ಬೆಂಗಳೂರು: ಕನ್ನಡಿಗ ಕೆ.ಎಲ್ ರಾಹುಲ್ (KL Rahul) ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ (India Vs Sri Lanka) ಸಜ್ಜಾಗುತ್ತಿದ್ದಾರೆ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಕಳೆದೊಂದು ವಾರದಿಂದ ಕಠಿಣ ಅಭ್ಯಾಸ ನಡೆಸುತ್ತಿರುವ ರಾಹುಲ್ ಭಾನುವಾರ ಶ್ರೀಲಂಕಾಗೆ ಪ್ರಯಾಣ ಬೆಳೆಸಲಿದ್ದಾರೆ.

ಶ್ರೀಲಂಕಾಗೆ ತೆರಳುವ ಮುನ್ನ ರಾಹುಲ್ ಪೈಲಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ರೆಡ್ ಬುಲ್ (Red Bull) ಕಂಪನಿಯ ಬ್ರ್ಯಾಂಡ್ ಅಂಬಾಸಿಡರ್ (Red Bull Brand Ambassador) ಆಗಿರುವ ರಾಹುಲ್ ಅವರಿಗೆ ರೆಡ್ ಬುಲ್ ವತಿಯಿಂದ ಸ್ಟಂಟ್ ಜೆಟ್ ಒಂದನ್ನು ಓಡಿಸಿದ್ದಾರೆ. ಆಕಾಶದಲ್ಲಿ ರಾಹುಲ್ (KL Rahul) ಸ್ಟಂಟ್ ಜೆಟ್ (Stunt Jet) ಓಡಿಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ.
https://x.com/criccrazyjohns/status/1816775857228447922?s=46
32 ವರ್ಷದ ರಾಹುಲ್ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೂಲಕ 6 ತಿಂಗಳ ನಂತರ ಅಂತರಾಷ್ಟ್ರೀಯ ಕ್ರಿಕೆಟ್’ಗೆ ಕಂಬ್ಯಾಕ್ ಮಾಡಲಿದ್ದಾರೆ. ಇದೇ ವರ್ಷದ ಜನವರಿ ತಿಂಗಳಲ್ಲಿ ಹೈದರಾಬಾದ್’ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ನಂತರ ರಾಹುಲ್ ಭಾರತ ಪರ ಯಾವುದೇ ಪಂದ್ಯಗಳನ್ನಾಡಿಲ್ಲ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಗಾಯದ ಸಮಸ್ಯೆಯಿಂದ ಬಳಲಿದ್ದ ರಾಹುಲ್, ಲಂಡನ್’ನಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು. ನಂತರ ಐಪಿಎಲ್ ಮೂಲಕ ವೃತ್ತಿಪರ ಕ್ರಿಕೆಟ್’ಗೆ ಮರಳಿದ್ದ ರಾಹುಲ್ ಇದೀಗ ಆರು ತಿಂಗಳ ನಂತರ ಅಂತರಾಷ್ಟ್ರೀಯ ಕ್ರಿಕೆಟ್’ಗೆ ಮರಳಲು ಸಜ್ಜಾಗಿದ್ದಾರೆ.

ಇದನ್ನೂ ಓದಿ : Yuvraj Singh – IPL 2025 : ಐಪಿಎಲ್’ನಲ್ಲಿ ಹೊಸ ಇನ್ನಿಂಗ್ಸ್ ಶುರು ಮಾಡಲಿದ್ದಾನೆ ವಿಶ್ವಕಪ್ ಹೀರೊ ಯುವರಾಜ್ ಸಿಂಗ್
ಶ್ರೀಲಂಕಾ ವಿರುದ್ಧ ಭಾರತ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದ್ದು, ಮೊದಲ ಪಂದ್ಯ ಆಗಸ್ಟ್ 2ರಂದು ಕೊಲೊಂಬೋದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಟಿ20 ವಿಶ್ವ ಚಾಂಪಿಯನ್ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಶಿವಂ ದುಬೆ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಿಯಾನ್ ಪರಾಗ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.
ಇದನ್ನೂ ಓದಿ : ಮಹಾರಾಜ ಟ್ರೋಫಿ ಟಿ20 ಟೂರ್ನಿ: ಯಾವ ಆಟಗಾರ, ಯಾವ ತಂಡಕ್ಕೆ ಇಲ್ಲಿದೆ ಸಂಪೂರ್ಣ ಮಾಹಿತಿ
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ವೇಳಾಪಟ್ಟಿ
ಆಗಸ್ಟ್ 02: ಮೊದಲ ಏಕದಿನ ಪಂದ್ಯ (ಕೊಲಂಬೊ)
ಆಗಸ್ಟ್ 04: ಎರಡನೇ ಏಕದಿನ ಪಂದ್ಯ (ಕೊಲಂಬೊ)
ಆಗಸ್ಟ್ 07: ಮೂರನೇ ಏಕದಿನ ಪಂದ್ಯ (ಕೊಲಂಬೊ)
ಇದನ್ನೂ ಓದಿ : Women’s Asia Cup T20: 9ನೇ ಬಾರಿ ಫೈನಲ್‌ಗೆ ಭಾರತ, 8ನೇ ಏಷ್ಯಾ ಕಪ್ ಕಿರೀಟಕ್ಕೆ ಒಂದೇ ಮೆಟ್ಟಿಲು
KL Rahul has flown the Red Bull stunt jet as a pilot