ 3) ಹಾಗೂ ಹರ್ಷಲ್ ಪಟೇಲ್ (34ಕ್ಕೆ 2) ಜೋಡಿ ಕೆಕೆಆರ್‌ಗೆ ಆಘಾತ ನೀಡಿತು. ಇದರ ನಡುವೆಯೂ ಮಾರ್ಗನ್ ಹಾಗೂ ರಾಹುಲ್ ತ್ರಿಪಾಠಿ (36 ರನ್, 16 ಎಸೆತ, 3 ಬೌಂಡರಿ, 3 ಸಿಕ್ಸರ್) ಜೋಡಿ 31 ಎಸೆತಗಳಿಗೆ 78 ರನ್ ಕಲೆಹಾಕಿ ಪ್ರತಿಹೋರಾಟ ತೋರಿತು. ಪ್ರತಿ ಹೋರಾಟದ ನಡುವೆಯೂ ಡೆಲ್ಲಿ ತಂಡ 18 ರನ್‌ಗಳಿಂದ ಜಯ ದಾಖಲಿಸಿತು.