IPL 2025 : ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಇನ್ನು ಹಲವು ತಿಂಗಳು ಬಾಕಿ ಇದೆ. ಆದರೆ ಮುಂದಿನ ಐಪಿಎಲ್‌ಗೆ (IPL Teams) ತಂಡಗಳು ಈಗಿನಿಂದಲೇ ಸಿದ್ದತೆ ನಡೆಸಿವೆ. ಮುಂದಿನ ಬಾರಿ ಮೆಗಾ ಹರಾಜು ನಡೆಯುತ್ತಿದ್ದು, ಹಲವು ತಂಡಗಳಲ್ಲಿ ಬಾರೀ ಬದಲಾವಣೆಯನ್ನು ನಿರೀಕ್ಷಿಸಲಾಗುತ್ತಿದೆ. ಅದ್ರಲ್ಲೂ ಈ ಮೂರು ತಂಡಗಳು ಸಂಪೂರ್ಣವಾಗಿ ಬದಲಾಗುವ ಸಾಧ್ಯತೆಯಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders )
IPL 2024ರ ಚಾಂಪಿಯನ್. ಐಪಿಎಲ್‌ನಲ್ಲಿ ಈ ತಂಡ ಹೇಳಿಕೊಳ್ಳುವಷ್ಟು ಕಳಪೆ ಪ್ರದರ್ಶನ ಎಂದಿಗೂ ನೀಡಿಲ್ಲ. ಮೂರು ಬಾರಿಯ ಐಪಿಎಲ್ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಈ ಬಾರಿ ಕೋಚ್ ಗೌತಮ್ ಗಂಭೀರ್ ಅವರ ಮಾರ್ಗದರ್ಶನವನ್ನು ಕಳೆದುಕೊಂಡಿದೆ. ಜೊತೆಗೆ ತಂಡದ ಬ್ಯಾಟಿಂಗ್ ಕೋಚ್ ಆಗಿದ್ದ ಅಭಿಷೇಕ್ ನಾಯರ್ ಕೂಡ ಟೀಂ ಇಂಡಿಯಾವನ್ನು ಸೇರಿಕೊಂಡಿದ್ದಾರೆ. ಜೊತೆಗೆ ಫೀಲ್ಡಿಂಗ್ ಕೋಚ್ ರಯಾನ್ ಟೆನ್ ಡೋಸ್ಕೇಟ್ ಕೂಡ ತಂಡದಲ್ಲಿ ಇರೋದಿಲ್ಲ.
ಇದನ್ನೂ ಓದಿ :Dinesh Karthik: ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಪರ ಆಡಲಿದ್ದಾನೆ RCB ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್
ಕೊಲ್ಕತ್ತಾ ತಂಡದಲ್ಲಿ ಕೆಲವು ಬದಲಾವಣೆಗಳನ್ನು ನಿರೀಕ್ಷೆ ಮಾಡಲಾಗುತ್ತಿದೆ. ವರುಣ್ ಚಕ್ರವರ್ತಿ, ಸುನಿಲ್ ನರೈನ್ ಕೂಡ ತಂಡದಿಂದ ಹೊರಗುಳಿಯುವ ಸಾಧ್ಯತೆಯಿದೆ. ಆದರೆ ನಾಯಕನಾಗಿ ಶ್ರೇಯಸ್ ಅಯ್ಯರ್ ಮುಂದುವರಿಕೆ ಆಗುವುದು ಬಹುತೇಕ ಖಚಿತ. ಟೀಂ ಇಂಡಿಯಾ ಪರ ಪ್ಲಾಪ್ ಆಟದ ಪ್ರದರ್ಶನ ನೀಡಿದ್ದಾರೆ.

