ಮುಂಬೈ : ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ, ರನ್ ಮೆಷಿನ್ ಖ್ಯಾತಿಗೆ ಪಾತ್ರರಾಗಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli)ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನದ ವಿರುದ್ದ (India vs Pakistan) ಅದ್ಬುತ ಪ್ರದರ್ಶನ ನೀಡಿದ್ದಾರೆ. ವೇಗದ ಶತಕ ಬಾರಿಸುವ ಮೂಲಕ ಭಾರತಕ್ಕೆ ನೆರವಾಗಿದ್ದು ಮಾತ್ರವಲ್ಲ, ಕೊಹ್ಲಿ ಶತಕ ಸಿಡಿಸುವ ಮೂಲಕ ವಿಶ್ವದಾಖಲೆಯನ್ನೇ ನಿರ್ಮಿಸಿದ್ದಾರೆ.
ಶ್ರೀಲಂಕಾದ ಕೊಲಂಬೊದಲ್ಲಿ ( Coloumbo) ವಿರಾಟ್ ಕೊಹ್ಲಿ ಸತತ ನಾಲ್ಕನೇ ಶತಕ ದಾಖಲಿಸಿದರು. ಏಷ್ಯಾ ಕಪ್ ಸೂಪರ್-4 (Asia Cup 2023 Supre -4) ಭಾಗವಾಗಿ ಪಾಕಿಸ್ತಾನ ವಿರುದ್ಧದ ಪಂದ್ಯಗಳಲ್ಲಿ 94 ಎಸೆತಗಳಲ್ಲಿ 122 ರನ್ ಗಳಿಸಿ ಅಜೇಯರಾಗಿ ಉಳಿದರು. ಇನ್ನು ವಿರಾಟ್ ಕೊಹ್ಲಿಗೆ ಸಾಥ್ ಕೊಟ್ಟ ಕನ್ನಡಿಗ ಕೆಎಲ್ ರಾಹುಲ್ (ಔಟಾಗದೆ 111: 106 ಎಸೆತಗಳಲ್ಲಿ 12 ಬೌಂಡರಿ, 2 ಸಿಕ್ಸರ್) ಆಕರ್ಷಕ ಶತಕದ ನೆರವಿನಿಂದ ಭಾರತ ಸವಾಲಿನ ಮೊತ್ತ ಪೇರಿಸಿತ್ತು.
ಪಾಕಿಸ್ತಾನ ವಿರುದ್ದ ಸಿಡಿಸಿದ ಒಂದು ಶತಕ ಹಲವು ದಾಖಲೆಗಳನ್ನು ಉಡೀಸ್ ಮಾಡಿದೆ. ವಿರಾಟ್ ಕೊಹ್ಲಿ ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ಸಿಡಿಸಿದ ಸತತ ನಾಲ್ಕನೇ ಶತಕ ಇದಾಗಿದೆ. ವಿರಾಟ್ ಕೊಹ್ಲಿ ಅವರು ಇಂದಿನ ಪಂದ್ಯದಲ್ಲಿ ಔಟಾಗದೆ 122 ರನ್ ಗಳಿಸಿದ್ದರು. ಆದರೆ ಈ ಹಿಂದೆ ಇದೇ ಮೈದಾನದಲ್ಲಿ ಕೊಹ್ಲಿ ಔಟಾಗದೇ 122, ಔಟಾಗದೆ 110 ಹಾಗೂ 131 ರನ್ ಗಳಿಸಿದ್ದರು.

ಮಾಸ್ಟರ್ ಬ್ಲಾಸ್ಟರ್ ಸಾರ್ವಕಾಲಿಕ ದಾಖಲೆಗಳನ್ನು ಮುರಿಯಲು ಸಜ್ಜಾಗಿರುವ ವಿರಾಟ್ ಕೊಹ್ಲಿ ಇದುವರೆಗೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 77 ಶತಕ ಸಿಡಿಸಿದ್ದಾರೆ. ಇಷ್ಟೇ ಅಲ್ಲದೇ ಆಡಿದ ಕಡಿಮೆ ಇನ್ನಿಂಗ್ಸ್‌ಗಳಲ್ಲಿ ಅತೀ ಹೆಚ್ಚು ಶತಕಗಳಿಸಿದ ಸಾಧನೆ ಮಾಡಿದ್ದಾರೆ. ವಿರಾಟ್ ಕೊಹ್ಲಿ 561 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರೆ, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ 594 ಇನ್ನಿಂಗ್ಸ್‌ಗಳಲ್ಲಿ ಸಾಧನೆ ಮಾಡಿದ್ದರು.
