ಬೆಂಗಳೂರು: KL Rahul comeback : ಸ್ನಾಯು ಸೆಳೆತದ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಕನ್ನಡಿಗ ಕೆ.ಎಲ್ ರಾಹುಲ್ (KL Rahul) ಐಸಿಸಿ ಏಕದಿನ ವಿಶ್ವಕಪ್ (ICC World Cup 2023) ಟೂರ್ನಿಯಲ್ಲಿ ಆಡುವ ವಿಶ್ವಾಸದಲ್ಲಿದ್ದಾರೆ. ಅದಕ್ಕೂ ಮೊದಲು ಏಷ್ಯಾ ಕಪ್ ಟೂರ್ನಿಯನ್ನು ರಾಹುಲ್ ಟಾರ್ಗೆಟ್ ಮಾಡಿದ್ದು, ಟೀಮ್ ಇಂಡಿಯಾ ಕಂಬ್ಯಾಕ್ ಬಗ್ಗೆ ನಿಗೂಢ ಸಂದೇಶ ರವಾನಿಸಿದ್ದಾರೆ.
ಕೆ.ಎಲ್ ರಾಹುಲ್ ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (National Cricket Academy – NCA) ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಟೀಮ್ ಇಂಡಿಯಾ ಕಂಬ್ಯಾಕ್’ಗೆ ಕಠಿಣ ಪ್ರಯತ್ನ ನಡೆಸುತ್ತಿರುವ ರಾಹುಲ್, ಎನ್’ಸಿಎನಲ್ಲಿರುವ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, “ಮತ್ತೆ ನನ್ನಂತೆ ಅನಿಸಲು ಶುರುವಾಗಿದೆ” (Starting to feeling like me again) ಎಂದು ಬರೆದುಕೊಂಡಿದ್ದಾರೆ.
ಟೀಮ್ ಇಂಡಿಯಾ ಏಕದಿನ ತಂಡದ ಮಧ್ಯಮ ಕ್ರಮಾಂಕದ ಆಧಾರಸ್ಥಂಭವಾಗಿರುವ ಕೆ.ಎಲ್ ರಾಹುಲ್ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಲಭ್ಯರಾಗುವ ಸಾಧ್ಯತೆಯಿದೆ. ಈ ಬಾರಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಅಕ್ಟೋಬರ್ 5ರಿಂದ ನವೆಂಬರ್ 23ರವರೆಗೆ ಭಾರತದ ಆತಿಥ್ಯದಲ್ಲೇ ನಡೆಯಲಿದ್ದು, ವಿಶ್ವಕಪ್ ತಂಡದಲ್ಲಿ ರಾಹುಲ್ ವಿಕೆಟ್ ಕೀಪರ್ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ.
ಇದನ್ನೂ ಓದಿ : Duleep Trophy final : ನಾಳೆಯಿಂದ ಚಿನ್ನಸ್ವಾಮಿಯಲ್ಲಿ ದುಲೀಪ್ ಟ್ರೋಫಿ ಫೈನಲ್, ಚಾಂಪಿಯನ್ ಪಟ್ಟದ ನಿರೀಕ್ಷೆಯಲ್ಲಿ ದಕ್ಷಿಣ ವಲಯ
31 ವರ್ಷದ ಕೆ.ಎಲ್ ರಾಹುಲ್ ಕಳೆದ ಐಪಿಎಲ್ ಟೂರ್ನಿಯ ವೇಳೆ ಬಲತೊಡೆಯ ಸ್ನಾಯು ಸೆಳೆತಕ್ಕೊಳಗಾಗಿ ಐಪಿಎಲ್ ಟೂರ್ನಿಯಿಂದ ಅರ್ಧದಲ್ಲೇ ಹೊರ ಬಿದ್ದಿದ್ದರು. ನಂತರ ಲಂಡನ್’ನಲ್ಲಿ ರಾಹುಲ್ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್’ಷಿಪ್ ಫೈನಲ್ (ICC World Test Championship Final – WTC) ಪಂದ್ಯಕ್ಕೆ ರಾಹುಲ್ ಅಲಭ್ಯರಾಗಿದ್ದರು. ವೆಸ್ಟ್ ಇಂಡೀಸ್ ಪ್ರವಾಸವನ್ನೂ ತಪ್ಪಿಸಿಕೊಂಡಿರುವ ರಾಹುಲ್ ಏಷ್ಯಾ ಕಪ್ ಟೂರ್ನಿಗೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ಗುರಿ ಹೊಂದಿದ್ದಾರೆ. ಏಷ್ಯಾ ಕಪ್ ಟೂರ್ನಿ (Asia Cup 2023) ಆಗಸ್ಟ್ 31ರಿಂದ ಸೆಪ್ಟೆಂಬರ್ 17ರವರೆಗೆ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ.
KL Rahul comeback: Team India comeback, KL Rahul sent a mysterious message