IPL 2024 Suryakumar Yadav : ಟೀಂ ಇಂಡಿಯಾಕ್ಕೆ ಇದೀಗ ಗಾಯಾಳುಗಳ ಸಂಖ್ಯೆ ಹೆಚ್ಚುತ್ತಿದೆ. ಭಾರತ ಕ್ರಿಕೆಟ್ ತಂಡದ ಖ್ಯಾತ ಆಟಗಾರ ಸೂರ್ಯಕುಮಾರ್ ಯಾದವ್ ಕೂಡ ಇದೇ ಸಾಲಿಗೆ ಸೇರಿದ್ದಾರೆ. ಇದೇ ಕಾರಣದಿಂದಲೇ ಅವರು ಅಪ್ಘಾನಿಸ್ತಾನ (IND vs AFG Series) ವಿರುದ್ದದ ಸರಣಿಯನ್ನು ಮಿಸ್ ಮಾಡಿಕೊಳ್ಳಲಿದ್ದಾರೆ. ಜೊತೆಗೆ ರಣಜಿ ಟ್ರೋಫಿಯಲ್ಲಿ (Ranaji Trophy 2024) ಅವರು ಆಡುವುದು ಅಸಾಧ್ಯ. ಅಷ್ಟೇ ಅಲ್ಲಾ ಇದೀಗ ಸೂರ್ಯಕುಮಾರ್ ಯಾದವ್ ಈ ಬಾರಿಯ ಐಪಿಎಲ್ 2024 ನಲ್ಲಿ (IPL 2024) ಆಡುವುದು ಅನುಮಾನ.

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿವೆ. ಇದೇ ಹೊತ್ತಲ್ಲೇ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಸೂರ್ಯಕುಮಾರ್ ಯಾದವ್ ವಿದೇಶದಲ್ಲಿ ಹರ್ನಿಯಾ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ. ಆಪರೇಷನ್ ಬಳಿಕ ಅವರು ಚೇತರಿಸಿಕೊಳ್ಳಲು ಕನಿಷ್ಠ ಮೂರು ತಿಂಗಳ ಕಾಲಾವಕಾಶ ಬೇಕಾಗಿದೆ.
ಇದನ್ನೂ ಓದಿ : ಟೀಂ ಇಂಡಿಯಾಗೆ ಮತ್ತೆ ವಿರಾಟ್ ಕೊಹ್ಲಿ ನಾಯಕ
ಭಾರತ ಕ್ರಿಕೆಟ್ ತಂಡ ಈಗಾಗಲೇ ಗಾಯದ ಸಮಸ್ಯೆಯಿಂದ ತತ್ತರಿಸಿ ಹೋಗಿದೆ. ವಿಶ್ವಕಪ್ ಪಂದ್ಯದ ವೇಳೆಯಲ್ಲಿ ಗಾಯಗೊಂಡಿರುವ ಹಾರ್ದಿಕ್ ಪಾಂಡ್ಯ ಇನ್ನೂ ಚೇತರಿಸಿಕೊಂಡಿಲ್ಲ. ಇದೀಗ ಸೂರ್ಯ ಕುಮಾರ್ ಯಾದವ್ ಸರದಿ. ಹರ್ನಿಯಾ ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸೂರ್ಯ ಕುಮಾರ್ ಯಾದವ್ ಈ ಬಾರಿಯ ರಣಜಿ ಪಂದ್ಯಗಳನ್ನು ಮಿಸ್ ಮಾಡಿಕೊಳ್ಳಲಿದ್ದಾರೆ.
