Shreyas Iyer : ಅವಮಾನಿಸಿದ ಬಿಸಿಸಿಐ ಮುಂದೆ ಐಪಿಎಲ್ ಕಪ್ ಗೆದ್ದು ಎದೆಯುಬ್ಬಿಸಿ ನಿಂತ ಶ್ರೇಯಸ್ ಅಯ್ಯರ್!

KKR Captain Shreyas Iyer : ಐಪಿಎಲ್ 2024 (IPL 2024) ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡ ಚಾಂಪಿಯನ್ (Kolkata Knight Riders IPL Champions) ಪಟ್ಟಕ್ಕೇರಿದೆೆ.

KKR Captain Shreyas Iyer : ಐಪಿಎಲ್ 2024 (IPL 2024) ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡ ಚಾಂಪಿಯನ್ (Kolkata Knight Riders IPL Champions) ಪಟ್ಟಕ್ಕೇರಿದೆೆ. ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಏಕಪಕ್ಷೀಯ ಫೈನಲ್ ಪಂದ್ಯದಲ್ಲಿ ಬಲಾಢ್ಯ ಕೋಲ್ಕತಾ ನೈಟ್ ರೈಡರ್ಸ್ ತಂಡ, ಸನ್ ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡವನ್ನು 8 ವಿಕೆಟ್’ಗಳಿಂದ ಬಗ್ಗು ಬಡಿಯಿತು.

KKR Captain Shreyas Iyer who won the IPL Cup in front of the humiliated BCCI Kannada Cricket News
Image Credit to Original Source

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಹೈದರಾಬಾದ್, ಕೆಕೆಆರ್ ವೇಗಿ ಮಿಚೆಲ್ ಸ್ಟಾರ್ಕ್ ದಾಳಿಗೆ ತತ್ತರಿಸಿ 18.3 ಓವರ್’ಗಳಲ್ಲಿ ಕೇವಲ 113 ರನ್’ಗಳಿಗೆ ಆಲೌಟಾಯಿತು. ನಂತರ ಗುರಿ ಬೆನ್ನಟ್ಟಿದ ಕೆಕೆಆರ್, ಕೇವಲ 10.3 ಓವರ್’ಗಳಲ್ಲಿ 2 ವಿಕೆಟ್ ನಷ್ಟಕ್ಕೆ 114 ರನ್ ಗಳಿಸಿ 3ನೇ ಬಾರಿ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿತು. ಕೆಕೆಆರ್ ಗೆಲುವಿನಲ್ಲಿ ನಾಯಕ ಶ್ರೇಯಸ್ ಅಯ್ಯರ್ ಮಹತ್ವದ ಪಾತ್ರ ವಹಿಸಿದ್ದಾರೆ.

2014ರಲ್ಲಿ ಕೊನೆಯ ಬಾರಿ ಐಪಿಎಲ್ ಕಪ್ ಗೆದ್ದಿದ್ದ ಕೆಕೆಆರ್ ತಂಡವನ್ನುಮುಂಬೈನ ಶ್ರೇಯಸ್ ಅಯ್ಯರ್ 10 ವರ್ಷಗಳ ನಂತರ ಚಾಂಪಿಯನ್ ಪಟ್ಟಕ್ಕೇರಿಸಿದ್ದಾರೆ. ಈ ಮೂಲಕ ತಮ್ಮನ್ನು ಕಡೆಗಣಿಸಿದ ಬಿಸಿಸಿಐಗೆ ಐಪಿಎಲ್ ಟ್ರೋಫಿ ಗೆದ್ದು ಉತ್ತರ ಕೊಟ್ಟಿದ್ದಾರೆ. ಶ್ರೇಯಸ್ ಅಯ್ಯರ್ ಅವರನ್ನು ಈ ವರ್ಷ ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿಯಿಂದ ಕೈ ಬಿಡಲಾಗಿತ್ತು. ನಂತರ ಅಯ್ಯರ್ ಭಾರತ ತಂಡದಲ್ಲೂ ಸ್ಥಾನ ಕಳೆದುಕೊಂಡಿದ್ದರು. ದೇಶೀಯ ಕ್ರಿಕೆಟ್’ನಲ್ಲಿ ಆಡಲು ನಿರಾಕರಿಸಿದ ಕಾರಣಕ್ಕಾಗಿ ಇಶಾನ್ ಕಿಶನ್ ಜೊತೆ ಶ್ರೇಯಸ್ ಅಯ್ಯರ್ ಬಿಸಿಸಿಐನ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದನ್ನೂ ಓದಿ : Yuvraj Singh 2.0 Loading: ಯುವರಾಜ್‌ ಸಿಂಗ್ ತಯಾರು ಮಾಡಿದ ಹುಡುಗ‌ ಅಭಿಷೇಕ್‌ ಶರ್ಮಾ ಐಪಿಎಲ್’ನಲ್ಲಿ ಧೂಳೆಬ್ಬಿಸಿದ!

