ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂಡಿಯನ್ ಪ್ರೀಮಿಯರ್ ಲೀಗ್ (IPL 2022 ) 2022 ಇಂದಿನ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್.ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಪ್ರಸಕ್ತ ಐಪಿಎಲ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಬೆಂಗಳೂರು ಗೆಲುವಿನ ಕನಸು ಕಾಣುತ್ತಿದೆ. ಇನ್ನೊಂದೆಡೆಯಲ್ಲಿ ಲಕ್ನೋ ತಂಡ ಕೂಡ ಬಲಿಷ್ಠವಾಗಿದ್ದು, ಕನ್ನಡಿಗರಾದ ಕೆ.ಎಲ್.ರಾಹುಲ್, ಮನೀಶ್ ಪಾಂಡೆ ಹಾಗೂ ಕೆ.ಗೌತಮ್ ಬೆಂಗಳೂರು ತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ. ಅದ್ರಲ್ಲೂ ಇಂದಿನ ಪಂದ್ಯದಲ್ಲಿ ಆಡುವ ಬಳಗದಲ್ಲಿ ಬಾರೀ ಬದಲಾವಣೆ ನಡೆಯುವ ಸಾಧ್ಯತೆಯಿದೆ.
ಕಳೆದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಮತ್ತು ಜೋಶ್ ಹೇಜಲ್‌ವುಡ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅದ್ವಿತೀಯ ಪ್ರದರ್ಶನ ನೀಡಿದ್ದಾರೆ. ಆದರೆ ಅಗ್ರ ಕಮಾಂಕದಲ್ಲಿ ರನ್ ಕೊರತೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ತಂಡ ಇಂದು ಆಡುವ ಬಳಗದಲ್ಲಿ ಬದಲಾವಣೆಯನ್ನು ಮಾಡುವ ಸಾಧ್ಯತೆಯಿದೆ. ಲಕ್ನೋ ತಂಡ ಮುಂಬೈ ವಿರುದ್ದ ಆಡಿರುವ ತಂಡವನ್ನೇ ಕಣಕ್ಕೆ ಇಳಿಸುವ ಸಾಧ್ಯತೆಯಿದೆ. ಅದ್ರಲ್ಲೂ ನಾಯಕ ಕೆ.ಎಲ್. ರಾಹುಲ್ ಅದ್ಬುತ ಫಾರ್ಮ್‌ನಲ್ಲಿದ್ದು, ಐಪಿಎಲ್ ಪ್ರಸಕ್ತ ಪಂದ್ಯಾವಳಿಯಲ್ಲಿ ಎರಡನೇ ಅತೀ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದ ಪಂದ್ಯದಲ್ಲಿ ಮತ್ತೊಮ್ಮೆ ಲಕ್ನೋ ತಂಡಕ್ಕೆ ನೆರವಾಗುವ ಸಾಧ್ಯತೆಯಿದೆ.
ಲಕ್ನೋ ತಂಡಕ್ಕೆ ಕೆ.ಎಲ್.ರಾಹುಲ್, ಜೇಸನ್ ಹೋಲ್ಡರ್, ದುಷ್ಮಂತ್ ಚಮೀರಾ, ಆವೇಶ್ ಖಾನ್, ರವಿ ಬಿಷ್ಣೋಯಿ, ಮಾರ್ಕಸ್ ಸ್ಟೋನಿಸ್ ಮತ್ತು ಕೃನಾಲ್ ಪಾಂಡ್ಯ ಲಕ್ನೋ ತಂಡದ ಟ್ರಂಫ್ ಕಾರ್ಡ್. ಇನ್ನೊಂದೆಡೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಬಲಿಷ್ಠವಾಗಿ ವಿರಾಟ್ ಕೊಹ್ಲಿ, ಫಾಪ್ ಡುಪ್ಲಸಿಸ್, ವನಿಂದು ಹಸರಂಗ, ಜೋಶ್ ಹೇಜಲ್‌ವುಡ್, ಹರ್ಷಲ್ ಪಟೇಲ್, ಶಹಬಾಜ್ ಅಹ್ಮದ್, ಮೊಹಮ್ಮದ್ ಸಿರಾಜ್ ಮತ್ತು ಗ್ಲೇನ್ ಮ್ಯಾಕ್ಸ್‌ವೆಲ್ ತಂಡಕ್ಕೆ ನೆರವಾಗಲಿದ್ದಾರೆ.
IPL 2022 : ಲಕ್ನೋ ಸೂಪರ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ತಂಡ
ಲಕ್ನೋ ಸೂಪರ್ ಜೈಂಟ್ಸ್ ಸಂಭಾವ್ಯ ಆಟಗಾರರ XI:
ಕೆಎಲ್ ರಾಹುಲ್ (ಸಿ), ಕ್ವಿಂಟನ್ ಡಿ ಕಾಕ್, ಮನೀಶ್ ಪಾಂಡೆ, ದೀಪಕ್ ಹೂಡಾ, ಮಾರ್ಕಸ್ ಸ್ಟೋನಿಸ್, ಆಯುಷ್ ಬಡೋನಿ, ಜೇಸನ್ ಹೋಲ್ಡರ್, ಕೃನಾಲ್ ಪಾಂಡ್ಯ, ದುಷ್ಮಂತ ಚಮೀರಾ, ಅವೇಶ್ ಖಾನ್, ರವಿ ಬಿಷ್ಣೋಯ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ಆಡುವ XI:
ಫಾಫ್ ಡು ಪ್ಲೆಸಿಸ್ (ಸಿ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ : IPL 2022 ಪ್ರವೇಶಿಸಿದ ಭಾರತದ ವೇಗದ ಬೌಲರ್ ಇಶಾಂತ್ ಶರ್ಮಾ
ಇದನ್ನೂ ಓದಿ : ಕ್ರಿಸ್ಟಿಯಾನೋ ರೊನಾಲ್ಡೋ ನವಜಾತ ಗಂಡು ಮಗು ನಿಧನ
IPL 2022 : Big changes in RCB vs LSG Playing XI