Milkha Singh : ಫ್ಲೈಯಿಂಗ್ ಸಿಖ್ ಖ್ಯಾತಿಯ ಅಥ್ಲೀಟ್ ಮಿಲ್ಕಾ ಸಿಂಗ್ ನಿಧನ : ಪ್ರಧಾನಿ ಮೋದಿ ಸಂತಾಪ

ಚಂಡೀಗಢ : ಫ್ಲೈಯಿಂಗ್ ಸಿಖ್ ಖ್ಯಾತಿಯ ಖ್ಯಾತ ಅಥ್ಲೀಟ್ ಮಿಲ್ಕಾ ಸಿಂಗ್ ಅವರು ನಿಧನರಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ರಾತ್ರಿ 11.30ಕ್ಕ ನಿಧನರಾಗಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ 91 ವರ್ಷದ ಮಿಲ್ಖಾ ಸಿಂಗ್ ಅವರನ್ನು ಪಿಜಿಐಎಂಇಆರ್ ಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಪಡೆದ ನಂತರದಲ್ಲಿ ಕೊರೊನಾ ನೆಗೆಟಿವ್ ಬಂದಿತ್ತು. ಆದ್ರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

1956 ಮತ್ತು 1964ರ ಒಲಿಂಪಿಕ್ಸ್ ಭಾರತ ಪ್ರತಿನಿಧಿಸಿದ್ದರು. 1958 ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ, 1960ರ ರೋಮ್ ಒಲಿಂಪಿಕ್ಸ್ ನಲ್ಲಿ 400 ಮೀಟರ್ ಓಟದಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಿ, ಏಷ್ಯನ್ ಗೇಮ್ಸ್ ನಲ್ಲಿ ನಾಲ್ಕು ಬಾರಿ ಚಿನ್ನದ ಪದಕ ಪಡೆದ ಖ್ಯಾತಿಗೆ ಪಾತ್ರರಾಗಿದ್ದಾರೆ.

ಮಿಲ್ಖಾ ಸಿಂಗ್ ಅವರ ಪತ್ನಿ ಭಾರತ ವಾಲಿಬಾಲ್ ತಂಡ ಮಾಜಿ ನಾಯಕಿ ನಿರ್ಮಲಾ ಕೌರ್ ಸಹ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದರು. ಮಿಲ್ಖಾ ಸಿಂಗ್ ಅವರು ತಮ್ಮ ಮಗ ಗಾಲ್ಫ್ ಆಟಗಾರ ಜೀವಾ ಮಿಲ್ಖಾ ಸಿಂಗ್ ಹಾಗೂ ಮಗಳನ್ನು ಅಗಲಿದ್ದಾರೆ. ಮಿಲ್ಖಾ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

Comments are closed.