ಮಂಗಳವಾರ, ಏಪ್ರಿಲ್ 29, 2025
HomeSportsCricketKL Rahul set to India Comeback : ಏಷ್ಯಾ ಕಪ್ ಟೂರ್ನಿಯಲ್ಲಿ ಆಡಲಿದ್ದಾರೆ ಕೆ.ಎಲ್...

KL Rahul set to India Comeback : ಏಷ್ಯಾ ಕಪ್ ಟೂರ್ನಿಯಲ್ಲಿ ಆಡಲಿದ್ದಾರೆ ಕೆ.ಎಲ್ ರಾಹುಲ್, ಮಹತ್ವದ ಮಾಹಿತಿ ಕೊಟ್ಟ ಬಿಸಿಸಿಐ

- Advertisement -

ಬೆಂಗಳೂರು: (KL Rahul set to India Comeback ) ಕೋವಿಡ್-19ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಭಾರತ ಕ್ರಿಕೆಟ್ ತಂಡದ ಸ್ಟಾರ್ ಓಪನಿಂಗ್ ಬ್ಯಾಟರ್ ಕೆ.ಎಲ್ ರಾಹುಲ್ ಏಷ್ಯಾ ಕಪ್ ಟೂರ್ನಿಯೊಂದಿಗೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರೆ. ರಾಹುಲ್ ಕಂಬ್ಯಾಕ್ ಬಗ್ಗೆ ಬಿಸಿಸಿಐ ಮಹತ್ವದ ಮಾಹಿತಿ ನೀಡಿದ್ದು, ಏಷ್ಯಾ ಕಪ್”ನಲ್ಲಿ ರಾಹುಲ್ ಆಡಲಿದ್ದಾರೆ. “ಕೆ.ಎಲ್ ರಾಹುಲ್ ಏನನ್ನೂ ಸಾಬೀತು ಪಡಿಸುವ ಅಗತ್ಯವಿಲ್ಲ. ಅವರೊಬ್ಬ ಕ್ಲಾಸ್ ಆಟಗಾರ. ಅವರು ಟಿ20 ಕ್ರಿಕೆಟ್ ಆಡಿದಾಗಲೆಲ್ಲಾ ಸ್ಪೆಷಲಿಸ್ಟ್ ಓಪನರ್ ಆಗಿಯೇ ಆಡಲಿದ್ದಾರೆ. ಭಾರತ ತಂಡದಲ್ಲೂ ಅದು ಮುಂದುವರಿಯಲಿದೆ. ಸೂರ್ಯಕುಮಾರ್ ಯಾದವ್ ಮತ್ತು ರಿಷಭ್ ಪಂತ್ ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ” ಎಂದದು ಬಿಸಿಸಿಐ ಮೂಲಗಳು ತಿಳಿಸಿವೆ.

ವೆಸ್ಟ್ ಇಂಡೀಸ್ ಪ್ರವಾಸಕ್ಕೆ ರಾಹುಲ್ ಅಲಭ್ಯರಾಗಿದ್ದ ಕಾರಣ, ಮೊದಲ ಟಿ20 ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಜೊತೆ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ರಿಷಭ್ ಪಂತ್ ಟೀಮ್ ಇಂಡಿಯಾ ಇನ್ನಿಂಗ್ಸ್ ಆರಂಭಿಸಿದ್ದರು. 2 ಹಾಗೂ 3ನೇ ಪಂದ್ಯದಲ್ಲಿ ರೋಹಿತ್ ಅವರೊಂದಿಗೆ ಮುಂಬೈ ಬ್ಯಾಟರ್ ಸೂರ್ಯಕುಮಾರ್ ಯಾದವ್ ಇನ್ನಿಂಗ್ಸ್ ಆರಂಭಿಸಿದ್ದರು. ಅಷ್ಟೇ ಅಲ್ಲ, 3ನೇ ಪಂದ್ಯದಲ್ಲಿ ಸಿಡಿಲಬ್ಬರದ 76 ರನ್ ಬಾರಿಸಿ ಭಾರತಕ್ಕೆ 7 ವಿಕೆಟ್’ಗಳ ಭರ್ಜರಿ ಗೆಲುವು ತಂದುಕೊಟ್ಟಿದ್ದರು.

