KL Rahul : ಲಕ್ನೋ ಸೂಪರ್ ಜೈಂಟ್ಸ್ (LSG) ನಾಯಕ ಕೆಎಲ್ ರಾಹುಲ್ ಭರ್ಜರಿ ಫಾರ್ಮ್‌ಗೆ ಮರಳಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ದದ ಪಂದ್ಯದಲ್ಲಿ ಕೆಎಲ್ ರಾಹುಲ್ (KL Rahul) ಕ್ವಿಂಟಾನ್ ಡಿ ಕಾಕ್ ಜೊತೆ ದಾಖಲೆಯ ಜೊತೆಯಾಟ ಆಡಿದ್ದಾರೆ. ಈ ನಡುವಲ್ಲೇ ಟೀಂ ಇಂಡಿಯಾದ ಮಾಜಿ ನಾಯಕ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ (MS Dhoni) ಅವರ ದಾಖಲೆಯೊಂದನ್ನು ಕನ್ನಡಿಗ ಕೆಎಲ್ ರಾಹುಲ್ ಅಳಿಸಿ ಹಾಕಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಅದ್ಬುತ ಆಟದ ಪ್ರದರ್ಶನ ನೀಡುತ್ತಿದೆ. ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಲಕ್ನೋ ಸೋಲಿನ ರುಚಿ ತೋರಿಸಿದೆ. ಚೆನ್ನೈ ತಂಡ ನೀಡಿದ್ದ ಸವಾಲಿನ ಮೊತ್ತವನ್ನು ಕೇವಲ ೨ ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿದೆ.
ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಅರ್ಧ ಶತಕ ಬಾರಿಸಿದ ವಿಕೆಟ್ ಕೀಪರ್ ಅನ್ನೋ ದಾಖಲೆಯನ್ನು ಕೆಎಲ್ ರಾಹುಲ್ ಬರೆದಿದ್ದಾರೆ. ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರು 24 ಅರ್ಧ ಶತಕ ಬಾರಿಸಿದ್ದರು. ಇದು ಐಪಿಎಲ್ ಇತಿಹಾಸದ ದಾಖಲೆಯಾಗಿತ್ತು. ಆದ್ರೆ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಅರ್ಧ ಶತಕ ಬಾರಿಸುವ ಮೂಲಕ ಧೋನಿ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

ಕೆಎಲ್ ರಾಹುಲ್ ಐಪಿಎಲ್ ಆರಂಭಕ್ಕೂ ಮೊದಲು ಗಾಯದ ಸಮಸ್ಯೆಯಿಂದ ಬಳಲಿದ್ದರು. ಈ ಬಾರಿಯ ಐಪಿಎಲ್‌ನಲ್ಲಿ ಕೆಎಲ್ ರಾಹುಲ್ ಆಡುವುದು ಕೂಡ ಅನುಮಾನ ಎನ್ನಲಾಗಿತ್ತು. ಭಾರತ – ಇಂಗ್ಲೆಂಡ್ ಸರಣಿ ಸೇರಿದಂತೆ ಕೆಲವು ಸರಣಿಗಳನ್ನು ರಾಹುಲ್ ಮಿಸ್ ಮಾಡಿಕೊಂಡಿದ್ದರು. ಅಷ್ಟೇ ಅಲ್ಲದೇ ಅವರು ಈ ವರ್ಷ 6 ಪಂದ್ಯಗಳಲ್ಲಿ 34 ರ ಸರಾಸರಿಯಲ್ಲಿ 204 ರನ್ ಗಳಿಸಿದರು.
ಇದನ್ನೂ ಓದಿ : ಟ್ರಾವಿಸ್ ಹೆಡ್ ಆರ್ಭಟಕ್ಕೆ ಮಂಕಾದ ಆರ್‌ಸಿಬಿ : IPL ನಲ್ಲಿ4 ನೇ ವೇಗದ ಶತಕ ದಾಖಲು
ಸಿಎಸ್‌ಕೆ ವಿರುದ್ದದ ಪಂದ್ಯದಲ್ಲಿ ರಾಹುಲ್ ಅವರ ಬಿರುಸಿನ ಇನ್ನಿಂಗ್ಸ್ ಆಡಿದ್ದರು. ಈ ಬಾರಿಯ ಐಪಿಎಲ್‌ನಲ್ಲಿ ಅವರು 281 ರನ್ ಗಳಿಸಿದ್ದು, ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅವರ ಜೊತೆಗೆ 4ನೇ ಸ್ಥಾನದಲ್ಲಿದ್ದಾರೆ. ಸದ್ಯ ಮುಂಬರುವ ವಿಶ್ವಕಪ್‌ಗೆ ಸ್ಥಾನವನ್ನು ಭದ್ರ ಪಡಿಸಿಕೊಂಡಿರುವ ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿಯೂ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ವಿಶ್ವಕಪ್ ಗೆ ವಿಕೆಟ್ ಕೀಪರ್ ಸ್ಥಾನಕ್ಕೆ ರಿಷಬ್ ಪಂತ್, ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. ಒಂದೊಮ್ಮೆ ರಾಹುಲ್ ಅವರನ್ನು ವಿಕೆಟ್ ಕೀಪರ್ ಆಗಿ ನೇಮಕ ಮಾಡಿದ್ರೆ ಉಳಿದವರು ಸ್ಥಾನ ಕಳೆದುಕೊಳ್ಳಬೇಕಾಗಬಹುದು. ರಿಷಬ್ ಪಂತ್ ವಿಶ್ವಕಪ್‌ನಲ್ಲಿ ಸ್ಥಾನ ಪಡೆದ್ರೆ ರಾಹುಲ್ ಆಟಗಾರನಾಗಿ ಕಾಣಿಸಿಕೊಳ್ಳಬಹುದು.
ಇದನ್ನೂ ಓದಿ : ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ನಾಯಕ ?
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ಪಂದ್ಯದಲ್ಲಿ ಕೆಎಲ್ ರಾಹುಲ್, ಕ್ವಿಂಟನ್ ಡಿ ಕಾಕ್ ಜೊತೆ ಸೇರಿ 134 ರನ್‌ಗಳ ಆರಂಭಿಕ ಜೊತೆಯಾಟ ಆಡಿದ್ದರು. ಅಲ್ಲದೇ ರಾಹುಲ್ 177 ರನ್‌ಗಳನ್ನು ಬೆನ್ನಟ್ಟಿದರು. ಆದರೆ ರಾಹುಲ್ 18 ನೇ ಓವರ್‌ನಲ್ಲಿ ನಿರ್ಗಮಿಸುವ ಮೂಲಕ ನಿರಾಸೆ ಮೂಡಿಸಿದ್ದರು. ಕೊನೆಯಲ್ಲಿ ನಿಕೋಲಸ್ ಪೂರನ್ ಅಜೇಯ 23 ರನ್ ಜೊತೆಗೆ LSG 8 ವಿಕೆಟ್‌ಗಳ ಜಯ ತಂದುಕೊಟ್ಟಿದ್ದಾರೆ.
🗣️🗣️ It's MSD. He walks in and the pressure gets on to the bowlers @LucknowIPL captain @klrahul on that entertaining finishing cameo from @msdhoni 👌👌#TATAIPL | #LSGvCSK pic.twitter.com/qmvCUM09Kt
— IndianPremierLeague (@IPL) April 19, 2024
ಇದನ್ನೂ ಓದಿ : ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣ : ಹಾರ್ದಿಕ್ ಪಾಂಡ್ಯ ಸಹೋದರ ಅರೆಸ್ಟ್
KL Rahul break MS Dhoni All time IPL Record 2024 LSG vs CSK