ಐಪಿಎಲ್ 2024 : ನಿವೃತ್ತಿ ಘೋಷಿಸಿದ ಲಕ್ನೋ ಸೂಪರ್ ಜೈಂಟ್ಸ್ ಆರಂಭಿಕ ಆಟಗಾರ

ಆಸ್ಟ್ರೇಲಿಯಾ ಎಂಟನೇ ಬಾರಿಗೆ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಸೋಲಿನ ಬೆನ್ನಲ್ಲೇ, ದಕ್ಷಿಣ ಆಫ್ರಿಕಾದ ಸ್ಟಾರ್ ವಿಕೆಟ್-ಕೀಪರ್ ಬ್ಯಾಟ್ಸ್‌ಮನ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಅಗ್ರ ಆಟಗಾರ ಕ್ವಿಂಟನ್ ಡಿ ಕಾಕ್ ಏಕದಿನ ಕ್ರಿಕೆಟ್‌ಗೆ ಕಣ್ಣೀರ ವಿದಾಯ ಹೇಳಿದ್ದಾರೆ.

ಐಪಿಎಲ್‌ 2024 (IPL 2024) ಆರಂಭ ಸಿದ್ದತೆಗಳು ನಡೆಯುತ್ತಿವೆ. ಈ ನಡುವಲ್ಲೇ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ಆರಂಭಿಕ ಆಟಗಾರ ದಕ್ಷಿಣ ಆಫ್ರಿಕಾದ ಆಟಗಾರ ಕ್ವಿಂಟನ್‌ ಡಿಕಾಕ್‌ (Quinton de kock) ನಿವೃತ್ತಿ ಘೋಷಿಸಿದ್ದಾರೆ. ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಫೈನಲ್‌ಗೆ ತಲುಪಿಸಲು ವಿಫಲರಾದ ಬೆನ್ನಲ್ಲೇ ಈ ನಿರ್ಧಾರ ಕೈಗೊಂಡಿದ್ದಾರೆ.

ಕೋಲ್ಕತ್ತಾದ ಈಡನ್‌ ಗಾರ್ಡನ್‌ನಲ್ಲಿ ನಡೆದ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾ ವಿರುದ್ದ ಸೋಲನ್ನು ಕಂಡಿದ್ದು, ಆಸ್ಟ್ರೇಲಿಯಾ ಎಂಟನೇ ಬಾರಿಗೆ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಸೋಲಿನ ಬೆನ್ನಲ್ಲೇ, ದಕ್ಷಿಣ ಆಫ್ರಿಕಾದ ಸ್ಟಾರ್ ವಿಕೆಟ್-ಕೀಪರ್ ಬ್ಯಾಟ್ಸ್‌ಮನ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಅಗ್ರ ಆಟಗಾರ ಕ್ವಿಂಟನ್ ಡಿ ಕಾಕ್ ಏಕದಿನ ಕ್ರಿಕೆಟ್‌ಗೆ ಕಣ್ಣೀರ ವಿದಾಯ ಹೇಳಿದ್ದಾರೆ.

IPL 2024 Lucknow Super Giants Opening Batsman Quinton de kock Announced Retirement
Image Credit to Original Source

ವಿಶ್ವಕಪ್ 2023 ರ ನಂತರ ODI ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವುದಾಗಿ ತಿಳಿಸಿದ್ದರು. ಅಲ್ಲದೇ ಈ ಬಾರಿಯ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಸೆಮಿಫೈನಲ್‌ಗೆ ಎಂಟ್ರಿ ಕೊಡುವಲ್ಲಿ ಮಹತ್ವದ ಪಾತ್ರವಹಿಸಿದ್ದರು. ಡಿಕಾಕ್‌ 2021 ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಲಕ್ನೋ ಸೂಪರ್ ಜೈಂಟ್ಸ್‌ಗಾಗಿ ಆಡುತ್ತಿರುವ ಕ್ವಿಂಟನ್ ಡಿ ಕಾಕ್ ಆಡುತ್ತಿದ್ದಾರೆ.

ಇದನ್ನೂ ಓದಿ : ಒಂದೇ ಒಂದು ಎಸೆತ ಎದುರಿಸದೇ ಔಟ್‌ ಆದ ಅಂಜಲೋ ಮ್ಯಾಥ್ಯೂಸ್‌ ! ಕ್ರಿಕೆಟ್‌ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಟೈಮ್‌ಔಟ್‌

ಸದ್ಯ ಟಿ 20 ಕ್ರಿಕೆಟ್‌ ಮತ್ತು ಟಿ 20 ಫ್ರಾಂಚೈಸ್ ಲೀಗ್‌ನತ್ತ ಗಮನ ಹರಿಸುವ ದೃಷ್ಟಿಯಿಂದ ತಾವು ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡುವುದಾಗಿ ನಿರ್ಧಾರ ಮಾಡಿದ್ದರು. ಲೀಗ್‌ ಹಂತದ ಪಂದ್ಯಗಳಲ್ಲಿ ಅದ್ಬುತ ಪ್ರದರ್ಶನ ನೀಡಿದ್ದ ಡಿಕಾಕ್‌ ಸೆಮಿಫೈನಲ್‌ ಪಂದ್ಯದಲ್ಲಿ ನಿರಾಸೆ ಮೂಡಿಸಿದ್ದರು. ಆದರೆ ಈ ಬಾರಿಯ ವಿಶ್ವಕಪ್‌ನಲ್ಲಿ ಡಿಕಾಕ್‌ ತಮ್ಮ ಬ್ಯಾಟಿಂಗ್‌ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ.

ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿರುವ ಡಿಕಾಕ್‌ ವಿಶ್ವಕಪ್ 2023ರಲ್ಲಿ ಒಟ್ಟು 10 ಪಂದ್ಯಗಳಲ್ಲಿ 4 ಶತಕ ಸಿಡಿಸಿದ್ದಾರೆ. ದ್ಯ ಟಿ 20 ಕ್ರಿಕೆಟ್‌ ಮತ್ತು ಟಿ 20 ಫ್ರಾಂಚೈಸ್ ಲೀಗ್‌ನತ್ತ ಗಮನ ಹರಿಸುವ ದೃಷ್ಟಿಯಿಂದ ತಾವು ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡುವುದಾಗಿ ನಿರ್ಧಾರ ಮಾಡಿದ್ದರು.

ಇದನ್ನೂ ಓದಿ : ವಿಶ್ವಕಪ್ 2023 ತಂಡ ಪ್ರಕಟ : ವಿರಾಟ್ ಕೊಹ್ಲಿ ನಾಯಕ, ರೋಹಿತ್‌ ಶರ್ಮಾಗಿಲ್ಲ ಸ್ಥಾನ

ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿದ ಕ್ವಿಂಟನ್ ಡಿ ಕಾಕ್ ಸೆಮಿಫೈನಲ್ ನಲ್ಲಿ ನಿರಾಸೆ ಮೂಡಿಸಿದರು. ಟೂರ್ನಿಯಲ್ಲಿ ಅವರ ಆಟ ಗಮನ ಸೆಳೆಯಿತು. ಲಕ್ನೋ ಸೂಪರ್ ಜೈಂಟ್ಸ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಪ್ರಸ್ತುತ ವಿಶ್ವಕಪ್ 2023 ರಲ್ಲಿ ಅವರು ಆಡಿದ 10 ಪಂದ್ಯಗಳಲ್ಲಿ 4 ಶತಕಗಳನ್ನು ಗಳಿಸಿದರು. ಇದರ ಮೂಲಕ, ಅವರು 59.40 ರ ಸರಾಸರಿಯಲ್ಲಿ 107.02 ಸ್ಟ್ರೈಕ್ ರೇಟ್ ಹೊಂದಿದ್ದರು.

IPL 2024 Lucknow Super Giants Opening Batsman Quinton de kock Announced Retirement
Image Credit to Original Source

ಕ್ವಿಂಟನ್ ಡಿ ಕಾಕ್ 155 ODIಗಳಲ್ಲಿ 46 ರ ಬ್ಯಾಟಿಂಗ್ ಸರಾಸರಿಯಲ್ಲಿ 6,770 ರನ್ ಗಳಿಸಿದ್ದಾರೆ. ODI ವೃತ್ತಿಜೀವನದಲ್ಲಿ ಸ್ಟ್ರೈಕ್ ರೇಟ್ 96.8 ಆಗಿದೆ. ಅವರ ಖಾತೆಯಲ್ಲಿ 21 ಶತಕ ಹಾಗೂ 30 ಅರ್ಧಶತಕಗಳಿವೆ. 54 ಟೆಸ್ಟ್ ಪಂದ್ಯಗಳನ್ನು ಆಡಿರುವ 30 ವರ್ಷದ ಆಟಗಾರ 38.82 ಸರಾಸರಿಯಲ್ಲಿ 3300 ರನ್ ಗಳಿಸಿದ್ದಾರೆ. ಅವರು 80 ಟಿ20 ಪಂದ್ಯಗಳಲ್ಲಿ 32.53 ಸರಾಸರಿಯಲ್ಲಿ 2277 ರನ್ ಗಳಿಸಿದ್ದಾರೆ.

ಇದನ್ನೂ ಓದಿ : ವಿಶ್ವಕಪ್‌ ಸೆಮಿಫೈನಲ್‌ : ಆಸ್ಟ್ರೇಲಿಯಾ ವಿರುದ್ದ ಸೋಲು ಕಂಡ ದಕ್ಷಿಣ ಆಫ್ರಿಕಾ, 8 ನೇ ಬಾರಿ ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಆಸ್ಟ್ರೇಲಿಯಾ

2013 ರಲ್ಲಿ ಡಿ ಕಾಕ್ ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿ ಸನ್‌ರೈಸರ್ಸ್ ಹೈದರಾಬಾದ್ ಆಟಗಾರರ ಹರಾಜಿನಲ್ಲಿ ಖರೀದಿಸಿತು, ಆದರೆ ಅವರು ಆಡಿದಾಗ ಪ್ರಭಾವ ಬೀರಲು ವಿಫಲರಾದರು. ಅವರು 2014 ರ ಪಂದ್ಯಾವಳಿಗಾಗಿ ಡೆಲ್ಲಿ ಡೇರ್‌ಡೆವಿಲ್ಸ್‌ಗೆ ಸಹಿ ಹಾಕಿದರು, 2017 ರವರೆಗೆ ತಂಡಕ್ಕಾಗಿ ಆಡುತ್ತಿದ್ದರು ಮತ್ತು 2016 ರಲ್ಲಿ ಶತಕ ಗಳಿಸಿದರು.

2018 ರ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಖರೀದಿಸಿತು ಮತ್ತು 2019 ರ ಋತುವಿನಲ್ಲಿ ಮುಂಬೈ ಇಂಡಿಯನ್ಸ್‌ಗಾಗಿ ಆಡಿದರು.2022 ರ ಐಪಿಎಲ್ ಹರಾಜಿನಲ್ಲಿ, ಡಿ ಕಾಕ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ಖರೀದಿಸಿತು. ಅವರು ತಮ್ಮ ಎರಡನೇ ಐಪಿಎಲ್ ಶತಕವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 70 ಎಸೆತಗಳಲ್ಲಿ 140 ರನ್ ಗಳಿಸಿದರು.

IPL 2024 Lucknow Super Giants Opening Batsman Quinton de kock Announced Retirement

Comments are closed.