ಮುಂಬೈ : ದೇಶದಾದ್ಯಂತ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದೆ. ಇನ್ನೊಂದಡೆ ಐಪಿಎಲ್ ಆಟಗಾರರು ಕೂಡ ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಐಪಿಎಲ್ ಪಂದ್ಯಾವಳಿಯನ್ನು ಸಂಪೂರ್ಣವಾಗಿ ರದ್ದು ಮಾಡಿದೆ.

ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಐಪಿಎಲ್ ಆಯೋಜನೆಯನ್ನು ಮಾಡಲಾಗಿತ್ತು. ಆದರೂ ಕೂಡ ಕ್ರಿಕೆಟ್ ಆಟಗಾರರು ಹಾಗೂ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿಯಲ್ಲೀಗ ಬಿಸಿಸಿಐ ರದ್ದು ಮಾಡುವ ನಿರ್ಧಾರವನ್ನು ಕೈಗೊಂಡಿದೆ.

ಚೆನ್ನೈ ತಂಡದ ಆಟಗಾರರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ನಿನ್ನೆಯ ಪಂದ್ಯವನ್ನು ಮುಂದೂಡಿಕೆ ಮಾಡಲಾಗಿತ್ತು. ಅಲ್ಲದೇ ಇನ್ನಷ್ಟು ಆಟಗಾರರಿಗೆ ಕೊರೊನಾ ಸೋಂಕು ಕಾಣಿಸಿ ಕೊಳ್ಳುವ ಸಾಧ್ಯತೆಯ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರವನ್ನು ಕೈಗೊಂಡಿದೆ.

ದೇಶದಾದ್ಯಂತ ಬಹುತೇಕ ರಾಜ್ಯಗಳಲ್ಲಿ ಲಾಕ್ ಡೌನ್ ಹೇರಿಕೆ ಮಾಡಿದ್ರೂ ಕೂಡ ಐಪಿಎಲ್ ಪಂದ್ಯ ನಡೆಯುತ್ತಿತ್ತು. ಇದೀಗ ಐಪಿಎಲ್ ಪಂದ್ಯಾವಳಿಯ ಮೇಲೆಯೂ ಕೊರೊನಾ ಎಫೆಕ್ಟ್ ತಟ್ಟಿದೆ.
ಕೆಲವೇ ದಿನಗಳ ಹಿಂದೆಯಷ್ಟೇ news next ಐಪಿಎಲ್ ಪಂದ್ಯಾವಳಿ ರದ್ದಾಗುವ ಕುರಿತು ವರದಿಯನ್ನು ಪ್ರಕಟಿಸಿತ್ತು.