ಇದರ ಜೊತೆ ಮೋದಿ ಸರ್ಕಾರದ ಕಜು ವಿರೋಧಿ, ಸಾಮಾಜಿಕ ಜಾಲತಾಣದ ಸ್ಟಾರ್ ಧ್ರುವ ರಾಠಿ ಅವರನ್ನು ಇನ್ಸ್’ಟಾಗ್ರಾಮ್’ನಲ್ಲಿ ಫಾಲೋ ಮಾಡುವ ಮೂಲಕ ಶ್ರೇಯಸ್ ಅಯ್ಯರ್ ಬಲ ಪಂಥೀಯರ ವಿರೋಧಕ್ಕೆ ಗುರಿಯಾಗಿದ್ದಾರೆ. ತಮ್ಮ ವಿರುದ್ಧ ಕೇಳಿ ಬಂದ ಎಲ್ಲಾ ಟೀಕೆಗಳಿಗೆ ಐಪಿಎಲ್ ಟ್ರೋಫಿ ಗೆಲ್ಲುವ ಮೂಲಕ ಶ್ರೇಯಸ್ ಅಯ್ಯರ್ ಉತ್ತರ ಕೊಟ್ಟಿದ್ದಾರೆ. ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡಿರುವ ಶ್ರೇಯಸ್ ಅಯ್ಯರ್, ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡಲಿರುವ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿಲ್ಲ.

KKR Captain Shreyas Iyer who won the IPL Cup in front of the humiliated BCCI Kannada Cricket News
Image Credit to Original Source

ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಜೂನ್ 2ರಂದು ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ಆರಂಭವಾಗಲಿದ್ದು, ಫೈನಲ್ ಪಂದ್ಯ ಜೂನ್ 29ರಂದು ನಡೆಯಲಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಟಿ20 ವಿಶ್ವಕಪ್’ನಲ್ಲಿ ಜೂನ್ 5ರಂದು ತನ್ನ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ.

ಇದನ್ನೂ ಓದಿ : Shikhar Dhawan To Marry Mithali Raj? ಮಿಥಾಲಿ ರಾಜ್ ಜೊತೆ ಶಿಖರ್ ಧವನ್ ಮದುವೆ..? ವಿವಾಹದ ಬಗ್ಗೆ ಗಬ್ಬರ್ ಹೇಳಿದ್ದೇನು..?

ಜೂನ್ 9ರಂದು ನ್ಯೂಯಾರ್ಕ್’ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಪಾಕಿಸ್ತಾನ, ಕೆನಡಾ, ಅಮೆರಿಕ ಮತ್ತು ಐರ್ಲೆಂಡ್ ತಂಡಗಳ ಜೊತೆ ಗ್ರೂಪ್ ’ಎ’ನಲ್ಲಿ ಸ್ಥಾನ ಪಡೆದಿದೆ.

ಐಸಿಸಿ ಟಿ20 ವಿಶ್ವಕಪ್-2024 ಟೂರ್ನಿಗೆ ಆಯ್ಕೆಯಾಗಿರುವ ಭಾರತ ತಂಡ:

1. ರೋಹಿತ್ ಶರ್ಮಾ (ನಾಯಕ)

2. ಯಶಸ್ವಿ ಜೈಸ್ವಾಲ್

3. ವಿರಾಟ್ ಕೊಹ್ಲಿ

4. ಸೂರ್ಯಕುಮಾರ್ ಯಾದವ್

5. ರಿಷಭ್ ಪಂತ್ (ವಿಕೆಟ್ ಕೀಪರ್)

6. ಹಾರ್ದಿಕ್ ಪಾಂಡ್ಯ

7. ರವೀಂದ್ರ ಜಡೇಜ

8. ಕುಲ್ದೀಪ್ ಯಾದವ್

9. ಜಸ್ಪ್ರೀತ್ ಬುಮ್ರಾ

10. ಮೊಹಮ್ಮದ್ ಸಿರಾಜ್

11. ಅರ್ಷದೀಪ್ ಸಿಂಗ್

12. ಅಕ್ಷರ್ ಪಟೇಲ್

13. ಯುಜ್ವೇಂದ್ರ ಚಹಲ್

14. ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)

15. ಶಿವಂ ದುಬೆ

ಇದನ್ನೂ ಓದಿ : Dinesh Karthik: ನಿವೃತ್ತಿಯ ಬೆನ್ನಲ್ಲೇ ಮತ್ತೆ ಕ್ರಿಕೆಟ್ ಮೈದಾನಕ್ಕೆ ದಿನೇಶ್ ಕಾರ್ತಿಕ್.. ಟಿ20 ವಿಶ್ವಕಪ್’ನಲ್ಲಿ ಮಿಂಚಲಿರುವ ಡಿಕೆ!

ಐಸಿಸಿ ಟಿ20 ವಿಶ್ವಕಪ್ 2024: ಭಾರತದ ಲೀಗ್ ಪಂದ್ಯಗಳ ವೇಳಾಪಟ್ಟಿ (ICC Men’s T20 World Cup 2024)

ಜೂನ್ 05: ಭಾರತ Vs ಐರ್ಲೆಂಡ್ (ನ್ಯೂಯಾರ್ಕ್, ರಾತ್ರಿ 7.30ಕ್ಕೆ)

ಜೂನ್ 09: ಭಾರತ Vs ಪಾಕಿಸ್ತಾನ (ನ್ಯೂಯಾರ್ಕ್, ರಾತ್ರಿ 8ಕ್ಕೆ)

ಜೂನ್ 12: ಭಾರತ Vs ಅಮೆರಿಕ (ನ್ಯೂಯಾರ್ಕ್, ರಾತ್ರಿ 8ಕ್ಕೆ)

ಜೂನ್ 15: ಭಾರತ Vs ಕೆನಡಾ (ಲಾಡರ್’ಹಿಲ್, ರಾತ್ರಿ 8ಕ್ಕೆ)

KKR Captain Shreyas Iyer who won the IPL Cup in front of the humiliated BCCI Kannada Cricket News

Comments are closed.