ಬೂಮ್ರಾ, ಬೋಲ್ಟ್ ಮ್ಯಾಜಿಕ್ , ರೋಹಿತ್ ಶರ್ಮಾ ಅಬ್ಬರ :ಐಪಿಎಲ್ ನಲ್ಲಿ ಮೊದಲ ಗೆಲುವು ಕಂಡ ಮುಂಬೈ ಇಂಡಿಯನ್ಸ್

0

ಅಬುಧಾಬಿ : ಜಸ್ಪ್ರೀತ್ ಬೂಮ್ರಾ, ಟ್ರೆನ್ಟ್ ಬೋಲ್ಟ್ ಮಾರಕ ದಾಳಿ ಹಾಗೂ ರೋಹಿತ್ ಶರ್ಮಾ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ದ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಐಪಿಎಲ್ ನಲ್ಲಿ ತನ್ನ ಗೆಲುವಿನ ಅಭಿಯಾನ ಆರಂಭಿಸಿದೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಡಿ ಕಾಕ್ ಮೂಲಕ ಆರಂಭಿಕ ಆಘಾತ ಎದುರಾಗಿತ್ತು. ಆದರೆ ನಂತರದಲ್ಲಿ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ 20 ಓವರಿನಲ್ಲಿ 195 ರನ್ ಗಳಿಸಿದೆ.

ಈ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆರಂಭದಿಂದಲೇ ಕುಂಟುತ್ತಾ ಸಾಗಿತ್ತು. ಪರಿಣಾಮ ನಿಗದಿತ 20 ಓವರಿನಲ್ಲಿ 9 ವಿಕೆಟ್ ಕಳೆದುಕೊಂಡು 146 ರನ್ ಗಳಿಸಿ 49 ರನ್ ಅಂತರದಲ್ಲಿ ಸೋಲನ್ನು ಒಪ್ಪಿಕೊಂಡಿತು.

ಟ್ರೆಂಟ್ ಬೌಲ್ಟ್ 4 ಓವರ್ ಗಳಲ್ಲಿ 30 ರನ್ ನೀಡಿ ಎರಡು ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾ ಅವರು ಒಂದೇ ಓವರ್ ನಲ್ಲಿ 2 ವಿಕೆಟ್ ಪಡೆಯುವ ಮೂಲಕ ಕೊಲ್ಕತ್ತಾ ತಂಡಕ್ಕ ಆಘಾತ ನೀಡಿದ್ರು.

ಪಂದ್ಯದ ಆರಂಭದಿಂದಲೂ ಮೇಲುಗೈ ಸಾಧಿಸಿದ ಮುಂಬೈ ಬೌಲರ್ ಗಳು ಕೋಲ್ಕತ್ತಾವನ್ನು ಪವರ್ ಪ್ಲೇನಲ್ಲಿ ಕೇವಲ 33 ರನ್ ಒಳಗೆ ಕಟ್ಟಿ ಹಾಕಿದರು.

ಅಂತಿಮವಾಗಿ 20 ಓವರಿನಲ್ಲಿ 9 ವಿಕೆಟ್ ಕಳೆದುಕೊಂಡು 146 ರನ್ ಗಳಿಸಿ 49 ರನ್ ಅಂತರದಲ್ಲಿ ಸೋಲನ್ನು ಒಪ್ಪಿಕೊಂಡಿತು.

Leave A Reply

Your email address will not be published.