IPL 2022 Mi vs PBKS : ಗೆಲುವಿನ ಖಾತೆ ತೆರೆಯುತ್ತಾರಾ ರೋಹಿತ್‌ ಶರ್ಮಾ : ಇಲ್ಲಿದೆ ಮುಂಬೈ – ಪಂಜಾಬ್‌ ಪ್ಲೇಯಿಂಗ XI

ಮುಂಬೈ : ಚೆನ್ನೈ ಸೂಪರ್‌ ಕಿಂಗ್ಸ್‌ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ (IPL 2022) ಕೊನೆಗೂ ಮೊದಲ ಗೆಲುವು ದಾಖಲಿಸಿದೆ. ಇನ್ನೊಂದೆಡೆಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್‌ ತಂಡ ಇಂದು ಪಂಜಾಬ್‌ ವಿರುದ್ದ (Mi vs PBKS)ಗೆಲ್ಲವೇ ಬೇಕಾದ ಅನಿವಾರ್ಯತೆಗೆ ಸಿಲುಕಿದೆ. ನಾಲ್ಕು ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರೋಹಿತ್‌ ಶರ್ಮಾ ಬಳಗ ಮಯಾಂಕ್‌ ಅಗರ್ವಾಲ್‌ ಬಳಗದ ಸವಾಲನ್ನು ಎದುರಿಸಬೇಕಾಗಿದೆ. ಹೀಗಾಗಿ ಇಂದಿನ ಪಂದ್ಯ ಕುತೂಹಲವನ್ನು ಮೂಡಿಸಿದೆ.

ಮುಂಬೈ ಇಂಡಿಯನ್ಸ್‌ ತಂಡ ಇಂದು ಕೆಲ ಬದಲಾವಣೆಗಳೊಂದಿಗೆ ಕಣಕ್ಕೆ ಇಳಿಯುವ ಸಾಧ್ಯತೆಯಿದೆ. ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು ಒಟ್ಟು 28 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಮುಂಬೈ ಇಂಡಿಯನ್ಸ್ 15 ಬಾರಿ ಹಾಗೂ ಪಂಜಾಬ್ ಕಿಂಗ್ಸ್ 13 ಬಾರಿ ಗೆಲುವನ್ನು ಕಂಡಿವೆ. ಇನ್ನು 2019 ರಿಂದ ಇತ್ತೀಚಿಗೆ ಒಟ್ಟು 6 ಪಂದ್ಯಗಳನ್ನು ಆಡಿದ್ದು, ಈ ಪೈಕಿ ಎರಡೂ ತಂಡಗಳು ತಲಾ 3 ಪಂದ್ಯಗಳಲ್ಲಿ ಗೆಲುವು ದಾಖಲಿಸಿವೆ.

ಯಾವಾಗ : ಬುಧವಾರ, ಏಪ್ರಿಲ್ 13, 2022, 7:30 PM IST

ಎಲ್ಲಿ: ಮುಂಬೈ ಇಂಡಿಯನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್, ಎಂಸಿಎ ಸ್ಟೇಡಿಯಂ, ಪುಣೆ

ಏನನ್ನು ನಿರೀಕ್ಷಿಸಬಹುದು : ಹವಾಮಾನವು ಸಂಜೆಯಲ್ಲೂ ಸ್ವಲ್ಪ ಬಿಸಿಯಾಗಿರುತ್ತದೆ. 30 ಡಿಗ್ರಿ ಸೆಲ್ಸಿಯಸ್‌ಗಿಂತ ಉಷ್ಣಾಂಶ ಇರಲಿದೆ. ಆದರೆ ಇಬ್ಬನಿಯು ಪಂದ್ಯದ ಮೇಲೆ ಅಷ್ಟೊಂದು ಪರಿಣಾಮ ಬೀರುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆ.

ಪಂಜಾಬ್ ಕಿಂಗ್ಸ್:

ಸಂಭಾವ್ಯ XI : ಮಯಾಂಕ್ ಅಗರ್ವಾಲ್ (ಸಿ), ಶಿಖರ್ ಧವನ್, ಜಾನಿ ಬೈರ್‌ಸ್ಟೋವ್ / ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಶಾರುಖ್ ಖಾನ್, ಓಡಿಯನ್ ಸ್ಮಿತ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್, ವೈಭವ್ ಅರೋರಾ

ಪಂಜಾಬ್ ಕಿಂಗ್ಸ್ ತಂಡ: ಮಯಾಂಕ್ ಅಗರ್ವಾಲ್ (ಸಿ), ಶಿಖರ್ ಧವನ್, ಜಾನಿ ಬೈರ್‌ಸ್ಟೋವ್ (ಡಬ್ಲ್ಯೂ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಒಡಿಯನ್ ಸ್ಮಿತ್, ಶಾರುಖ್ ಖಾನ್, ಕಗಿಸೊ ರಬಾಡ, ರಾಹುಲ್ ಚಾಹರ್, ವೈಭವ್ ಅರೋರಾ, ಅರ್ಷ್‌ದೀಪ್ ಸಿಂಗ್, ಬೆನ್ನಿ ಹೋವೆಲ್, ಭಾನುಕಾ ರಾಜಪಕ್ಸೆ, ಸಂದೀಪ್ ಶರ್ಮಾ, ರಿಷಿ ಧವನ್, ಬಲ್ತೇಜ್ ಸಿಂಗ್, ರಿಟಿಕ್ ಚಟರ್ಜಿ, ಪ್ರೇರಕ್ ಮಂಕಡ್, ಇಶಾನ್ ಪೊರೆಲ್, ಅಥರ್ವ ಟೈಡೆ, ಪ್ರಭ್‌ಸಿಮ್ರಾನ್ ಸಿಂಗ್, ಹರ್‌ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ಅನ್ಶ್ ಪಟೇಲ್, ರಾಜ್ ಬಾವಾ

ಮುಂಬೈ ಇಂಡಿಯನ್ಸ್:

ಸಂಭಾವ್ಯ XI : ಇಶಾನ್ ಕಿಶನ್ (WK), ರೋಹಿತ್ ಶರ್ಮಾ (c), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಫ್ಯಾಬಿಯನ್ ಅಲೆನ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಜಯದೇವ್ ಉನದ್ಕತ್ /ಟೈಮಲ್ ಮಿಲ್ಸ್, ಬೇಸಿಲ್ ಥಂಪಿ

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ಸಿ), ಇಶಾನ್ ಕಿಶನ್ (ಡಬ್ಲ್ಯೂ), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ರಮಣದೀಪ್ ಸಿಂಗ್, ಜಯದೇವ್ ಉನದ್ಕತ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಬಾಸಿಲ್ ಥಂಪಿ, ಟೈಮಲ್ ಮಿಲ್ಸ್, ಡೇನಿಯಲ್ ಸಾಮ್ಸ್, ಫ್ಯಾಬಿಯನ್ ಅಲೆನ್, ಅನ್ಮೋಲ್ಪ್ರೀತ್ ಸಿಂಗ್, ಸಂಜಯ್ ಯಾದವ್, ರಿಲೆ ಮೆರೆಡಿತ್, ಮಯಾಂಕ್ ಮಾರ್ಕಂಡೆ, ಟಿಮ್ ಡೇವಿಡ್, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ರಾಹುಲ್ ಬುದ್ಧಿ, ಅರ್ಷದ್ ಖಾನ್

ಇದನ್ನೂ ಓದಿ : SRH vs GT : ಸೋಲನ್ನೇ ಕಾಣದ ಗುಜರಾತ್‌ ವಿರುದ್ದ ಗೆಲುವು ಸಾಧಿಸುತ್ತಾ ಹೈದರಾಬಾದ್

ಇದನ್ನೂ ಓದಿ : 153.3 ಕಿಮೀ ವೇಗದಲ್ಲಿ ಬೌಲಿಂಗ್‌ : ಉಮ್ರಾನ್ ಮಲಿಕ್ IPL 2022 ರ ಅತ್ಯಂತ ವೇಗದ ಬೌಲರ್‌

IPL 2022 Mi vs PBKS Playing XI Mumbai Indians and Punjab Kings

Comments are closed.