ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಮನೀಶ್ ಪಾಂಡೆ ದಂಪತಿ ಭೇಟಿ

0

ಕುಕ್ಕೆ ಸುಬ್ರಹ್ಮಣ್ಯ : ಟೀಂ ಇಂಡಿಯಾ ಆಟಗಾರ ಹಾಗೂ ಕರ್ನಾಟಕ ಏಕದಿನ ತಂಡದ ನಾಯಕ ಮನೀಶ್ ಪಾಂಡೆ ದಂಪತಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

ಪತ್ನಿ ಆಶ್ರಿತಾ ಶೆಟ್ಟಿ ಜೊತೆಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಮನೀಶ್ ಪಾಂಡೆ ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದಿದ್ದಾರೆ. ಆದಿ ಸುಬ್ರಹ್ಮಣ್ಯ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಮನೀಶ್ ಪಾಂಡೆ ದಂಪತಿ ಆಶ್ಲೇಷ ಪೂಜೆಯನ್ನು ಸಲ್ಲಿಸಿದರು.

ಕಳೆದ ಡಿಸೆಂಬರ್ ತಿಂಗಳಲ್ಲಿ ಕ್ರಿಕೆಟಿಗ ಮನೀಶ್ ಪಾಂಡೆ ತುಳುನಾಡ ಬೆಡಗಿ ತಮಿಳು ಚಿತ್ರನಟಿ ಆಶ್ರಿತಾ ಶೆಟ್ಟಿ ಅವರೊಂದಿಗೆ ಮುಂಬೈನಲ್ಲಿ ವಿವಾಹವಾಗಿದ್ದರು.

ತನ್ನ ಗೆಳೆಯನ ಜೊತೆಗೆ ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿದ್ದ ಮನೀಶ್ ಪಾಂಡೆ ದಂಪತಿ ಖಾಗಿ ಹೋಟೆಲ್ ನಲ್ಲಿ ತಂಗಿದ್ದರು. ಇಂದು ಬೆಳಗ್ಗೆಯಿಂದಲೇ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜಾ ಕಾರ್ಯದಲ್ಲಿ ಮನೀಶ್ ಪಾಂಡೆ ಹಾಗೂ ಆಶ್ರಿತಾ ಶೆಟ್ಟಿ ಪಾಲ್ಗೊಂಡಿದ್ದರು.

Leave A Reply

Your email address will not be published.