ಟೀಂ ಇಂಡಿಯಾಗೆ ರಾಹುಲ್ ಬಲ : ಇಂಗ್ಲೆಂಡ್ ವಿಮಾನ ಏರಲು ಫಿಟ್ ಆದ ಕನ್ನಡಿಗ

ಮುಂಬೈ: ಟೀಂ ಇಂಡಿಯಾ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಸಿದ್ದತೆ ನಡೆಸುತ್ತಿದೆ. ಶಸ್ತ್ರಚಿಕಿತ್ಸೆ ಒಳಗಾಗಿದ್ದ ಕನ್ನಡಿಗ ಕೆ.ಎಲ್.ರಾಹುಲ್ ಸಂಪೂರ್ಣವಾಗಿ ಫಿಟ್ ಆಗಿದ್ದು, ಇಂಗ್ಲೆಂಡ್ ವಿಮಾನವೆರಲು ಸಜ್ಜಾಗಿದ್ದಾರೆ.

ಭಾರತ ಟೆಸ್ಟ್ ತಂಡ ಜೂನ್ 2ರಂದು ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಲಿದೆ. ನ್ಯೂಜಿಲ್ಯಾಂಡ್ ವಿರುದ್ದದ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಹಾಗೂ ಇಂಗ್ಲೆಂಡವ ವಿರುದ್ದ 5 ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ. ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಗೊಂಡಿದ್ದ ಭಾರತದ ತಂಡದಲ್ಲಿ ಕನ್ನಡಿಗ ಕೆ.ಎಲ್.ರಾಹುಲ್ ಸ್ಥಾನ ಪಡೆದಿದ್ದರು. ಆದ್ರೆ ಅಪೆಂಡಿಸೈಟಿಸ್ ಶಸ್ತ್ರ ಚಿಕಿತ್ಸೆಗೆ ಒಳಗಾದ ಹಿನ್ನೆಲೆಯಲ್ಲಿ ಅವರು ಫಿಟ್ನೆಸ್ ಪರೀಕ್ಷೆಗೆ ಒಳಪಡಬೇಕಾಗಿತ್ತು. ಆದ್ರೀಗ ರಾಹುಲ್ ಸಂಪೂರ್ಣವಾಗಿ ಫಿಟ್ ಆಗಿದ್ದು, ಬಿಸಿಸಿಐ ರಾಹುಲ್ ಅವರಿಗೆ ಇಂಗ್ಲೆಂಡ್ ಗೆ ತೆರಳಲು ಗ್ರೀನ್ ಸಿಗ್ನಲ್ ಕೊಟ್ಟಿದೆ.

ಕನ್ನಡಿಗ ಕೆ.ಎಲ್.ರಾಹುಲ್ ಇದುವರೆಗೆ 36 ಟೆಸ್ಟ್ ಪಂದ್ಯಗಳನ್ನು ಆಡಿದ್ದು 2006 ರನ್ ಗಳಿಸಿದ್ದಾರೆ. ಇದರಲ್ಲಿ ಒಟ್ಟು 5 ಶತಕ ಹಾಗೂ 11 ಅರ್ಧ ಶತಕ ಗಳಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ದ ಸರಣಿಗೆ ಆಯ್ಕೆಯಾಗಿದ್ದರೂ ಕೂಡ ರಾಹುಲ್ 11ರ ಬಳಗದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ ರಾಹುಲ್ ಬ್ಯಾಟ್ ಬೀಸೋದು ಖಚಿತ.

ಕಳೆದೆರಡು ಐಪಿಎಲ್ ಋತುವಿನಲ್ಲಿ ರನ್ ಹೊಳೆಯನ್ನೇ ಹರಿಸಿರುವ ರಾಹುಲ್ ಈ ಬಾರಿಯ ಐಪಿಎಲ್ ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. 2019ರ ಸಪ್ಟೆಂಬರ್ ನಲ್ಲಿ ವೆಸ್ಟ್ ಇಂಡಿಸ್ ವಿರುದ್ದದ ಪಂದ್ಯದಲ್ಲಿ ರಾಹುಲ್ ಕೊನೆಯದಾಗಿ ಟೆಸ್ಟ್ ಪಂದ್ಯವನ್ನಾಡಿದ್ದರು. ಭರ್ಜರಿ ಫಾರ್ಮ್ ನಲ್ಲಿರುವ ರಾಹುಲ್ ಟೆಸ್ಟ್ ನಲ್ಲಿಯೂ ಮಿಂಚುವ ನಿರೀಕ್ಷೆಯಿದೆ.

Comments are closed.