Rahul likely to lead Team India in Sri Lanka: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಕೆ.ಎಲ್ ರಾಹುಲ್ ನಾಯಕ ?

India Vs Sri Lanka -KL Rahul :ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಈ ತಿಂಗಳಾಂತ್ಯದಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು (India tour of Sri Lanka), ಸಿಂಹಳೀಯರ ವಿರುದ್ಧ 3 ಪಂದ್ಯಗಳ ಟಿ20 ಹಾಗೂ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ.

India Vs Sri Lanka -KL Rahul :ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಈ ತಿಂಗಳಾಂತ್ಯದಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು (India tour of Sri Lanka), ಸಿಂಹಳೀಯರ ವಿರುದ್ಧ 3 ಪಂದ್ಯಗಳ ಟಿ20 ಹಾಗೂ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಶ್ರೀಲಂಕಾ ಸರಣಿಯ ಮೂಲಕ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir) ಭಾರತ ತಂಡದಲ್ಲಿ ತಮ್ಮ ಎರಡನೇ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಗೌತಮ್ ಗಂಭೀರ್ ಟೀಮ್ ಇಂಡಿಯಾ ಕೋಚ್ ಆಗುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ.

KL Rahul Lead Indian Cricket Team in Sri Lanka Tour ODI and T20 Series
Image Credit : KL Rahul Instagram

ಶ್ರೀಲಂಕಾ ವಿರುದ್ಧದ ಸೀಮಿತ ಓವರ್’ಗಳ ಕ್ರಿಕೆಟ್ ಸರಣಿಗೆ ಟಿ20 ವಿಶ್ವಕಪ್ ವಿಜೇತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma), ರನ್ ಮಷಿನ್ ವಿರಾಟ್ ಕೊಹ್ಲಿ (Virat Kohli) ಮತ್ತು ಪ್ರೀಮಿಯಂ ಫಾಸ್ಟ್ ಬೌಲರ್ ಜಸ್ಪ್ರೀತ್ ಬುಮ್ರಾ (Jasprit Bumrah) ಅವರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ.

KL Rahul Lead Indian Cricket Team in Sri Lanka Tour ODI and T20 Series
Image Credit : KL Rahul Instagram

ಹೀಗಾಗಿ ಲಂಕಾ ಸರಣಿಯಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ (Hardik Pandya) ಮತ್ತು ಕೆ.ಎಲ್ ರಾಹುಲ್ (KL Rahul) ಮುನ್ನಡೆಸುವ ಸಾಧ್ಯತೆಯಿದೆ. ಕಳೆದ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆದ ಹರಿಣಗಳ ವಿರುದ್ಧದ ಏಕದಿನ ಸರಣಿಯಲ್ಲಿ ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ಕೆ.ಎಲ್ ರಾಹುಲ್ ತಂಡಕ್ಕೆ ಸರಣಿ ಗೆದ್ದು ಕೊಟ್ಟಿದ್ದರು.

ಇದನ್ನೂ ಓದಿ : ಕಾಪು ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ : ಕರಾವಳಿಯಲ್ಲಿ ಉಡುಪಿಯ ಅಳಿಯನ ಟೆಂಪಲ್ ರನ್ !

ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ಮತ್ತು ಏಕದಿನ ಸರಣಿಗೆ ಕೆ.ಎಲ್ ರಾಹುಲ್ ಭಾರತ ತಂಡದ ನಾಯಕತ್ವ ವಹಿಸುವ ಸಾಧ್ಯತೆಯಿದೆ. ಹಾರ್ದಿಕ್ ಪಾಂಡ್ಯ ವೆಸ್ಟ್ ಇಂಡೀಸ್’ನಲ್ಲಿ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಸದಸ್ಯರಾಗಿದ್ದರು. ಆದರೆ ಕನ್ನಡಿಗ ಕೆ.ಎಲ್ ರಾಹುಲ್ ಅವರಿಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಕ್ಕಿರಲಿಲ್ಲ.

KL Rahul Lead Indian Cricket Team in Sri Lanka Tour ODI and T20 Series
Image Credit : KL Rahul Instagram

ಇದನ್ನೂ ಓದಿ : Virat Kohli: ನಿವೃತ್ತಿಯ ನಂತರ ಭಾರತ ತೊರೆಯಲಿದ್ದಾರೆ ಕಿಂಗ್ ವಿರಾಟ್ ಕೊಹ್ಲಿ 

ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳಾಪಟ್ಟಿ
ಜುಲೈ 27: ಮೊದಲ ಟಿ20
ಜುಲೈ 28: ಎರಡನೇ ಟಿ20
ಜುಲೈ 30: ಮೂರನೇ ಟಿ20

ಇದನ್ನೂ ಓದಿ : ಒಬ್ಬ ಶರ್ಮಾ exit, ಇನ್ನೊಬ್ಬ ಶರ್ಮಾ entry.. ಈತ ಯುವರಾಜ ತಯಾರು ಮಾಡಿದ ಹುಡುಗ..!

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ವೇಳಾಪಟ್ಟಿ
ಆಗಸ್ಟ್ 02: ಮೊದಲ ಏಕದಿನ
ಆಗಸ್ಟ್ 04: ಎರಡನೇ ಏಕದಿನ
ಆಗಸ್ಟ್ 07: ಮೂರನೇ ಏಕದಿನ

KL Rahul Lead Indian Cricket Team in Sri Lanka Tour ODI and T20 Series

Comments are closed.