ಅಹಮದಾಬಾದ್ : IPL 2023 Final : ಇಂಡಿಯನ್ ಪ್ರೀಮಿಯರ್ ಲೀಗ್‌ನ ಅಂತಿಮ ಪಂದ್ಯ ಇಂದು ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಲ್ ಫೈನಲ್ ಪಂದ್ಯದಲ್ಲಿ 4 ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಕಳೆದ ಬಾರಿಯ ಚಾಂಪಿಯನ್ ಗುಜರಾತ್ ಟೈಟಾನ್ಸ್ (GT) ತಂಡವನ್ನು ( CSK Vs GT) ಎದುರಿಸಲಿದೆ. ಐಪಿಎಲ್ ಪಂದ್ಯಾವಳಿಯಲ್ಲಿಯೇ 10 ಬಾರಿ ಫೈನಲ್ ಪ್ರವೇಶಿಸುವ ಮೂಲಕ ಅತೀ ಹೆಚ್ಚು ಫೈನಲ್‌ಗೆ (IPL Final) ಎಂಟ್ರಿಕೊಟ್ಟ ತಂಡ ಅನ್ನೋ ಹೆಗ್ಗಳಿಕೆಗೆ ಚೆನ್ನೈ ಸೂಪರ್ ಕಿಂಗ್ಸ್ ಪಾತ್ರವಾಗಿದೆ. ಆದರೆ ದುರಂತವೆಂದ್ರೆ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್‌ನಲ್ಲಿ ಗೆದ್ದ ಪಂದ್ಯಗಳಿಗಿಂತ ಸೋತ ಪಂದ್ಯಗಳೇ ಹೆಚ್ಚು.
ನಾಯಕ ಮಹೇಂದ್ರ ಸಿಂಗ್ ಧೋನಿ ನಾಯಕತ್ವ ತ್ಯೆಜಿಸಿದ ಬೆನ್ನಲ್ಲೇ ಕಳೆದ ಬಾರಿಯ ಐಪಿಎಲ್ ಋತುವಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹೀನಾಯವಾಗಿ ಸೋಲನ್ನು ಕಂಡು ಪ್ಲೇ ಆಫ್‌ಗೂ ಮೊದಲೇ ಐಪಿಎಲ್‌ನಿಂದ ಹೊರ ಬಿದ್ದಿತ್ತು. ಆದರೆ ಈ ಬಾರಿ ಚೆನ್ನೈ ತಂಡ ಫಿನಿಕ್ಸ್ ನಂತೆ ಎದ್ದು ಬಂದಿದೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ತಂಡ ಉತ್ತಮ ಪ್ರದರ್ಶನ ನೀಡಿದೆ. ಆರಂಭಿಕ ಲೀಗ್ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೊಂಚ ಎಡವಿದ್ರೂ ಕೂಡ ನಂತರದಲ್ಲಿ ಚೆನ್ನೈ ಅದ್ಬುತ ಪ್ರದರ್ಶನವನ್ನು ನೀಡಿದೆ. ಅದ್ರಲ್ಲೂ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ ಸೋಲಿನ ರುಚಿ ತೋರಿಸಿತ್ತು. ಐಪಿಎಲ್ ಪಂದ್ಯಾವಳಿಯಲ್ಲಿ ಒಟ್ಟು ಚೆನ್ನೈ ಸೂಪರ ಕಿಂಗ್ಸ್ ತಂಡ ಒಟ್ಟು 10 ಬಾರಿ ಫೈನಲ್ ಗೆ ಎಂಟ್ರಿ ಕೊಟ್ಟಿದೆ. ಈ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ 4 ಬಾರಿ ಐಪಿಎಲ್ ಟ್ರೋಫಿ ಜಯಿಸಿದ್ದು, ಐದು ಬಾರಿ ಸೋಲನ್ನು ಕಂಡಿದೆ. ಮುಂಬೈ ಇಂಡಿಯನ್ಸ್, ಸನ್‌ರೈಸಸ್ ಹೈದ್ರಾಬಾದ್, ಕೋಲ್ಕತ್ತಾ ನೈಟ್ ರೈಡರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ವಿರುದ್ದ ತಲಾ ಒಂದೊಂದು ಬಾರಿ ಗೆಲುವು ಕಂಡಿದೆ. ಇನ್ನು ಮುಂಬೈ ಇಂಡಿಯನ್ಸ್ ತಂಡದ ವಿರುದ್ದ 3 ಬಾರಿ ಸೋಲನ್ನು ಕಂಡಿದ್ರೆ, ಕೊಲ್ಕತ್ತಾ ನೈಟ್‌ರೈಡರ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳ ವಿರುದ್ದ ತಲಾ ಒಂದೊಂದು ಬಾರಿ ಸೋಲುಂಡಿದೆ.
ಚೆನ್ನೈ ಸೂಪರ್ ಕಿಂಗ್ಸ್ (CSK ) ಫೈನಲ್ ಫಲಿತಾಂಶ – IPL 2023 Final
2008
ಮೊದಲ ಐಪಿಎಲ್‌ನಲ್ಲಿಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಫೈನಲ್‌ಗೆ ಎಂಟ್ರಿ ಕೊಟ್ಟಿತ್ತು. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ (IPL Final) ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ದ ಸೋಲನ್ನು ಕಂಡಿತ್ತು.
2010
ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ ಪಂದ್ಯಾವಳಿಯಲ್ಲಿ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿತ್ತು. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸುವ ಮೂಲಕ ಮೊದಲ ಬಾರಿಗೆ ಐಪಿಎಲ್ ಟ್ರೋಫಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನದಾಗಿಸಿಕೊಂಡಿದೆ.