ಇದನ್ನೂ ಓದಿ : ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್ ಅಲ್ಲ : ಆರ್‌ಸಿಬಿಯನ್ನು ಈ ಬಾರಿ ಚಾಂಪಿಯನ್ ಮಾಡ್ತಾರೆ ಈ 3 ಆಟಗಾರರು
ಭಾರತ ಹಾಗೂ ಅಫ್ಘಾನಿಸ್ತಾನ ವಿರುದ್ದದ ಸರಣಿಗೂ ಅವರನ್ನು ಬಿಸಿಸಿಐ ಆಯ್ಕೆ ಮಾಡಿಲ್ಲ. ಈ ಹಿಂದೆ ಐಪಿಎಲ್ ಆರಂಭಕ್ಕೂ ಮೊದಲೇ ಅವರು ಫಿಟ್ ಆಗುತ್ತಾರೆ ಎಂದು ಹೇಳಲಾಗಿತ್ತು. ಆದರೆ ಸದ್ಯದ ಮಾಹಿತಿಯ ಪ್ರಕಾರ ಸೂರ್ಯ ಕುಮಾರ್ ಯಾದವ್ ಐಪಿಎಲ್‌ನ ಆರಂಭಿಕ ಕೆಲವು ಪಂದ್ಯಗಳನ್ನು ಕಳೆದುಕೊಳ್ಳಲಿದ್ದಾರೆ. ಇದು ಮುಂಬೈ ಇಂಡಿಯನ್ಸ್ ತಂಡಕ್ಕೆ ಬಾರೀ ಹೊಡೆತವನ್ನು ಕೊಡಲಿದೆ.

ಸೂರ್ಯ ಕುಮಾರ್ ಯಾದವ್ ಶಸ್ತ್ರ ಚಿಕಿತ್ಸೆಗಾಗಿ ಜರ್ಮನಿಗೆ ತೆರಳಲಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಮುಂಬೈ ಇಂಡಿಯನ್ಸ್ ತಂಡವನ್ನು ಈ ಬಾರಿ ಹಾರ್ದಿಕ್ ಪಾಂಡ್ಯ ಮುನ್ನೆಡೆಸಲಿದ್ದಾರೆ. ಇದೇ ಕಾರಣಕ್ಕೆ ಸೂರ್ಯ ಕುಮಾರ್ ಯಾದವ್ ಮುನಿಸಿಕೊಂಡಿದ್ದರು. ಅಲ್ಲದೇ ಈ ಬಾರಿಯ ಐಪಿಎಲ್‌ನಲ್ಲಿ ಅವರು ಇತರ ತಂಡದ ಪರ ಆಡಲಿದ್ದಾರೆ ಎನ್ನಲಾಗುತ್ತಿತ್ತು.
ಇದನ್ನೂ ಓದಿ : ಐಪಿಎಲ್ 2024ನಲ್ಲಿ ಸಿಎಸ್‌ಕೆ, ಆರ್‌ಸಿಬಿಗಿಂತ ಬಲಿಷ್ಟ ಈ ತಂಡದ Playing XI
ವಿಶ್ವಕಪ್ ಬೆನ್ನಲ್ಲೇ ನಡೆದ ಟಿ20 ಸರಣಿಗೆ ಸೂರ್ಯ ಕುಮಾರ್ ಯಾದವ್ ಭಾರತ ತಂಡವನ್ನು ಮುನ್ನೆಡೆಸಿದ್ದರು. ಅಲ್ಲದೇ ಟೀಂ ಇಂಡಿಯಾಕ್ಕೆ ಟ್ರೋಫಿಯನ್ನು ಗೆಲ್ಲಿಸಿಕೊಟ್ಟಿದ್ದರು. ಟಿ20 ಕ್ರಿಕೆಟ್‌ನಲ್ಲಿ ಸೂರ್ಯ ಕುಮಾರ್ ಯಾದವ್ ಸದ್ಯ ಉತ್ತಮ ಫಾರ್ಮ್‌ನಲ್ಲಿದ್ದು, ಐಪಿಎಲ್‌ಗೆ ನೆರವಾಗಲಿದೆ ಅಂತಾ ಮುಂಬೈ ಇಂಡಿಯನ್ಸ್ ಲೆಕ್ಕಾಚಾರ ಹಾಕಿತ್ತು. ಐಪಿಎಲ್‌ಗೆ ಸೂರ್ಯ ಕುಮಾರ್ ಯಾದವ್ ಅಲಭ್ಯತೆ ಇದೀಗ ಅಭಿಮಾನಿಗಳಿಗೆ ನಿರಾಸೆಯನ್ನು ಮೂಡಿಸಿದೆ.
IPL 2024 Mumbai Indians player Suryakumar Yadav out of Indian Premier League