ಪಂಜಾಬ್ ಕಿಂಗ್ಸ್ (Punjab Kings)
ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿ ಹಲವು ಬದಲಾವಣೆಗಳನ್ನು ನಿರೀಕ್ಷೆ ಮಾಡಲಾಗುತ್ತಿದೆ. ಪಂಜಾಬ್ ಕಿಂಗ್ಸ್ ತಂಡದಲ್ಲಿ ನಾಯಕನ ಜೊತೆಗೆ ಕೋಚ್ ಹುದ್ದೆಯಲ್ಲಿಯೂ ಬದಲಾವಣೆಯಾಗುವ ಸಾಧ್ಯತೆಯಿದೆ. ಟ್ರೆವಸ್ ಬೇಲಿಸ್ ಮುಖ್ಯ ಕೋಚ್ ಹುದ್ದೆಯಿಂದ ಕೆಳಗೆ ಇಳಿಯುವ ಸಾಧ್ಯತೆಯಿದೆ. ಬೇಲಿಸ್ ನೇತೃತ್ವದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಒಟ್ಟು 42 ಪಂದ್ಯಗಳನ್ನು ಆಡಿತ್ತು. ಈ ಪೈಕಿ ತಂಡ ಬರೋಬ್ಬರಿ 24 ಪಂದ್ಯಗಳಲ್ಲಿ ಸೋಲನ್ನು ಕಂಡಿದ್ದು, ಕೇವಲ 18 ಪಂದ್ಯಗಳಲ್ಲಿ ಮಾತ್ರವೇ ಗೆಲುವು ಕಂಡಿದ್ದರು.
ಇದನ್ನೂ ಓದಿ : Rahul Dravid Paris Olympics 2024 : ಬಾಲ್ಯದಲ್ಲಿ ಆಡಿದ ಕ್ರೀಡೆಯನ್ನು ಒಲಿಂಪಿಕ್ಸ್’ನಲ್ಲಿ ವೀಕ್ಷಿಸಿದ ರಾಹುಲ್ ದ್ರಾವಿಡ್
ಸೆಪ್ಟೆಂಬರ್ 2022 ತಂಡಕ್ಕೆ ಅನಿಲ್ ಕುಂಬ್ಳೆ ನಂತರದಲ್ಲಿ ಅವರು ಕೋಚ್ ಆಗಿ ಆಯ್ಕೆಯಾಗಿದ್ದರು. ಆದರೆ ಮುಂದಿನ ಬಾರಿಗೆ ಅವರು ಮುಂದುವರಿಯುವ ಸಾಧ್ಯತೆ ತೀರಾ ಕಡಿಮೆ. IPL 2024ರಲ್ಲಿ ಪಂಜಾಬ್ ಕಿಂಗ್ಸ್ ತಂಡವು 5 ಪಂದ್ಯಗಳಲ್ಲಿ ಗೆಲುವು ಕಂಡಿದ್ರೆ, 9 ಪಂದ್ಯಗಳಲ್ಲಿ ಸೋಲನ್ನು ಕಂಡಿದೆ. ರಾಯಲ್ ಚಾಲೆಂಜರ್ಸ್ ತಂಡದ ಮಾಜಿ ಕೋಚ್ ಸಂಜಯ್ ಬಂಗಾರ್ ಅವರು ಪಂಜಾಬ್ ಕಿಂಗ್ಸ್ ತಂಡದ ಮುಂದಿನ ಮುಖ್ಯ ಕೋಚ್ ಆಗಿ ನೇಮಕ ಆಗುವ ಸಾಧ್ಯತೆಯಿದೆ. ಇನ್ನು ಶಿಖರ್ ಧವನ್ ತಂಡವನ್ನು ಮುನ್ನೆಡೆಸಿದ್ದಾರೆ.
ಅದ್ರಲ್ಲೂ ಸ್ಯಾಮ್ ಕುರ್ರಾನ್ ತಂಡದ ನಾಯಕರಾಗಿ ಅಧಿಕಾರ ವಹಿಸಿಕೊಂಡ ನಂತರದಲ್ಲಿ ಹೇಳಿಕೊಳ್ಳುವ ಸಾಧನೆಯನ್ನು ತಂಡ ಮಾಡಿಲ್ಲ. ಮುಂದಿನ ಆವೃತ್ತಿಯಲ್ಲಿ ಶಿಖರ್ ಧವನ್, ಜಾನಿ ಬೈರ್‌ಸ್ಟೋವ್ ಮತ್ತು ಪ್ರಭಾಸಿಮ್ರಾನ್ ಸಿಂಗ್ ತಂಡದ ಭಾಗವಾಗಿ ಇರುವ ಸಾಧ್ಯತೆ ತೀರಾ ಕಡಿಮೆ. ಈ ಮೂವರ ಸ್ಥಾನದಲ್ಲಿ ಹೊಸ ಆಟಗಾರರ ಆಯ್ಕೆಯಾಗುವ ಸಾಧ್ಯತೆಯಿದೆ. ಕಳೆದ ಕೆಲವು ಋತುವಿನಲ್ಲಿಯೂ ಪಂಜಾಬ್ ಕಿಂಗ್ಸ್ ತಂಡದ ಹೇಳಿಕೊಳ್ಳುವಂತಹ ಸಾಧನೆಯನ್ನು ಮಾಡಿಲ್ಲ.

