KL Rahul visited Bappanadu Durga parameshwari Temple : ಮಂಗಳೂರು: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ, ಕನ್ನಡಿಗ ಕೆ.ಎಲ್ ರಾಹುಲ್ ಪತ್ನಿ ಸಮೇತ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಆತಿಯಾ ಶೆಟ್ಟಿ ಹಾಗೂ ಬಾಮೈದ ಅಹಾನ್ ಶೆಟ್ಟಿ ಜೊತೆ ಮುಂಬೈನಿಂದ ಭಾನುವಾರ ಐತಿಹಾಸಿಕ ಕ್ಷೇತ್ರ ಬಪ್ಪನಾಡಿಗೆ ಆಗಮಿಸಿದ ರಾಹುಲ್ ದುರ್ಗಾಪರಮೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.

ಮಂಗಳೂರು ನಗರದ ಹೊರವಲಯದಲ್ಲಿರುವ ಮೂಲ್ಕಿ ಸಮೀಪದ ಬಪ್ಪನಾಡು ದುರ್ಗಾಪರಮೇಶ್ವರಿ ದೇವಿ, ಕೆ.ಎಲ್ ರಾಹುಲ್ ಅವರ ಮಾವ, ಬಾಲಿವುಡ್ ನಟ ಸುನೀಲ್ ಶೆಟ್ಟಿಯವರ ಮನೆ ದೇವರು. ಮೂಲ್ಕಿಯಲ್ಲಿ ಸುನೀಲ್ ಶೆಟ್ಟಿಯವರ ಮನೆಯಿದ್ದು, ಮಾವನ ಮೂಲ ಮನೆಗೆ ಪತ್ನಿಯೊಂದಿಗೆ ಆಗಮಿಸಿದ ರಾಹುಲ್ ಮನೆದೇವರ ಸನ್ನಿಧಾನಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದಾರೆ.
ಇದನ್ನೂ ಓದಿ : KL Rahul Net Worth: ಕನ್ನಡಿಗ ಕೆ.ಎಲ್ ರಾಹುಲ್ ಬಳಿ ಇದೆ ಶತಕೋಟಿ ಆಸ್ತಿ!
ಇಂದು ರಾತ್ರಿ ಮೂಲ್ಕಿಯ ಸುನೀಲ್ ಶೆಟ್ಟಿಯವರ ಮನೆಯಲ್ಲೇ ವಾಸ್ತವ್ಯ ಹೂಡಲಿರುವ ರಾಹುಲ್ ಸೋಮವಾರ ಬೆಳಗ್ಗೆ ಮಂಗಳೂರಿನಿಂದ ಮುಂಬೈಗೆ ಪ್ರಯಾಣಿಸಲಿದ್ದಾರೆ. ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದ ರಾಹುಲ್, ಮುಂಬರುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್’ಗೆ ಕಂಬ್ಯಾಕ್ ಮಾಡಲು ಸಜ್ಜಾಗಿದ್ದಾರೆ.

ಇದನ್ನೂ ಓದಿ : ಭಾರತ ಕ್ರಿಕೆಟ್ ತಂಡದ ಭೀಮಾರ್ಜುನರು ಇನ್ನೆಂದೂ ಟಿ20ಯಲ್ಲಿ ಜೊತೆಯಾಗಿ ಆಡಲಾರರು..!
ಮುಂದಿನ ತಿಂಗಳು ಟೀಮ್ ಇಂಡಿಯಾ ಶ್ರೀಲಂಕಾದಲ್ಲಿ ಆತಿಥೇಯರ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದ್ದು, ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ, ವೇಗಿ ಜಸ್ಪ್ರೀತ್ ಬುಮ್ರಾ ಸಹಿತ ಟಿ20 ವಿಶ್ವಕಪ್ ಗೆದ್ದ ತಂಡದಲ್ಲಿದ್ದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಕೆ.ಎಲ್ ರಾಹುಲ್ ನಾಯಕರಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ : Rahul Dravid: ಬಿಸಿಸಿಐ ತನಗೆ ಕೊಟ್ಟ ಎರಡೂವರೆ ಕೋಟಿಯನ್ನೇ ಬೇಡ ಎಂದ ರಾಹುಲ್ ದ್ರಾವಿಡ್ ; ಗ್ರೇಟ್ ವಾಲ್ ಕಾರ್ಯಕ್ಕೆ ಜನಮೆಚ್ಚುಗೆ
KL Rahul visited Bappanadu Durga parameshwari Temple with his wife Athiya Shetty