IPL 2025 Mega Auction Rohit Sharma : ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಈ ಬಾರಿ ಮುಂಬೈ ಇಂಡಿಯನ್ಸ್ (Mumbai Indians) ತಂಡದ ಜೊತೆಗಿನ ಸಂಬಂಧ ಕೊನೆಗೊಳಿಸಲು ರೋಹಿತ್ ಶರ್ಮಾ ಮುಂದಾಗಿದ್ದಾರೆ. ಅಲ್ಲದೇ ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ (Lucknow Supregaints) ಸೇರ್ಪಡೆಯಾಗಲಿದ್ದಾರೆ ಅನ್ನೋ ಸುದ್ದಿಗಳು ಹರಿದಾಡುತ್ತಿದೆ. ಮೆಘಾ ಹರಾಜಿಗೂ ಮೊದಲು ರೋಹಿತ್ ಶರ್ಮಾ ಈ ಬಾರಿ ಹೊಸ ತಂಡ ಸೇರ್ಪಡೆ ಆಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ರೋಹಿತ್ ಶರ್ಮಾ ಕಳೆದ ಋತುವಿನವರೆಗೂ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿದ್ದರು. ಆದರೆ ಹಾರ್ದಿಕ್ ಪಾಂಡ್ಯ 2 ವರ್ಷಗಳ ನಂತರ ಗುಜರಾತ್ ಟೈಟಾನ್ಸ್ ತಂಡದಿಂದ ಮುಂಬೈ ಇಂಡಿಯನ್ಸ್ ತಂಡಕ್ಕೆ ವಾಪಾಸಾಗಿದ್ದರು. ಇದು ರೋಹಿತ್ ಶರ್ಮಾ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿತ್ತು. ಇದೇ ಕಾರಣದಿಂದಲೇ ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ.
ಇದನ್ನೂ ಓದಿ : ಎಂಎಸ್ ಧೋನಿ ಐಪಿಎಲ್‌ಗೆ ನಿವೃತ್ತಿ? ಲೆಜೆಂಡ್ಸ್ ಲೀಗ್ ಸುಳಿವುಕೊಟ್ಟ ಸುರೇಶ್ ರೈನಾ
2011ರಲ್ಲಿ ಡೆಕ್ಕನ್ ಚಾರ್ಜರ್ಸ್ ತಂಡವನ್ನು ತೊರೆದ ರೋಹಿತ್ ಶರ್ಮಾ ಅವರನ್ನು ಮುಂಬೈ ಇಂಡಿಯನ್ಸ್ ತಂಡ ಖರೀದಿ ಮಾಡಿತ್ತು. ಅಲ್ಲದೇ ರೋಹಿತ್ ಶರ್ಮಾ ತದನಂತರದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಮುಂಬೈ ಇಂಡಿಯನ್ಸ್ ತಂಡಕ್ಕೆ 2020ರ ವರೆಗೆ ಒಟ್ಟು ಐದು ಬಾರಿ ಐಪಿಎಲ್ ಟ್ರೋಫಿಯನ್ನು ಜಯಿಸಿತ್ತು.
ಮುಂದಿನ ಬಾರಿಯ ಐಪಿಎಲ್‌ನಲ್ಲಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಮುಂದುವರಿಕೆ ಆಗಲಿದ್ದಾರೆ. ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿಕೊಂಡಿರುವುದು ಸಹಜವಾಗಿ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಜಸ್ಪ್ರಿತ್ ಬೂಮ್ರಾ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಕಳೆದ ಬಾರಿಯ ಐಪಿಎಲ್‌ನಲ್ಲಿಯೇ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತೊರೆಯುವ ನಿರ್ಧಾರ ಮಾಡಿದ್ದರು.
ಇದನ್ನೂ ಓದಿ : BCCI- IPL 2025 : ಐಪಿಎಲ್ 2025 ಹರಾಜು ಮುಂದೂಡಿಕೆ..? ಕ್ರಿಕೆಟ್ ಪ್ರಿಯರಿಗೆ ನಿರಾಸೆ
ಕಳೆದ ಐಪಿಎಲ್ ಬೆನ್ನಲ್ಲೇ ನಡೆದ ಐಸಿಸಿ ಟಿ 20 ವಿಶ್ವಕಪ್ ನಲ್ಲಿ ಭಾರತ ತಂಡದ ನಾಯಕತ್ವ ವಹಿಸಿಕೊಂಡಿದ್ದ ರೋಹಿತ್ ಶರ್ಮಾ ಅವರ ಬ್ರ್ಯಾಂಡ್ ವ್ಯಾಲ್ಯೂ ಹೆಚ್ಚಳವಾಗಿದೆ. ಅದ್ರಲ್ಲೂ ರೋಹಿತ್ ಶರ್ಮಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರ್ಪಡೆ ಆಗುತ್ತಾರೆ ಅನ್ನೋ ಮಾತುಗಳು ಕೇಳಿಬಂದಿದ್ದವು. ಅಲ್ಲದೇ ಹಲವು ತಂಡಗಳು ರೋಹಿತ್ ಶರ್ಮಾ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲು ಉತ್ಸುಕವಾಗಿದ್ದವು.

ರೋಹಿತ್ ಶರ್ಮಾ ಸದ್ಯ ಭಾರತ ಕ್ರಿಕೆಟ್ ತಂಡದ ಟೆಸ್ಟ್ ಹಾಗೂ ಏಕದಿನ ತಂಡ ನಾಯಕರಾಗಿ ಮುಂದುವರಿಕೆ ಆಗಿದ್ದಾರೆ. ಐದು ಬಾರಿ ಐಪಿಎಲ್ ಟ್ರೋಫಿಯನ್ನು ಜಯಿಸಿರುವ ರೋಹಿತ್ ಶರ್ಮಾ ಅವರಿಗೆ ಲಕ್ನೋ ತಂಡ ನಾಯಕತ್ವ ವಹಿಸಲು ಸಜ್ಜಾಗಿದೆ. ಈಗಾಗಲೇ ಲಕ್ನೋ ತಂಡದ ನಾಯಕ ಕೆಎಲ್ ರಾಹುಲ್ ತಂಡದ ನಾಯಕತ್ವ ತೊರೆದಿದ್ದಾರೆ. ಅಲ್ಲದೇ ಹೊಸ ತಂಡ ಸೇರ್ಪಡೆ ಆಗುವ ಕುರಿತು ಚರ್ಚೆ ನಡೆಯುತ್ತಿದೆ.
ಇದನ್ನೂ ಓದಿ : IPL 2025 : ಐಪಿಎಲ್ ಹರಾಜಿಗೆ ಹೊಸ ರೂಲ್ಸ್ : ಏನಿದು 3+1 ನಿಯಮ ?
IPL 2025 Mega Auction Rohit Sharma Goodbye to Mumbai Indians Joins Lucknow Super Giants