IPL 2024 RCB vs CSK : ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎನಿಸಿಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League (IPL) 2024) ಇಂದಿನಿಂದ ಆರಂಭಗೊಳ್ಳಲಿದೆ. ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (Chennai Supre Kings) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಸೆಣೆಸಾಟ ನಡೆಸಲಿವೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿ ಹೊಸ ನಾಯಕನ ನೇತೃತ್ವದಲ್ಲಿ ಕಣಕ್ಕೆ ಇಳಿಯಲಿದೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ರಾತ್ರಿ ೮ ಗಂಟೆಗೆ ಐಪಿಎಲ್ ಮೊದಲ ಪಂದ್ಯ ನಡೆಯಲಿದ್ದು, ಬಲಾಢ್ಯ ತಂಡಗಳ ನಡುವೆ ಸೆಣೆಸಾಟ ನಡೆಯಲಿದೆ. ಕಳೆದ ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸವಾಲು ಒಡ್ಡಲಿದೆ. ಕಳೆದ ಬಾರಿಗೆ ಹೋಲಿಸಿದ್ರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠವಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಕಣಕ್ಕೆ ಇಳಿಯುತ್ತಿದ್ರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡ ರುತುರಾಜ್ ಗಾಯಕ್ವಾಡ್ ನೇತೃತ್ವದಲ್ಲಿ ಐಪಿಎಲ್ ಆಡುತ್ತಿದೆ. ಮಹೇಂದ್ರ ಸಿಂಗ್ ಧೋನಿ ಕಳೆದ ಒಂದು ವರ್ಷದ ಹಿಂದೆ ನಾಯಕತ್ವ ತ್ಯೆಜಿಸಿದಾಗ ರವೀಂದ್ರ ಜಡೇಜಾ ತಂಡವನ್ನು ಮುನ್ನೆಡೆಸಿದ್ದು, ಆ ಸಾಲಿನಲ್ಲಿ ತಂಡ ಹೀನಾಯವಾಗಿ ಸೋಲನ್ನು ಕಂಡಿತ್ತು. ಇದೀಗ ಮತ್ತೆ ಧೋನಿ ನಾಯಕತ್ವ ತ್ಯೆಜಿಸಿದ್ದಾರೆ.
ಇದನ್ನೂ ಓದಿ : IPL 2024: ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬಿದ್ದ ಬೆಂಕಿ ಬೌಲರ್, ಶ್ರೀಲಂಕಾದ ಈ 3 ಆಟಗಾರರು ಐಪಿಎಲ್‌ಗೆ ಅನುಮಾನ

ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ XI
ಮೊದಲು ಬ್ಯಾಟಿಂಗ್ ಆಯ್ದುಕೊಂಡ್ರೆ ತಂಡ : ರಚಿನ್ ರವೀಂದ್ರ, ರುತುರಾಜ್ ಗಾಯಕ್ವಾಡ್ (ನಾಯಕ), ಅಜಿಂಕ್ಯ ರಹಾನೆ, ಡೆರಿಲ್ ಮಿಚೆಲ್, ಮೊಯಿನ್ ಅಲಿ, ರವೀಂದ್ರ ಜಡೇಜಾ, ಸಮೀರ್ ರಿಜ್ವಿ, ಎಂಎಸ್ ಧೋನಿ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಮಹೇಶ್ ತೀಕ್ಷಣ.
ಮೊದಲು ಬೌಲಿಂಗ್ ಆಯ್ದುಕೊಂಡ್ರೆ ತಂಡ: ರಚಿನ್ ರವೀಂದ್ರ, ರುತುರಾಜ್ ಗಾಯಕ್ವಾಡ್ (ನಾಯಕ), ಅಜಿಂಕ್ಯ ರಹಾನೆ, ಡೆರಿಲ್ ಮಿಚೆಲ್, ಮೊಯಿನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ.
ಇದನ್ನೂ ಓದಿ : ಆರ್‌ಸಿಬಿಗೆ WPL 2024 ಟ್ರೋಫಿ, ಅಭಿಮಾನಿಗಳಿಗೆ ವಿಶೇಷ ಸಂದೇಶ ಕೊಟ್ಟ ಸ್ಮೃತಿ ಮಂಧಾನ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಭವಿಷ್ಯ XI
ಮೊದಲು ಬ್ಯಾಟಿಂಗ್ ಆಯ್ದುಕೊಂಡ್ರೆ ತಂಡ : ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಅನುಜ್ ರಾವತ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮೊರೊರ್, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ.
ಮೊದಲು ಬೌಲಿಂಗ್ ಆಯ್ದುಕೊಂಡ್ರೆತಂಡ : ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಆಕಾಶ್ ದೀಪ್.
ಇದನ್ನೂ ಓದಿ : ಸನ್‌ರೈಸಸ್ ಹೈದ್ರಾಬಾದ್‌ಗೆ ಪ್ಯಾಟ್ ಕಮ್ಮಿನ್ಸ್ ನಾಯಕ : ಕೆಎಲ್ ರಾಹುಲ್ ದಾಖಲೆ ಬ್ರೇಕ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ:
ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ರೀಸ್ ಟೋಪ್ಲಿ, ಟಾಮ್ ಕರ್ರಾನ್ , ಸ್ವಪ್ನಿಲ್ ಸಿಂಗ್, ವಿಜಯ್‌ಕುಮಾರ್ ವೈಶಾಕ್, ಲಾಕಿ ಫರ್ಗುಸನ್, ಮಯಾಂಕ್ ಡಾಗರ್, ವಿಲ್ ಜ್ಯಾಕ್ಸ್, ಸುಯಶ್ ಪ್ರಭುದೇಸಾಯಿ, ಅನುಜ್ ರಾವತ್, ಮನೋಜ್ ಭಾಂಡಗೆ, ಯಶ್ ದಯಾಳ್, ಸೌರವ್ ಚೌಹಾಣ್, ರಾಜನ್ ಕುಮಾರ್, ಹಿಮಾಂಶು ಶರ್ಮಾ
ಚೆನ್ನೈ ಸೂಪರ್ ಕಿಂಗ್ಸ್ ತಂಡ:
ರಚಿನ್ ರವೀಂದ್ರ, ರುತುರಾಜ್ ಗಾಯಕ್ವಾಡ್ (ನಾಯಕ), ಅಜಿಂಕ್ಯ ರಹಾನೆ, ಸಮೀರ್ ರಿಜ್ವಿ, ಡೇರಿಲ್ ಮಿಚೆಲ್, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಮಹೇಶ್ ತೀಕ್ಷಣ, ಮೊಯಿನ್ ಅಲಿ, ಡೆವೊನ್ ಕಾನ್ವೇ, ಮುಸ್ತಾಫಿಜುರ್ ರೆಹಮಾನ್, ಮಿಚೆಲ್ ಸ್ಯಾಂಟ್ನರ್, ತುಷಾರ್ ದೇಶಪಾಂಡೆ, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಮುಖೇಶ್ ಚೌಧರಿ, ಸಿಮರ್ಜೀತ್ ಸಿಂಗ್, ಆರ್‌ಎಸ್ ಹಂಗರ್ಗೇಕರ್, ಶೇಕ್ ರಶೀದ್, ನಿಶಾಂತ್ ಸಿಂಧು, ಅರವೆಲ್ಲಿ ಅವನೀಶ್
IPL 2024 RCB vs CSK Chennai Super Kings challenge Royal Challengers Bangalore Indian premier League festival starts from today