ಏಷ್ಯಾ ಕಪ್ ಟೂರ್ನಿಗೆ ಕೆ.ಎಲ್ ರಾಹುಲ್ ಲಭ್ಯವಾಗಲಿರುವ ಕಾರಣ ಸೂರ್ಯಕುಮಾರ್ ಯಾದವ್ 3 ಅಥವಾ 4ನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆಯಿದೆ. ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಏಷ್ಯಾ ಕಪ್ ಟೂರ್ನಿಯಲ್ಲಿ ಆಡಲಿದ್ದು, ಮಧ್ಯಮ ಕ್ರಮಾಂಕದಲ್ಲಿ ಭಾರೀ ಸ್ಪರ್ಧೆ ಏರ್ಪಡಲಿದೆ. ರೋಹಿತ್ ಶರ್ಮಾ ಮತ್ತು ಕೆ.ಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸಲಿದ್ದು, 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, 4ನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ. ಹೀಗಾಗಿ ಶ್ರೇಯಸ್ ಅಯ್ಯರ್ ಆಡುವ ಬಳಗದಲ್ಲಿ ಸ್ಥಾನ ಕಳೆದುಕೊಳ್ಳಲಿದ್ದಾರೆ.ವಿಕೆಟ್ ಕೀಪರ್ ರಿಷಭ್ ಪಂತ್ 5 ಅಥವಾ 6ನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆಯಿದೆ.

ಏಷ್ಯಾ ಕಪ್ ಟಿ20 ಟೂರ್ನಿ ಆಗಸ್ಟ್ 27ರಂದು ಆರಂಭವಾಗಲಿದ್ದು, ಆಗಸ್ಟ್ 28ರಂದು ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.

ಏಷ್ಯಾಕಪ್ ಟಿ20 (Asia Cup 2022) ಟೂರ್ನಿಯ ವೇಳಾಪಟ್ಟಿ
Group A
ಭಾರತ Vs ಪಾಕಿಸ್ತಾನ: 28 ಆಗಸ್ಟ್, ದುಬೈ
ಭಾರತ Vs ಕ್ವಾಲಿಫೈಯರ್ ಟೀಮ್: 31 ಆಗಸ್ಟ್, ದುಬೈ
ಪಾಕಿಸ್ತಾನ Vs ಕ್ವಾಲಿಫೈಯರ್ ಟೀಮ್: 02 ಸೆಪ್ಟೆಂಬರ್, ಶಾರ್ಜಾ

Group B
ಶ್ರೀಲಂಕಾ Vs ಅಫ್ಘಾನಿಸ್ತಾನ: 27 ಆಗಸ್ಟ್, ದುಬೈ
ಬಾಂಗ್ಲಾದೇಶ Vs ಅಫ್ಘಾನಿಸ್ತಾನ: 30 ಆಗಸ್ಟ್, ಶಾರ್ಜಾ
ಶ್ರೀಲಂಕಾ Vs ಬಾಂಗ್ಲಾದೇಶ: 01 ಸೆಪ್ಟೆಂಬರ್, ದುಬೈ

ಇದನ್ನೂ ಓದಿ : India Vs Pakistan : ಭಾರತ Vs ಪಾಕಿಸ್ತಾನ 3 ಪಂದ್ಯ.. ಕ್ರಿಕೆಟ್ ಪ್ರಿಯರಿಗೆ ಡಬಲ್ ಧಮಾಕಾ ಪಕ್ಕಾ

ಇದನ್ನೂ ಓದಿ : Pandya Meets Big Brother : ವೆಸ್ಟ್ ಇಂಡೀಸ್’ನಲ್ಲಿ “ದೊಡ್ಡಣ್ಣ”ನನ್ನು ಭೇಟಿ ಮಾಡಿದ ಹಾರ್ದಿಕ್ ಪಾಂಡ್ಯ

KL Rahul set to India Comeback will play Asia Cup BCCI has given important information

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular