World Cup 2023 : ವಿಶ್ವಕಪ್ ನಲ್ಲಿ ಭಾರತದ ಗೆಲುವಿನ ಅಭಿಯಾನ ಮುಂದುವರಿದಿದೆ. ಟೀಂ ಇಂಡಿಯಾ ಆಟಗಾರರು ಭರ್ಜರಿ ಆಟದ ಮೂಲಕ ಎದುರಾಳಿಗಳಿಗೆ ನಡುಕ ಹುಟ್ಟಿಸಿದ್ದಾರೆ. ಸತತ ಐದು ಗೆಲುವಿನ ಅಲೆಯಲ್ಲಿ ಸಂಭ್ರಮಿಸುತ್ತಿರುವ ಭಾರತ ತಂಡದಿಂದ ಕಹಿ ಸುದ್ದಿಯೊಂದು ಹೊರಬಿದ್ದಿದೆ. ಭಾರತ – ಇಂಗ್ಲೆಂಡ್ (india vs England) ಪಂದ್ಯದಿಂದ ವಿರಾಟ್ ಕೊಹ್ಲಿ (Virat Kohli), ರೋಹಿತ್ ಶರ್ಮಾ (Rohit Sharma)ಹೊರಬಿದ್ದಿದ್ದು, ಕನ್ನಡಿಗ ಕೆಎಲ್ ರಾಹುಲ್ (KL Rahul Captain) ನಾಯಕನಾಗುವ ಸಾಧ್ಯತೆಯಿದೆ.

ವಿಶ್ವಕಪ್ ಆರಂಭವಾಗುತ್ತಲೇ ಆರಂಭಿಕ ಆಟಗಾರ ಶುಭಮನ್ ಗಿಲ್ ಡೆಂಗ್ಯೂ ಜ್ವರದಿಂದ ಬಳಲಿದ್ದರು. ಆರಂಭದ ಎರಡು ಪಂದ್ಯಗಳನ್ನು ಮಿಸ್ ಮಾಡಿಕೊಂಡಿದ್ದರು. ಆದ್ರೆ ಡೆಂಗ್ಯೂನಿಂದ ಚೇತರಿಸಿಕೊಂಡ ಶುಭಮನ್ ಗಿಲ್ ಉತ್ತಮ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಅಲ್ಲದೇ ವಿಶ್ವದ ನಂ.1 ಆಟಗಾರ ಆಗುವತ್ತ ಗಮನ ಹರಿಸಿದ್ದಾರೆ.
ಇದನ್ನೂ ಓದಿ : ಹಾರ್ದಿಕ್ ಪಾಂಡ್ಯ ಬೆನ್ನಲ್ಲೇ ರೋಹಿತ್ ಶರ್ಮಾ- ವಿರಾಟ್ ಕೊಹ್ಲಿ ಔಟ್ !
ನಂತರದಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಬಾಂಗ್ಲಾದೇಶ ವಿರುದ್ದದ ಪಂದ್ಯದಲ್ಲಿ ಗಾಯಗೊಂಡು ಎನ್‌ಸಿಎ ಸೇರಿಕೊಂಡಿದ್ದಾರೆ. ಸದ್ಯಕ್ಕೆ ಅವರು ಫಿಟ್ ಆಗಿದ್ದರೂ ಕೂಡ ಭಾರತ ತಂಡದ ಪರ ಹಾರ್ದಿಕ್ ಪಾಂಡ್ಯ ಕಣಕ್ಕೆ ಇಳಿಯುವುದು ಬಹುತೇಕ ಸೆಮಿಫೈನಲ್‌ನಲ್ಲಿಯೇ ಎನ್ನಲಾಗುತ್ತಿದೆ. ಹೀಗಾಗಿ ಮುಂದಿನ 4 ಪಂದ್ಯಗಳಿಗೆ ಪಾಂಡ್ಯ ಅಲಭ್ಯರಾಗಲಿದ್ದಾರೆ.
ಈ ನಡುವಲ್ಲೇ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮುಂದಿನ ಇಂಗ್ಲೆಂಡ್ ಹಾಗೂ ಶ್ರೀಲಂಕಾ ವಿರುದ್ದದ ಪಂದ್ಯದಲ್ಲಿ ಆಡುತ್ತಿಲ್ಲ. ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ ಇಬ್ಬರೂ ಕೂಡ ತಂಡದಿಂದ ಹೊರಗುಳಿದ್ರೆ ಕನ್ನಡಿಗ ಕೆಎಲ್ ರಾಹುಲ್ ಟೀಂ ಇಂಡಿಯಾವನ್ನು ಮುನ್ನೆಡೆಸಲಿದ್ದಾರೆ.
ಏಷ್ಯಾಕಪ್ ಬೆನ್ನಲ್ಲೇ ನಡೆದ ಆಸ್ಟ್ರೇಲಿಯಾ ವಿರುದ್ದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಕೆಎಲ್ ರಾಹುಲ್ ತಂಡ ವನ್ನು ಮುನ್ನೆಡೆಸಿದ್ದರು. ಮೊದಲ ಎರಡು ಪಂದ್ಯಗಳಲ್ಲಿ ರಾಹುಲ್ ನೇತೃತ್ವದ ತಂಡ ಭರ್ಜರಿ ಗೆಲುವು ದಾಖಲಿಸಿತ್ತು. ಆದರೆ ಮೂರನೇ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ರೋಹಿತ್ ಶರ್ಮಾ ನಾಯಕತ್ವದಲ್ಲಿ ಕಣಕ್ಕೆ ಇಳಿದು ಸೋಲನ್ನು ಕಂಡಿತ್ತು.
ಇದನ್ನೂ ಓದಿ : ಐಪಿಎಲ್ 2024 ರಲ್ಲಿ ಆರ್‌ಸಿಬಿ ಪರ ಆಡಲ್ವಂತೆ ವಿರಾಟ್ ಕೊಹ್ಲಿ !
ಈ ಹಿಂದೆ ಭಾರತ ತಂಡ ಉಪನಾಯಕನಾಗಿದ್ದ ಕೆಎಲ್ ರಾಹುಲ್ ಗಾಯದ ಸಮಸ್ಯೆ, ಫಾರ್ಮ್ ಕೊರತೆಯಿಂದ ತಂಡದಿಂದ ದೂರವಾಗಿದ್ದರು. ಆದರೆ ಇದೀಗ ರಾಹುಲ್ ಭರ್ಜರಿಯಾಗಿಯೇ ತಂಡಕ್ಕೆ ಎಂಟ್ರಿಕೊಟ್ಟಿದ್ದಾರೆ. ಏಷ್ಯಾಕಪ್, ಆಸ್ಟ್ರೇಲಿಯಾ ವಿರುದ್ದದ ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ವಿಶ್ವಕಪ್ ಪಂದ್ಯಾವಳಿಯಲ್ಲಿಯೂ ತಮ್ಮ ಫಾರ್ಮ್ ಮುಂದುವರಿಸಿದ್ದಾರೆ.

2022ರಲ್ಲಿ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಭಾರತ ತಂಡವನ್ನು ಮೊದಲ ಬಾರಿಗೆ ಮುನ್ನೆಡೆಸಿದ್ದರು. ಮೊದಲ ನಾಯಕತ್ವದಲ್ಲಿಯೇ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿದ್ದರು. ನಂತರ ಜಿಂಬಾಬ್ವೆ ಪ್ರವಾಸದಲ್ಲಿಯೂ ನಾಯಕನಾಗಿದ್ದರು. ಇದುವರೆಗೆ ಒಟ್ಟು 8 ಏಕದಿನ ಪಂದ್ಯಗಳಲ್ಲಿ ನಾಯಕನಾಗಿರುವ ರಾಹುಲ್ 8 ಪಂದ್ಯಗಳಲ್ಲಿ ಗೆಲವು ದಾಖಲಿಸಿದ್ದಾರೆ.
ಇದನ್ನೂ ಓದಿ : ಸಂಕಷ್ಟಕ್ಕೆ ಸಿಲುಕಿದ ರೋಹಿತ್ ಶರ್ಮಾ : ಭಾರತ ತಂಡ ನಾಯಕನ ವಿರುದ್ದ ದಾಖಲಾಯ್ತು 3 ಪ್ರಕರಣ
ಭಾರತ ಆಡುವ ಬಳಗ (India Playing XI)
ಕೆಎಲ್ ರಾಹುಲ್ ( ನಾಯಕ/ ವಿಕೆಟ್ ಕೀಪರ್), ಶುಭಮನ್ ಗಿಲ್, ಇಶಾನ್ ಕಿಶಾನ್, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರಿತ್ ಬೂಮ್ರಾ, ಮೊಹಮ್ಮದ್ ಸೆಮಿ, ಮೊಹಮ್ಮದ್ ಸಿರಾಜ್.
ವಿಶ್ವಕಪ್ 2023 : ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಇಶಾನ್ ಕಿಶನ್ , ಸೂರ್ಯ ಕುಮಾರ್ ಯಾದವ್.
KL Rahul is the captain of Team India in the World Cup 2023 absence of Rohit Sharma Virat Kohli and Hardik Pandya