ಇದನ್ನೂ ಓದಿ : ಏಷ್ಯಾ ಕಪ್ 2023: ಭಾರತ Vs ಪಾಕಿಸ್ತಾನ ಪಂದ್ಯ, ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ರೋಹಿತ್ ಶರ್ಮಾ
ಏಷ್ಯಾಕಪ್‌ನಲ್ಲಿ ಇದು ಕೊಹ್ಲಿ ಅವರ ನಾಲ್ಕನೇ ಶತಕವಾಗಿದೆ. ಇದರೊಂದಿಗೆ ಈ ಟೂರ್ನಿಯಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಎರಡನೇ ಕ್ರಿಕೆಟಿಗ ಎಂಬ ದಾಖಲೆ ನಿರ್ಮಿಸಿದರು. ಶ್ರೀಲಂಕಾದ ದಿಗ್ಗಜ ಕುಮಾರ ಸಂಗಕ್ಕಾರ (4 ಶತಕ) ದಾಖಲೆ ಸರಿಗಟ್ಟಿದ್ದಾರೆ. ಈ ಪಟ್ಟಿಯಲ್ಲಿ ಸನತ್ ಜಯಸೂರ್ಯ 6 ಶತಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.
ಪಾಕಿಸ್ತಾನ ವಿರುದ್ಧ ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 13,000 ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಓಟ್ಟು ವಿರಾಟ್ ಕೊಹ್ಲಿ 268 ಇನ್ನಿಂಗ್ಸ್‌ಗಳಲ್ಲಿ 13 ಸಾವಿರ ರನ್ ಗಳಿಸಿದ್ದಾರೆ. ಇನ್ನು ಸಚಿನ್ ತೆಂಡೂಲ್ಕರ್ 321 ಇನ್ನಿಂಗ್ಸ್) ಮತ್ತು ರಿಕಿ ಪಾಂಟಿಂಗ್ 341 ಇನ್ನಿಂಗ್ಸ್ ಗಳಲ್ಲಿ 13 ಸಾವಿರ ರನ್ ಗಳಿಸಿದ್ದರು.

2022ಕ್ಕೂ ಮೊದಲು ಮೂರು ವರ್ಷಗಳ ಕಾಲ ವಿರಾಟ್ ಕೊಹ್ಲಿ ರನ್‌ಗಳಿಸಲು ಪರದಾಡುತ್ತಿದ್ದರು. ಈ ಮೂರು ವರ್ಷಗಳ ಕಾಲ ಕೊಹ್ಲಿ ಬ್ಯಾಟಿನಿಂದ ಯಾವುದೇ ಶತಕ ಸಿಡಿದಿರಲಿಲ್ಲ. ಆದರೆ ಕಳೆದ ವರ್ಷ ಒಟ್ಟು ಏಳು ಶತಕ ಸಿಡಿಸಿದ್ದಾರೆ. ಇದೀಗ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ( ಟೆಸ್ಟ್, ಏಕದಿನ, ಟಿ೨೦ ) ಒಟ್ಟು 77ನೇ ಅಂತಾರಾಷ್ಟ್ರೀಯ ಶತಕ ಬಾರಿಸಿದ್ದಾರೆ.
ಇದನ್ನೂ ಓದಿ : ಕನ್ನಡಿಗ ಕೆಎಲ್ ರಾಹುಲ್, ವಿರಾಟ್ ಕೊಹ್ಲಿ ದಾಖಲೆಯ ಶತಕ : ಪಾಕಿಸ್ತಾನಕ್ಕೆ 357 ರನ್ ಸವಾಲು
ಏಷ್ಯಾಕಪ್‌ನಲ್ಲಿಯೇ ವಿರಾಟ್ ಕೊಹ್ಲಿ ಆರ್ಭಟಿಸುತ್ತಿದ್ದಾರೆ. ಭಾರತದಲ್ಲಿ ಈ ಬಾರಿ ಏಕದಿನ ವಿಶ್ವಕಪ್ ನಡೆಯಲಿದ್ದು, ಟೀಂ ಇಂಡಿಯಾದ ಮಾಜಿ ನಾಯಕ ಅದ್ಬುತ ಫಾರ್ಮ್‌ನಲ್ಲಿ ಇರುವುದು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಸಾಲು ಸಾಲು ದಾಖಲೆ ಬರೆಯುತ್ತಿರುವ ಕೊಹ್ಲಿಯ ಆರ್ಭಟ ವಿಶ್ವಕಪ್‌ನಲ್ಲೂ ಮುಂದುವರಿಯಬೇಕಿದೆ.
King is back: 77 centuries 13000 runs in ODI Cricket Virat Kohli New world record in India Vs Pakistan