ಮುಂಬೈ ಇಂಡಿಯನ್ಸ್ (Mumbai Indians)
ಕಳೆದ ಎರಡು ಋತುವಿನಲ್ಲಿಯೂ ಮುಂಬೈ ಇಂಡಿಯನ್ಸ್ ತಂಡ ಮಂಕಾಗಿದೆ. ಐದು ಬಾರಿಯ ಐಪಿಎಲ್ ಚಾಂಪಿಯನ್ ತಂಡದ ಈ ಬಾರಿ ನಾಯಕತ್ವ ಬದಲಾವಣೆ ಮಾಡಿದ್ದರೂ ಕೂಡ ಚಾಂಪಿಯನ್ ಪಟ್ಟಕ್ಕೇರುವಲ್ಲಿ ವಿಫಲವಾಗಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ತಂಡ ಈ ಬಾರಿ ಹತ್ತನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಹೀಗಾಗಿ ತಂಡದಲ್ಲಿ ಸಾಕಷ್ಟು ಬದಲಾವಣೆ ನಿರೀಕ್ಷಿಸಲಾಗುತ್ತಿದೆ.
ಇದನ್ನೂ ಓದಿ : Vinod Kambli: ಕ್ರಿಕೆಟ್ ದೇವರ ಬಾಲ್ಯದ ಗೆಳೆಯ ವಿನೋದ್ ಕಾಂಬ್ಳಿ ಕಥೆ ಕೇಳಿದ್ರೆ ದಂಗಾಗಿ ಹೋಗ್ತೀರಿ !
ಮುಂದಿನ ಆವೃತ್ತಿಯಲ್ಲಿ ತಂಡಕ್ಕೆ ಐದು ಬಾರಿ ಐಪಿಎಲ್ ಟ್ರೋಫಿ ಗೆಲ್ಲಿಸಿಕೊಟ್ಟಿದ್ದ ವಿಶ್ವಕಪ್ ಹೀರೋ ರೋಹಿತ್ ಶರ್ಮಾ ಜೊತೆಗೆ ಜಸ್ಪ್ರಿತ್ ಬೂಮ್ರಾ, ಸೂರ್ಯ ಕುಮಾರ್ ಯಾದವ್ ಕೂಡ ತಂಡವನ್ನು ತೊರೆಯುವ ಸಾಧ್ಯತೆಯಿದೆ. ಅಷ್ಟೇ ಯಾಕೆ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರು ನಾಯಕತ್ವದಿಂದ ಕೋಕ್ ಪಡೆದರೂ ಕೂಡ ಅಚ್ಚರಿಯಿಲ್ಲ.
ಆಟಗಾರರು ಮಾತ್ರವಲ್ಲದೇ ತಂಡದ ಮುಖ್ಯ ಕೋಚ್ ಮಾರ್ಕ್ ಬೌಚರ್ ಅವರನ್ನು ತಂಡದ ಆಡಳಿತ ಮಂಡಳಿ ವಜಾಗೊಳಿಸುವ ಸಾಧ್ಯತೆಯಿದೆ. ಮಾರ್ಕ್ ಬೌಚರ್ ಕೋಚ್ ಆದನಂತರದಲ್ಲಿ ಮುಂಬೈ ಇಂಡಿಯನ್ಸ್ ತಂಡ ಕೇವಲ 16 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, 26 ಪಂದ್ಯಗಳಲ್ಲಿ ಸೋಲನ್ನು ಕಂಡಿದೆ. ಅದ್ರಲ್ಲೂ ಈ ಬಾರಿಯ ಐಪಿಎಲ್‌ನಲ್ಲಿ ಹತ್ತನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
IPL 2025 Major changes in these 3 IPL Teams MI KKR PBKS