KL Rahul Health Report : ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಆಡಲಿದ್ದಾರೆ ರಾಹುಲ್ ?

ಬೆಂಗಳೂರು: (KL Rahul Health Report ) ಕೋವಿಡ್-19ನಿಂದ ಬಳಲುತ್ತಿರುವ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಕೆ.ಎಲ್ ರಾಹುಲ್ (KL Rahul) ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ (India Vs West Indies Series) ಲಭ್ಯರಾಗುವ ಸಾಧ್ಯತೆಯಿದೆ. ಈ ಬಗ್ಗೆ ಸ್ವತಃ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರೇ ಮಾಹಿತಿ ನೀಡಿದ್ದಾರೆ. “ರಾಹುಲ್ ಕೋವಿಡ್ ಪಾಸಿಟಿವ್’ಗೆ ಒಳಗಾಗಿದ್ದಾರೆ. ಆದರೆ ವೆಸ್ಟ್ ಇಂಡೀಸ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಿಂದ ಹೊರ ಬಿದ್ದಿಲ್ಲ” ಎಂದು ಗಂಗೂಲಿ ತಿಳಿಸಿದ್ದಾರೆ.ಸದ್ಯ ಕ್ವಾರಂಟೈನ್’ ನಲ್ಲಿರುವ ರಾಹುಲ್ ಇನ್ನೆರಡು ದಿನಗಳಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಪರೀಕ್ಷೆಯಲ್ಲಿ “ನೆಗೆಟಿವ್” ಫಲಿತಾಂಶ ಬಂದರೆ ರಾಹುಲ್ ವಿಂಡೀಸ್ ವಿಮಾನ ಹತ್ತಲಿದ್ದಾರೆ. ಚೇತರಿಕೆ ವಿಳಂಬವಾದರೆ ವೆಸ್ಟ್ ಇಂಡೀಸ್ ವಿರುದ್ಧದ ಮೊದಲೆರಡು ಟಿ20 ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆಯಿದೆ.

ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ತವರು ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕತ್ವ ವಹಿಸಬೇಕಿದ್ದ ರಾಹುಲ್, ಸರಣಿ ಆರಂಭಕ್ಕೆ ಮುನ್ನಾ ದಿನ ಸ್ಪೋರ್ಟ್ಸ್ ಹರ್ನಿಯಾ ಗಾಯಕ್ಕೊಳಗಾಗಿದ್ದರು. ನಂತರ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆ ಪಡೆದು ಬಂದಿದ್ದ ರಾಹುಲ್, ಕೆಲ ದಿನಗಳ ಹಿಂದೆ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (National Cricket Academy- NCA) ಟ್ರೈನಿಂಗ್ ಮತ್ತು ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದರು. ಇದರ ಬೆನ್ನಲ್ಲೇ ರಾಹುಲ್’ಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿತ್ತು. ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಜುಲೈ 29ರಂದು ನಡೆಯಲಿದ್ದು, ಕೆ.ಎಲ್ ರಾಹುಲ್ ತಂಡದಲ್ಲಿದ್ದಾರೆ. ಆದರೆ ಸರಣಿ ಆರಂಭಕ್ಕೂ ನನ್ನ ರಾಹುಲ್ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸ್ ಆಗಬೇಕಿದೆ.

ವೆಸ್ಟ್ ಇಂಡೀಸ್ ವಿರುದ್ಧದಟಿ20 ಸರಣಿಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಆರ್.ಅಶ್ವಿನ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಭಾರತ Vs ವೆಸ್ಟ್ ಇಂಡೀಸ್: ಟಿ20 ಸರಣಿಯ ವೇಳಾಪಟ್ಟಿ
ಜುಲೈ 29: ಮೊದಲ ಟಿ20 ಪಂದ್ಯ (ಟ್ರಿನಿಡಾಡ್)
ಆಗಸ್ಟ್ 01: ಎರಡನೇ ಟಿ20 ಪಂದ್ಯ (ಸೇಂಟ್ ಕಿಟ್ಸ್)
ಆಗಸ್ಟ್ 02: ಮೂರನೇ ಟಿ20 ಪಂದ್ಯ (ಸೇಂಟ್ ಕಿಟ್ಸ್)
ಆಗಸ್ಟ್ 06: ನಾಲ್ಕನೇ ಟಿ20 ಪಂದ್ಯ (ಫ್ಲೋರಿಡಾ)
ಆಗಸ್ಟ್ 07: ಐದನೇ ಟಿ20 ಪಂದ್ಯ (ಫ್ಲೋರಿಡಾ)

ಇದನ್ನೂ ಓದಿ : IND vs WI ODI: ಟೀಂ ಇಂಡಿಯಾಗೆ ದೊಡ್ಡ ಹೊಡೆತ; ರವೀಂದ್ರ ಜಡೇಜಾ ಗಾಯ

ಇದನ್ನೂ ಓದಿ : India Star Shreyas Iyer : ಶ್ರೇಯಸ್ ಅಯ್ಯರ್ ಭೇಟಿ ಮಾಡಲು ವಿಂಡೀಸ್’ನಲ್ಲಿ ಎರಡು ಗಂಟೆ ಕಾದು ಕುಳಿತ ಹುಡುಗಿ

KL Rahul Health Report, Rahul will play in T20 series against India vs west indies Series

Comments are closed.