ಕ್ರಿಕೆಟ್ ಪ್ರಿಯರಿಗೆ ಬಿಗ್ ಶಾಕ್ : ಕೊರೊನಾ ಆರ್ಭಟ, ಐಪಿಎಲ್ ರದ್ದು ಸಾಧ್ಯತೆ…!!!

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ದೇಶ ಸಂಕಷ್ಟದ ಸ್ಥಿತಿಯಲ್ಲಿದ್ದು, ಸೋಂಕು ಇನ್ನಷ್ಟು ವ್ಯಾಪಿಸೋ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಐಪಿಎಲ್ ರದ್ದಾಗುವುದು ಬಹುತೇಕ ಖಚಿತ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಸಾಲಿನ ಐಪಿಎಲ್ ಪಂದ್ಯಾವಳಿಗಳನ್ನು ದುಬೈಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪ್ರಸಕ್ತ ಋತುವಿನ ಪಂದ್ಯಾವಳಿಗಳನ್ನು ದೇಶದಲ್ಲಿ ಆಯೋಜಿಸಲಾಗಿದೆ. ಆಟಗಾರರು ಜೈವಿಕ ಸುರಕ್ಷತಾ ಪ್ರೋಟೋಕಾಲ್‌ಗಳ ಅಡಿಯಲ್ಲಿ ಐಪಿಎಲ್ ನಲ್ಲಿ ಭಾಗಿಯಾಗಿದ್ದಾರೆ. ಆದ್ರೀಗ ಕೊರೊನಾ ಹೊಡೆತಕ್ಕೆ ಕ್ರಿಕೆಟ್ ಆಟಗಾರರು ತತ್ತರಿಸಿದ್ದಾರೆ.

ಐಪಿಎಲ್ ನಲ್ಲಿ ಭಾಗಿಯಾಗಿದ್ದ ಖ್ಯಾತ ಸ್ಪಿನ್ನರ್ ಆರ್.ಅಶ್ವಿನ್ ಕುಟುಂಬಸ್ಥರಿಗೆ ಕೊರೊನಾ ಸೋಂಕಿನ ನೆಪವೊಡ್ಡಿ ಐಪಿಎಲ್ ನಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಆಸ್ಟ್ರೇಲಿಯಾದ ಖ್ಯಾತ ಆಟಗಾರರಾದ ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್ ಕೂಡ ತವರಿಗೆ ತೆರಳಿದ್ದಾರೆ. ಇದಕ್ಕೂ ಮೊದಲು ಆರ್‌ಸಿಬಿ ತಂಡದಲ್ಲಿರುವ ಇಬ್ಬರು ಆಸೀಸ್ ಕೇನ್ ರಿಚರ್ಡ್‌ಸನ್ ಮತ್ತು ಆಡಮ್ ಜಂಪಾ ಮನೆಗೆ ತೆರಳಿದ್ದಾರೆ. ಆಡಮ್ ಜಂಪಾ ಮತ್ತು ಕೇನ್ ರಿಚರ್ಡ್ಸನ್ ಜೊತೆಗೆ ವೇಗದ ಬೌಲರ್ ಆಂಡ್ರ್ಯೂ ಟೈ, ಲಿಯಾಮ್ ಲಿವಿಂಗ್‌ಸ್ಟೋನ್ ಈಗಾಗಲೇ ತವರಿಗೆ ತೆರಳಿದ್ದಾರೆ.

ಭಾರತದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾದ ಬೆನ್ನಲ್ಲೇ ಹಲವು ರಾಷ್ಟ್ರಗಳು ಭಾರತದ ವಿಮಾನಕ್ಕೆ ನಿರ್ಬಂಧ ಹಾಕಿವೆ. ಅದ್ರಲ್ಲೂ ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರರು ಐಪಿಎಲ್ ನಿಂದ ವಾಪಾಸಾಗುವಂತೆ ಸೂಚಿಸಿದೆ. ಅಲ್ಲದೇ ಇತರ ರಾಷ್ಟ್ರಗಳು ಕೂಡ ಇದೇ ಮಾರ್ಗವನ್ನು ಅನುಸರಿಸುವ ಸಾಧ್ಯತೆಯಿದೆ. ಅಲ್ಲದೇ ಇನ್ನಷ್ಟು ವಿದೇಶಿ ಆಟಗಾರರು ಕೂಡ ತವರಿಗೆ ತೆರಳುವ ಸಾಧ್ಯತೆಯೂ ಇದೆ. ಅಷ್ಟೇ ಯಾಕೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಾಯಕ ಮಹೇಂದ್ರ ಸಿಂಗ್ ಧೋನಿ ಕುಟುಂಬವೂ ಕೂಡ ಕೊರೊನಾ ಸೋಂಕಿನಿಂದ ತತ್ತರಿಸಿದೆ. ಹೀಗಾಗಿ ದೇಶೀಯ ಆಟಗಾರರು ಕೂಡ ಐಪಿಎಲ್ ತೊರೆಯುವ ಸಾಧ್ಯತೆಯಿದೆ.

ಜೈವಿಕ ಸುರಕ್ಷತಾ ಪ್ರೋಟೋಕಾಲ್‌ಗಳ ಅಡಿಯಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲಾಗುತ್ತಿದೆ. ಆದರೆ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಹಲವು ಕಡೆಗಳಲ್ಲಿ ಲಾಕ್ ಡೌನ್ ಹೇರಿಕೆಯನ್ನು ಮಾಡಲಾಗಿದೆ. ಎಲ್ಲಾ ಸೇವೆಗಳನ್ನು ಬಂದ್ ಮಾಡಿದ್ದು, ಐಪಿಎಲ್ ಪಂದ್ಯಾವಳಿಗೆ ಸರಕಾರ ಅನುಮತಿ ನೀಡಿರುವುದು ಕೂಡ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಐಪಿಎಲ್ ಪಂದ್ಯಾವಳಿಯನ್ನು ಮುಂದೂಡುವ ಸಾಧ್ಯತೆಯಿದೆ.

Comments are closed.