ಒಂದೇ ಓವರ್‌ನಲ್ಲಿ 6 ಸಿಕ್ಸ್ : ಯುವಿ ದಾಖಲೆ‌ ಸರಿಗಟ್ಟಿದ ಕಿರಾನ್ ಪೊಲಾರ್ಡ್

ಅಂಟಿಗುವಾ : ಶ್ರೀಲಂಕಾ ವಿರುದ್ದದ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ನ ದೈತ್ಯ ಕ್ರಿಕೆಟಿಗ ಕೀರನ್ ಪೊಲಾರ್ಡ್ ಐತಿಹಾಸಿಕ ದಾಖಲೆ ಬರೆದಿದ್ದಾರೆ.  ಒಂದೇ ಓವರ್‌ನಲ್ಲಿ ಬರೋಬ್ಬರಿ 6 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ವಿಶ್ವದ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಶ್ರೀಲಂಕಾ ವಿರುದ್ದದ ಮೊದಲ ಟಿ20 ಪಂದ್ಯ ಆಂಟಿಗುವಾದ ಕೂಲಿಡ್ಜ್ ಕ್ರಿಕೆಟ್ ಮೈದಾನದಲ್ಲಿ ನಡೆಯಿತು. ಪಂದ್ಯದ 6ನೇ ಓವರ್ ಎಸೆದ ಅಕಿಲಾ ಧನಂಜಯಗೆ ಕಿರಾನ್ ಪೊಲಾರ್ಡ್ ಶಾಕ್ ನೀಡಿದ್ರು. ಧನಂಜಯ ಎಸೆದ 6 ಎಸೆತಗಳನ್ನೂ ಸಿಕ್ಸರ್ ಗೆ ಅಟ್ಟುವ ಮೂಲಕ ಭಾರತದ ಯುವರಾಜ್ ಸಿಂಗ್ ಸಾಲಿಗೆ ಸೇರ್ಪಡೆಯಾಗಿದ್ದಾರೆ.

ಈ ಹಿಂದೆ ದಕ್ಷಿಣ ಆಫ್ರಿಕಾದ ಹರ್ಷಲ್ ಗಿಬ್ಸ್ ನೆದರ್ ಲ್ಯಾಂಡ್ ವಿರುದ್ದದ ಪಂದ್ಯದಲ್ಲಿ ಒಂದೇ ಓವರ್ ನಲ್ಲಿ 6 ಸಿಕ್ಸರ್ ಸಿಡಿಸಿದ್ದರೆ, ಟಿ20 ವಿಶ್ವಕಪ್ ನಲ್ಲಿ ಇಂಗ್ಲೆಂಡ್ ವಿರುದ್ದದ ಪಂದ್ಯದಲ್ಲಿ ಸ್ಟುವರ್ಟ್ ಬ್ರಾಡ್ ಎಸೆತದಲ್ಲಿ ಒಂದೇ ಓವರ್ ನಲ್ಲಿ 6 ಸಿಕ್ಸರ್ ಬಾರಿಸುವ ಮೂಲಕ ದಾಖಲೆ ಬರೆದಿದ್ದರು. ಇದೀಗ ಯುವರಾಜ್ ಸಿಂಗ್ ಹಾಗೂ ಹರ್ಷಲ್ ಗಿಬ್ಸ್ ಸಾಲಿಗೆ ಪೊಲಾರ್ಡ್ ಸೇರ್ಪಡೆಯಾಗಿದ್ದಾರೆ.

Comments are closed.