Jasprit Bumrah : ಟೀಮ್ ಇಂಡಿಯಾಗೆ ಗುಡ್ ನ್ಯೂಸ್, ಜಸ್ಪ್ರೀತ್ ಬುಮ್ರಾ ಕಂಬ್ಯಾಕ್ ಮುಹೂರ್ತ ಫಿಕ್ಸ್

ಬೆಂಗಳೂರು: ಬೆನ್ನು ನೋವಿನಿಂದ ಚೇತರಿಸಿಕೊಂಡಿರುವ ಟೀಮ್ ಇಂಡಿಯಾದ ಪ್ರೀಮಿಯರ್ ಫಾಸ್ಟ್ ಬೌಲರ್ ಜಸ್ಪ್ರೀತ್ ಬುಮ್ರಾ (Jasprit Bumrah) ಅವರ ಕಂಬ್ಯಾಕ್ ಯಾವಾಗ ಎಂಬ ಪ್ರಶ್ನೆ ಕ್ರಿಕೆಟ್ ಪ್ರಿಯರನ್ನು ಕಾಡುತ್ತಿದೆ. ಖತರ್ನಾಕ್ ಬೌಲರ್ ಬುಮ್ರಾ ಮುಂದಿನ ವಿಶ್ವಕಪ್ ಟೂರ್ನಿಯಲ್ಲಿ ಆಡಲಿದ್ದಾರೆಯೇ ಎಂಬ ಅನುಮಾನವೂ ಕ್ರಿಕೆಟ್ ಅಭಿಮಾನಿಗಳನ್ನು ಕಾಡುತ್ತಿದೆ. ಇದೀಗ ಅಭಿಮಾನಿಗಳಿಗೆ ಮತ್ತು ಟೀಮ್ ಇಂಡಿಯಾಗೆ ಗುಡ್ ನ್ಯೂಸ್ ಸಿಕ್ಕಿದೆ. ಜಸ್ಪ್ರೀತ್ ಬುಮ್ರಾ ಅವರ ಟೀಮ್ ಇಂಡಿಯಾ ಕಂಬ್ಯಾಕ್’ಗೆ ಮಹೂರ್ತ ಫಿಕ್ಸ್ ಆಗಿದೆ.

29 ವರ್ಷದ ಬಲಗೈ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಆಡಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ತಿಳಿಸಿದ್ದಾರೆ. “ಜಸ್ಪ್ರೀತ್ ಬುಮ್ರಾ ಕಂಪ್ಲೀಟ್ ಫಿಟ್ ಆಗಿದ್ದು, ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ” ಎಂದು ಜೈ ಶಾ ಮಾಹಿತಿ ನೀಡಿದ್ದಾರೆ. ಬೆನ್ನು ನೋವಿನಿಂದ ಬಳಲುತ್ತಿದ್ದ ಕಾರಣ 2022ರ ಸೆಪ್ಟೆಂಬರ್ ನಂತರ ಜಸ್ಪ್ರೀತ್ ಬುಮ್ರಾ ಯಾವುದೇ ಅಂತರಾಷ್ಟ್ರೀಯ ಪಂದ್ಯಗಳನ್ನಾಡಿಲ್ಲ. ಬೆನ್ನು ನೋವಿಗೆ ನ್ಯೂಜಿಲೆಂಡ್‌ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಬುಮ್ರಾ, ನಂತರ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಇದೀಗ ಬುಮ್ರಾ ಸಂಪೂರ್ಣ ಚೇತರಿಸಿಕೊಂಡಿದ್ದು ಎನ್‌ಸಿಎನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ.

ವಿಂಡೀಸ್ ವಿರುದ್ಧದ ಟಿ20 ಸರಣಿಯ ನಂತರ ಭಾರತ ಟಿ20 ತಂಡ ಐರ್ಲೆಂಡ್ ಪ್ರವಾಸ (India Vs Ireland t20 series 2023) ಕೈಗೊಳ್ಳಲಿದ್ದು, 3 ಪಂದ್ಯಗಳ ಟಿ20 ಸರಣಿಯನ್ನಾಡಲಿದೆ. ಈ ಸರಣಿಗೆ ಭಾರತ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆಗಳಿರುವ ಕಾರಣ, ಉಪನಾಯಕ ಸೂರ್ಯಕುಮಾರ್ ಯಾದವ್ ನಾಯಕನಾಗಿ ನೇಮಕಗೊಳ್ಳುವ ಸಾಧ್ಯತೆಯಿದೆ. ಐರ್ಲೆಂಡ್ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಆಗಸ್ಟ್ 18ರಂದು ನಡೆಯಲಿದೆ. ಇದನ್ನೂ ಓದಿ : Sanju Samson : ವಿಂಡೀಸ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಆಡಿದ ಸಂಜು ಸ್ಯಾಮ್ಸನ್ ಜರ್ಸಿ

ಭಾರತ Vs ಐರ್ಲೆಂಡ್ ಟಿ20 ಸರಣಿಯ ವೇಳಾಪಟ್ಟಿ :

  • ಮೊದಲ ಟಿ20: ಆಗಸ್ಟ್ 18 (ಮಲಹೈಡ್ ಕ್ರಿಕೆಟ್ ಕ್ಲಬ್ ಮೈದಾನ, ಡುಬ್ಲಿನ್)
  • 2ನೇ ಟಿ20: ಆಗಸ್ಟ್ 20 (ಮಲಹೈಡ್ ಕ್ರಿಕೆಟ್ ಕ್ಲಬ್ ಮೈದಾನ, ಡುಬ್ಲಿನ್)
  • 3ನೇ ಟಿ20: ಆಗಸ್ಟ್ 23 (ಮಲಹೈಡ್ ಕ್ರಿಕೆಟ್ ಕ್ಲಬ್ ಮೈದಾನ, ಡುಬ್ಲಿನ್)

ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ನಂತರ ಟೀಮ್ ಇಂಡಿಯಾ ಏಷ್ಯಾ ಕಪ್ ಟೂರ್ನಿಯಲ್ಲಿ ಆಡಲಿದೆ. ಏಷ್ಯಾ ಕಪ್ ಏಕದಿನ ಟೂರ್ನಿ (Asia Cup 2023) ಆಗಸ್ಟ್ 31ರಿಂದ ಸೆಪ್ಟೆಂಬರ್ 17ರವರೆಗೆ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ.

Jasprit Bumrah: Good News for Team India, Jasprit Bumrah’s Comeback Muhurta Fix

Comments are closed.