2011
ಚೆನ್ನೈನ ಎಂ.ಎ.ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 58 ರನ್‌ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸುವ ಮೂಲಕ ಐಪಿಎಲ್ ಟ್ರೋಪಿ ಜಯಿಸಿತ್ತು.
2012
ಸತತ ಎರಡನೇ ವರ್ಷವೂ ಕೂಡ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ ಫೈನಲ್ ಗೆ ಎಂಟ್ರಿ ಕೊಟ್ಟಿತ್ತು. ಚೆನ್ನೈ ಎಂ.ಎ.ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂಯದಲ್ಲಿ CSK ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಐದು ವಿಕೆಟ್‌ಗಳಿಂದ ಸೋಲನ್ನು ಕಂಡಿತ್ತು.
2013
ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿನ ಫೈನಲ್‌ಗೆ ಎಂಟ್ರಿ ಕೊಟ್ಟಿತ್ತು. ಆದರೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 23 ರನ್‌ಗಳಿಂದ ಸೋಲನ್ನು ಕಂಡಿದೆ.
2015
ಕ್ವಾಲ್ಫೈಯರ್ 2 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಫೈನಲ್‌ಗೆ ಎಂಟ್ರಿ ಕೊಟ್ಟಿತ್ತು. ಆದರೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 41 ರನ್‌ಗಳಿಂದ ಸೋಲನುಭವಿಸಿದೆ.
2018
ಸತತ ಫೈನಲ್ ಸೋಲುಗಳನ್ನು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸನ್‌ರೈಸಸ್ ಹೈದ್ರಾಬಾದ್ ತಂಡವನ್ನು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋಲಿಸುವ ಮೂಲಕ ಫೈನಲ್ ಪ್ರವೇಶಿಸಿತ್ತು. ಅಲ್ಲದೇ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸನ್ ರೈಸಸ್ ಹೈದ್ರಾಬಾದ್ ತಂಡವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಜಯಿಸಿತು.
2019
ಚೆನ್ನೈ ಸೂಪರ್ ಕಿಂಗ್ಸ್ ತಂಡ ದೆಹಲಿ ಕ್ಯಾಪಿಟಲ್ಸ್ ಅನ್ನು ಕ್ವಾಲಿಫೈಯರ್ 2 ಪಂದ್ಯದಲ್ಲಿ ಆರು ವಿಕೆಟ್‌ಗಳ ಅಂತರದಿಂದ ಸೋಲಿಸುವ ಮೂಲಕ ಫೈನಲ್ ಪ್ರವೇಶ ಪಡೆದುಕೊಂಡಿತ್ತು. ಆದರೆ ಹೈದರಾಬಾದ್ ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ದ ಒಂದು ರನ್‌ಗಳಿಂದ ಸೋಲನ್ನು ಒಪ್ಪಿಕೊಂಡಿತ್ತು.
2021
ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ದುಬೈನ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ನಾಲ್ಕು ವಿಕೆಟ್ ಅಂತರದಿಂದ ಸೋಲಿಸಿ ಫೈನಲ್ ಪ್ರವೇಶಿಸಿತ್ತು. ಫೈನಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 27 ರನ್‌ಗಳಿಂದ ಸೋಲಿಸುವ ಮೂಲಕ ಐಪಿಎಲ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
2023
ಐಪಿಎಲ್ 2023: ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟಾನ್ಸ್ ತಂಡವನ್ನು ಪ್ಲೇ ಆಫ್ ಪಂದ್ಯದಲ್ಲಿ ಸೋಲಿಸುವ ಮೂಲಕ ಫೈನಲ್ ಪ್ರವೇಶಿಸಿದೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಮತ್ತೊಮ್ಮೆ ಐಪಿಎಲ್ ಟ್ರೋಫಿ ಗೆಲ್ಲುವ ವಿಶ್ವಾಸದಲ್ಲಿದೆ. ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸುತ್ತಿದೆ.
GT vs CSK : ಹೇಗಿದೆ ತಂಡಗಳ ಬಲಾಬಲ :
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಒಟ್ಟು 4 ಬಾರಿ ಮುಖಾಮುಖಿಯಾಗಿದ್ದವು. ಈ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಒಂದು ಬಾರಿ ಹಾಗೂ ಗುಜರಾತ್ ಟೈಟಾನ್ಸ್ ತಂಡ ಒಟ್ಟು 3 ಬಾರಿ ಗೆಲುವು ಕಂಡಿದೆ.
ಚೆನ್ನೈ ಸೂಪರ್ ಕಿಂಗ್ಸ್ (CSK) : ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಮತೀಶ ಪತಿರಣ
ಗುಜರಾತ್ ಟೈಟಾನ್ಸ್ (GT) : ವೃದ್ಧಿಮಾನ್ ಸಹಾ(ವಿಕೆ), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ವಿಜಯ್ ಶಂಕರ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಮೋಹಿತ್ ಶರ್ಮಾ, ರಶೀದ್ ಖಾನ್, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಜೋಶುವಾ ಲಿಟಲ್
ಇದನ್ನೂ ಓದಿ : IPL 2023 Final : ಗುಜರಾತ್ ಟೈಟಾನ್ಸ್ ಸೋಲಿಸಿ 10 ನೇ ಬಾರಿಗೆ ಫೈನಲ್ ಪ್ರವೇಶಿಸಿದ ಚೆನ್ನ:
ಇದನ್ನೂ ಓದಿ : ಈ ಬಾರಿಯೂ ನಮಗಿಲ್ಲ ಕಪ್ : ಪ್ಲೇ ಆಫ್‌ನಿಂದ ಹೊರ ಬಿದ್ದ ಆರ್‌ಸಿಬಿ