ದೆಹಲಿ : Mithali Raj : ಟೀಂ ಇಂಡಿಯಾ ಕ್ರಿಕೆಟ್ ಮಹಿಳಾ ವಿಭಾಗದ ದಿಗ್ಗಜೆ ಮಿಥಾಲಿ ರಾಜ್ ಇಂದು ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ನಿಮ್ಮೆಲ್ಲರ ಪ್ರೀತಿ ಹಾಗೂ ಬೆಂಬಲಕ್ಕೆ ಧನ್ಯವಾದಗಳು ಎಂದು ಮಿಥಾಲಿ ರಾಜ್ ಟ್ವೀಟ್ ಮಾಡಿದ್ದಾರೆ. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಕೀರ್ತಿ ಇವರದ್ದಾಗಿದೆ. ಮಿಥಾಲಿ ರಾಜ್ 232 ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದಾರೆ. ಇಲ್ಲಿಯವರೆಗೆ ಮಿಥಾಲಿ ರಾಜ್ 7805 ರನ್ಗಳನ್ನು ಗಳಿಸಿದ್ದಾರೆ. ಕೆಲವು ಸಮಯದ ಹಿಂದೆ ಮಿಥಾಲಿ ರಾಜ್ ಟಿ 20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದರು. ಮಿಥಾಲಿ ರಾಜ್ 1999ರಲ್ಲಿ ಐರ್ಲೆಂಡ್ ವಿರುದ್ಧದ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದಾರೆ. ಈ ವರ್ಷದ ಆರಂಭದಲ್ಲಿ ನ್ಯೂಜಿಲೆಂಡ್ನಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ನಲ್ಲಿಟೀಂ ಇಂಡಿಯಾ ತಂಡದ ನಾಯಕತ್ವ ವಹಿಸಿದ್ದರು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಸೆಮಿ ಫೈನಲ್ನಲ್ಲಿ ಅರ್ಹತೆ ಪಡೆಯುವಲ್ಲಿ ವಿಫಲವಾಗಿತ್ತು .
Thank you for all your love & support over the years!
— Mithali Raj (@M_Raj03) June 8, 2022
I look forward to my 2nd innings with your blessing and support. pic.twitter.com/OkPUICcU4u
.
ಮಿಥಾಲಿ ರಾಜ್ ನೇತೃತ್ವದಲ್ಲಿ ಟೀಂ ಇಂಡಿಯಾವು 2017ರಲ್ಲಿ ಐಸಿಸಿ ಮಹಿಳಾ ವಿಶ್ವಕಪ್ನಲ್ಲಿ ಫೈನಲ್ ಪ್ರವೇಶಿಸಿತ್ತು. ಈ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾವು ಸೋಲನ್ನು ಅನುಭವಿಸಿತ್ತು. 2005ರಲ್ಲಿ ಐಸಿಸಿ ಮಹಿಳಾ ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸೋತಾಗಲೂ ಸಹ ಮಿಥಾಲಿ ರಾಜ್ ಟೀಂ ಇಂಡಿಯಾದ ನಾಯಕಿಯಾಗಿದ್ದರು.
ಮಿಥಾಲಿ ರಾಜ್ 89 ಟಿ 20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 2364 ರನ್ಗಳನ್ನು ಗಳಿಸಿದ್ದಾರೆ. ಇದು ಇಲ್ಲಿಯವರೆಗಿನ ಭಾರತೀಯ ಮಹಿಳಾ ಕ್ರಿಕೆಟ್ ಆಟಗಾರ್ತಿ ಗಳಿಸಿದ ಅತೀ ಹೆಚ್ಚು ರನ್ ಆಗಿದೆ. ಮಿಥಾಲಿ 12 ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದಾರೆ. ಹಾಗೂ ಒಟ್ಟು 699 ರನ್ಗಳನ್ನು ಗಳಿಸಿದ್ದಾರೆ.
ಎಲ್ಲಾ ಪ್ರಯಾಣದಂತೆ ಈ ಪ್ರಯಾಣವು ಕೂಡ ಕೊನೆಯಾಗಲೇಬೇಕು. ಈ ದಿನದಂದು ನಾನು ಎಲ್ಲಾ ಮಾದರಿಯ ಕ್ರಿಕೆಟ್ ಪಂದ್ಯಗಳಿಂದ ನಿವೃತ್ತಿ ಪಡೆಯುತ್ತಿದ್ದೇನೆ. ಪ್ರತಿ ಬಾರಿ ನಾನು ಮೈದಾನಕ್ಕೆ ಕಾಲಿಟ್ಟಾಗ, ಭಾರತವನ್ನು ಗೆಲ್ಲಲು ಸಹಾಯ ಮಾಡುವ ಉದ್ದೇಶದಿಂದ ನಾನು ನನ್ನ ಅತ್ಯುತ್ತಮವಾದದ್ದನ್ನು ನೀಡಿದ್ದೇನೆ. ತ್ರಿವರ್ಣ ಧ್ವಜವನ್ನು ಪ್ರತಿನಿಧಿಸುವ ಅವಕಾಶವನ್ನು ನಾನು ಯಾವಾಗಲೂ ಗೌರವಿಸುತ್ತೇನೆ.
ಆದರೆ ಇದೀಗ ನನಗೆ ಟೀಂ ಇಂಡಿಯಾ ತಂಡವು ಪ್ರತಿಭಾವಂತ ಸಮರ್ಥ ಯುವ ಆಟಗಾರರ ಕೈಯಲ್ಲಿದೆ ಹಾಗೂ ಭಾರತೀಯ ಕ್ರಿಕೆಟ್ನ ಭವಿಷ್ಯವು ಉಜ್ವಲವಾಗಿರುವುದರಿಂದ ನನ್ನ ಆಟದ ವೃತ್ತಿ ಜೀವನಕ್ಕೆ ತೆರೆ ಎಳೆಯಲು ಇದು ಸೂಕ್ತ ಸಮಯ ಎಂದು ನಾನು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಇದನ್ನು ಓದಿ : Set Up UPI: ಹಣ ವರ್ಗಾಯಿಸಲು ಯುಪಿಐ ಸೆಟ್ ಮಾಡುವುದು ಹೇಗೆ?
ಇದನ್ನೂ ಓದಿ : Student Gang Rape : 10 ನೇ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ
Mithali Raj Announces Retirement From All Forms Of International Cricket